ಅನಾಥ ಮಕ್ಕ ಳಿಗೆ ಹುಚ್ಚೇಶ್ವರ ಶ್ರೀಗಳಿಂದ ಉಚಿತ ಶಿಕ್ಷಣ
ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳ ಸಂಕಷ್ಟಕ್ಕೆ ಸ್ಪಂದನೆ
Team Udayavani, May 24, 2021, 5:24 PM IST
ಶ್ರೀಶೈಲ ಕೆ. ಬಿರಾದಾರ
ಬಾಗಲಕೋಟೆ: ಕೊರೊನಾ ಎರಡನೇ ಅಲೆ ಎಂಬ ಮಹಾಮಾರಿ ಹಲವರನ್ನು ಹಲವು ರೀತಿಯ ಸಂಕಷ್ಟಕ್ಕೆ ದೂಡುತ್ತಿದೆ. ಇಡೀ ಕುಟುಂಬವನ್ನು ಬಲಿ ಪಡೆದು ಮಕ್ಕಳನ್ನು ಅನಾಥ ಮಾಡುತ್ತಿದೆ. ಕೊರೊನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಜಿಲ್ಲೆಯ ಪ್ರತಿಷ್ಠಿತ ಮಠವೊಂದು ಮುಂದೆ ಬಂದಿದೆ.
ಹೌದು. ಹುನಗುಂದ ತಾಲೂಕಿನ ಕಮತಗಿ-ಕೋಟೆಕಲ್‌ದ ಪ್ರತಿಷ್ಠಿತ ಹುಚ್ಚೇಶ್ವರ ಸಂಸ್ಥಾನಮಠದ ಪೀಠಾಧ್ಯಕ್ಷರೂ ಹಾಗೂ ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಶ್ರೀ ಹುಚ್ಚೇಶ್ವರ ಸ್ವಾಮೀಜಿ ಇಂತಹದೊಂದು ವಿನೂತನ ಸೇವೆಗೆ ಮುಂದಾಗಿದ್ದು, ಇಂತಹ ಸಂಕಷ್ಟಕ್ಕೊಳಗಾದ ಮಕ್ಕಳು ಜಿಲ್ಲೆಯ ಯಾವುದೇ ಭಾಗದಲ್ಲಿರಲಿ ಅವರನ್ನು ಪತ್ತೆ ಮಾಡಲು ಭಕ್ತವೃಂದಕ್ಕೆ ನಿರ್ದೇಶನ ನೀಡಿದ್ದಾರೆ.
ಸಂಪೂರ್ಣ ಉಚಿತ ಶಿಕ್ಷಣ: ಕೊರೊನಾ ದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸವನ್ನು ಶ್ರೀಮಠ ಹಾಗೂ ಹುಚ್ಚೇಶ್ವರ ವಿದ್ಯಾವರ್ಧಕ ಸಂಘ ನೋಡಿಕೊಳ್ಳಲಿದೆ. ಕೋವಿಡ್ ಕಾರಣದಿಂದ ಪೋಷಕರನ್ನು ಕಳೆದುಕೊಂಡು ನೋವಿನಲ್ಲಿರುವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಈ ರೀತಿ ತೊಂದರೆ ಯಲ್ಲಿರುವ ಮಕ್ಕಳ ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಶ್ರೀಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.