ರೈತರ ಹೊಲಗಳಲ್ಲಿ ಫಲವತ್ತತೆಯ ಪರ್ವ!

ಕೆರೆಯ ಹೂಳಿಗೆ ಎಲ್ಲಿಲ್ಲದ ಬೇಡಿಕೆ­ ! ಉಚಿತ ಹೂಳು ಪಡೆಯಲು ರೈತರ ಉತ್ಸಾಹ

Team Udayavani, Mar 19, 2021, 9:02 PM IST

hgdgd

ಮುಧೋಳ: ಸಮಾಜಮುಖೀ ಕಾರ್ಯಗಳಿಂದ ನಾಡಿನಾದ್ಯಂತ ಹೆಸರು ಮಾಡಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೈಗೊಂಡಿರುವ ಕೆರೆ ಹೂಳೆತ್ತುವ ಕಾರ್ಯದಿಂದ ಸುತ್ತಲಿನ ನೂರಾರು ರೈತರ ಭೂಮಿಯಲ್ಲಿ ಮತ್ತೆ ಫಲವತ್ತತೆ ಜೀವ ಪಡೆದುಕೊಳ್ಳುತ್ತಿದೆ.

ಮೆಟಗುಡ್ಡ ಗ್ರಾಮದಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಧರ್ಮಸ್ಥಳ ಸಂಸ್ಥೆ ಮುಂದಾಗಿದ್ದು, ಸಂಸ್ಥೆ ಕಾರ್ಯದಿಂದ ಸ್ಥಳೀಯ ನಾಯಕರಿಗೆ ಹೆಚ್ಚಿನ ಅನುಕೂಲವಾಗಿದೆ. ಕೆರೆಯ ಹೂಳನ್ನು ರೈತರು ತಮ್ಮ ಹೊಲಗಳಿಗೆ ಉಚಿತವಾಗಿ ಸಾಗಿಸಿಕೊಳ್ಳುತ್ತಿರುವುದರಿಂದ ರೈತರ ಹೊಲಗಳಲ್ಲಿ ಫಲವತ್ತತೆ ಹೆಚ್ಚುತ್ತಿದೆ. ಅಂದಾಜು 60ಕ್ಕೂ ಹೆಚ್ಚು ವಿಸ್ತಾರದಲ್ಲಿ ಹರಡಿಕೊಂಡಿರುವ ಮೆಟಗುಡ್ಡ ಕೆರೆ ತನ್ನದೇಯಾದ ಇತಿಹಾಸವನ್ನು ಹೊಂದಿದೆ.

ಬರಗಾಲದ ಹಿನ್ನೆಲೆ ಕಳೆದ ಹಲವು ದಶಕಗಳಿಂದ ಕೆರೆ ಭರ್ತಿಯಾಗಿರಲಿಲ್ಲ. ಆದರೆ ಕಳೆದ ವರ್ಷ ಭರಪೂರ ಮಳೆಯಾಗಿದ್ದರಿಂದ ಕೆರೆಯಲ್ಲಿ ಹೆಚ್ಚಿನ ಮಟ್ಟದಲ್ಲಿ ನೀರು ಸಂಗ್ರಹಗೊಂಡಿದೆ. ಕೆರೆಯಲ್ಲಿ ನೀರಿನಿಂದ ಸುತ್ತಲಿನ ನೂರಾರು ಎಕರೆ ಜಮೀನು ನೀರಾವರಿ ಸೌಲಭ್ಯ ಪಡೆದುಕೊಳ್ಳುತ್ತಿವೆ.

ಉಚಿತ ಮಣ್ಣು ವಿತರಣೆ: ಹಲವಾರು ದಶಕಗಳಿಂದ ಕೆರೆಯಲ್ಲಿ ಹೂಳು ಸಂಗ್ರಹಗೊಂಡಿದ್ದ ಹೂಳು ಎತ್ತಲು ಮುಂದಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಕಳೆದ ಹದಿನೈದು ದಿನದಿಂದ ನಿರಂತರವಾಗಿ ಹೂಳೆತ್ತುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಲಕ್ಷಾಂತರ ರೂ. ವೆಚ್ಚದಲ್ಲಿ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿರುವ ಸಂಸ್ಥೆ ಕೆರೆಯಲ್ಲಿನ ಹೂಳನ್ನು ರೈತರಿಗೆ ಉಚಿತವಾಗಿ ನೀಡುವ ಮೂಲಕ ರೈತರ ಭೂಮಿಯ ಫಲವತ್ತತೆ ಹೆಚ್ಚಿಸುವ ಕಾರ್ಯಕ್ಕೆ ಮುಂದಾಗಿದೆ.

ಗ್ರಾಮದ ರೈತರು ತಮಗೆ ಕೆರಯ ಹೂಳು ಬೇಕಾದರೆ ಟ್ರ್ಯಾಕ್ಟರ್‌ ಬಾಡಿಗೆ ಅಥವಾ ಸ್ವಂತ ವಾಹನ ತೆಗೆದುಕೊಂಡು ಕೆರೆಗೆ ಹೋದರೆ ಉಚಿತವಾಗಿ ವಾಹನಕ್ಕೆ ಹೂಳನ್ನು ತುಂಬಲಾಗುತ್ತಿದೆ. ಇದರಿಂದಾಗಿ ಸುತ್ತಲಿನ ರೈತರ ತಮ್ಮ ಜಮೀನುಗಳಲ್ಲಿನ ಫಲವತ್ತತೆ ವೃದ್ಧಿಯಾಗುತ್ತಿದೆ.

ಲಕ್ಷಾಂತರೂ ರೂ. ವ್ಯಯ:

ಹಲವಾರು ದಶಕದಿಂದ ಕೆರೆಯಲ್ಲಿ ಹೂಳು ತುಂಬಿಕೊಂಡಿದೆ. ಸಾಕಷ್ಟು ವಿಸ್ತಾರ ಹೊಂದಿರುವ ಕೆರಯಲ್ಲಿನ ಹೂಳೆತ್ತುವ ಕಾರ್ಯಕ್ಕೆ ಧರ್ಮಸ್ಥಳ ಸಂಸ್ಥೆ 11,60,000 ರೂ. ವ್ಯಯಿಸುತ್ತಿದೆ. ಒಮ್ಮೆ ಕೆರೆಯಲ್ಲಿನ ಹೂಳೆತ್ತಿದರೆ ಮುಂದಿನ ಅನೇಕ ವರ್ಷಗಳ ಕಾಲ ಸುತ್ತಲಿನ ಜಮೀನುಗಳಿಗೆ ನೀರಾವರಿ ಹಾಗೂ ಪ್ರಾಣಿ ಪಕ್ಷಿಗಳಿಗೆ ಕುಡಿಯಲು ನೀರು ಒದಗಿಸಿದಂತಾಗುತ್ತದೆ.

ಅಂತರ್ಜಲ ವೃದ್ಧಿಗೆ ಸಹಕಾರಿ:

ಕೆರಯಲ್ಲಿನ ಹೂಳೆತ್ತುವುದರಿಂದ ಭೂಮಿಯಲ್ಲಿ ಅಂತರ್ಜಲ ವೃದ್ಧಿಗೆ ಸಹಕಾರಿಯಾಗುತ್ತದೆ. ಅಂತರ್ಜಲ ವೃದ್ಧಿಯಿಂದ ಭೂಮಿಯ ತೇವಾಂಶ ಹೆಚ್ಚುತ್ತದೆ ಎಂಬುದು ಗ್ರಾಮಸ್ಥರ ಅಭಿಪ್ರಾಯ. ಗ್ರಾಮದ ರೈತರಿಗೆ ಆದ್ಯತೆ: ಸದ್ಯ ಕೆರೆಯಲ್ಲಿ ಒಂದು ಹಿಟಾಚಿ ಮೂಲಕ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಆದರೆ ಸದ್ಯ ಹೂಳನ್ನು ಗ್ರಾಮಸ್ಥರ ಜಮೀನುಗಳಿಗೆ ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮದ ರೈತರ ಬೇಡಿಕೆ ಕಡಿಮೆಯಾದರೆ ಬೇರೆ ಗ್ರಾಮದ ರೈತರಿಗೆ ಪೂರೈಸಲು ಕ್ರಮ ಕೈಗೊಳ್ಳಲಾಗುತ್ತದೆ. ನೂರಾರು ಟ್ರಾÂಕ್ಟರ್‌ಗಳ ಲೋಡ್‌: ಕೆರೆಯಲ್ಲಿನ ಹೂಳನ್ನು ತಮ್ಮ ಜಮೀನುಗಳಿಗೆ ಹಾಕಿಸಲು ರೈತರು ತಾ ಮುಂದು ನಾ ಮುಂದು ಎಂದು ಮುಗಿಬೀಳುತ್ತಿದ್ದಾರೆ. ಇದರಿಂದಾಗಿ ನಿತ್ಯ 200ರಿಂದ 250 ಟ್ರ್ಯಾಕ್ಟರ್‌ ಲೋಡ್‌ ಮಾಡಲಾಗುತ್ತಿದೆ. ಒಟ್ಟಿನಲ್ಲಿ ಒಂದು ಕಾರ್ಯದಿಂದ ಹಲವಾರು ಸಮಾಜಮುಖೀ ಕಾರ್ಯಕ್ಕೆ ಮುಂದಾಗಿರುವ ಧರ್ಮಸ್ಥಳ ಸಂಸ್ಥೆ ಕಾರ್ಯಕ್ಕೆ ತಾಲೂಕಿನಾದ್ಯಂತ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿವೆ.

ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.