ಔರಾದ್ಕರ ವರದಿ ಪೂರ್ಣ ಜಾರಿಗೊಳಿಸಿ: ಹೆಗಡೆ

Team Udayavani, Jan 12, 2020, 11:11 AM IST

bk-tdy-2

ಬಾಗಲಕೋಟೆ: ಪೊಲೀಸರ ಹಿತರಕ್ಷಣೆಗಾಗಿ ರಾಘವೇಂದ್ರ ಔರಾದ್ಕರ್‌ ವರದಿಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಹೋರಾಟಗಾರ, ವಕೀಲ ಯಲ್ಲಪ್ಪ ಹೆಗಡೆ ಒತ್ತಾಯಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಔರಾದ್ಕರ್‌ ವರದಿಯಲ್ಲಿನ ಯಾವ ಅಂಶವೂ ಸೇವಾನಿರತ ಪೊಲೀಸರಿಗೆ ಪೂರಕವಾಗಿ ಮತ್ತು ಅನುಕೂಲಕರವಾಗಿ ಪರಿ‌ಣಮಿಸಿಲ್ಲ. ಈ ವರದಿಯಿಂದ ಸೇವಾನಿರತ ಹಿರಿಯರ ಪಾಲಿಗೆ ಮರಣ ಶಾಸನವಾಗಿದೆ ಎಂದು ಬಹುತೇಕ ಪೊಲೀಸರು ಅಳಲು ತೋಡಿಕೊಂಡಿದ್ದಾರೆ ಎಂದರು. 2016ರಲ್ಲಿ ಔರಾದ್ಕರ್‌ ವರದಿ ಸರ್ಕಾರದ ಕೈ ಸೇರಿದಾಗ ಪೊಲೀಸರಿಗೆ ಶೇ.30 ರಿಂದ ಶೇ.35 ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಲಾಗಿದೆ ಎಂದು ಅಂದಿನ ಗೃಹಮಂತ್ರಿ ಜಿ.ಪರಮೇಶ್ವರ ಹಲವು ಬಾರಿ ಹೇಳಿದ್ದರು. ಇಂದಿನ ಸರ್ಕಾರ ವರದಿಯ ಎಲ್ಲ ಶಿಫಾರಸ್ಸು‌ಳನ್ನು ಜಾರಿಗೆ ತರಲಾಗಿದೆ ಎಂದು ಮಖ್ಯಮಂತ್ರಿಗಳು ಹೇಳಿದ್ದಾರೆ.

ವರದಿ ಜಾರಿಗೆಗೊಂಡರು ಪೊಲೀಸಗೂ ಅನ್ಯಾಯವಾಗುತ್ತಿರುವುದು ಯಾರಿಂದ. ಔರಾದ್ಕರ್‌ ವರದಿಯಲ್ಲಿ ಲೋಪವಿತ್ತೆ. ಸರ್ಕಾರ ವರದಿಯನ್ನು ಜಾರಿಗೊಳಿಸುವ ಸಂದರ್ಭದಲ್ಲಿ ತಿರುಚಿ ತನ್ನ ಅನುಕೂಲಕ್ಕೆ ತಕ್ಕಂತೆ ಪರಿವರ್ತಿಸಲಾಗಿದೆಯೇ ಎಂದು ಪ್ರಶ್ನಿಸಿದರು.

ಪೊಲೀಸರು ತೆಲಂಗಾಣ ಮಾದರಿಯ ವೇತನ ಶ್ರೇಣಿಗೆ ಆಗ್ರಹಿಸಿದ್ದರು. ತೆಲಂಗಾಣ, ಕೇರಳ, ಪಂಜಾಬ್‌ ರಾಜ್ಯಗಳಲ್ಲಿ ಪೊಲೀಸರಿಗೆ ಉತ್ತಮ ವೇತನ ಶ್ರೇಣಿಯಜೊತೆಗೆ ಮಾನವೀಯ ಸೌಲಭ್ಯ ನೀಡಿವೆ. ಆದರೆ ಕರ್ನಾಟಕದಲ್ಲಿ ಪೊಲೀಸರಿಗೆ ಮೂರು ವರ್ಷ ಚಾತಕ ಪಕ್ಷಿಯಂತೆ ಕಾಯಿಸಿ ಕೊನೆಗೊಮ್ಮೆ ತೆಗೆದುಕೊಂಡ ನಿರ್ಧಾರ ಪೊಲೀಸರ ಮತ್ತಷ್ಟು ಅಸಹನೆಗೆ ಕಾರಣವಾಗಿದೆ. ಸರ್ಕಾರ ಕಳೆದ ಎರಡು ತಿಂಗಳಿನ ವೇತನವನ್ನು ಎಲ್ಲ ಪೊಲೀಸ ಸಿಬ್ಬಂದಿಗಳಿಗೆ ಏಕ ರೂಪವಾಗಿ ನೀಡಬೇಕು. ಇಲಾಖೆಯಲ್ಲಿನ ವೇತನ ತಾರತಮ್ಯ ನೀತಿ ನಿವಾರಿಸಬೇಕು. ಇಲ್ಲದಿದ್ದರೆ ಸರ್ಕಾರದವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಶ್ರೀಶೈಲನಾಯಕ, ಮುಖಂಡರಾದ ಗೋವಿಂದ ಮೆಟಗುಡ್ಡ, ಸೋಮಲಿಂಗ ಮದರಖಂಡಿ, ಟಿ.ಎಂ. ನದಾಫ್‌, ಸಹದೇವ ಕಣಬೂರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.