ನಾಳೆ ಕೃಷ್ಣೆಗಾಗಿ ನಿರ್ಣಾಯಕ ಗಾಂಧಿ ನಡಿಗೆ

ನಮ್ಮ ಯುಕೆಪಿ ಯೋಜನೆ ಆರು ದಶಕ ಕಳೆದರೂ ಪೂರ್ಣಗೊಳ್ಳುತ್ತಿಲ್ಲ.

Team Udayavani, Oct 1, 2021, 6:45 PM IST

ನಾಳೆ ಕೃಷ್ಣೆಗಾಗಿ ನಿರ್ಣಾಯಕ ಗಾಂಧಿ ನಡಿಗೆ

ಬಾಗಲಕೋಟೆ: ಕಳೆದ ಆರು ದಶಕಗಳಿಂದ ವಿಳಂಬವಾಗಿರುವ ಯುಕೆಪಿ ಯೋಜನೆ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಉತ್ತರ ಕರ್ನಾಟಕದ ಸ್ವಾಭಿಮಾನ ವೇದಿಕೆಯಿಂದ ಅ.2ರಂದು ಬೆಳಗ್ಗೆ 8 ಗಂಟೆಗೆ ಪಕ್ಷಾತೀತ ಪಾದಯಾತ್ರೆ ಆರಂಭಗೊಳ್ಳಲಿದೆ ಎಂದು ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯ ಹಿರಿಯರೂ ಆಗಿರುವ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ಅನಗವಾಡಿಯ ಘಟಪ್ರಭಾ ನದಿಯಿಂದ ಆರಂಭಗೊಂಡು ಕೊರ್ತಿ ಕೊಲ್ಹಾರ ಸೇತುವೆ ಬಳಿಯ ಕೃಷ್ಣಾ ನದಿವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಆರು ದಶಕಗಳಿಂದ ವಿಳಂಬವಾದ ಈ ಯೋಜನೆ ತ್ವರಿತವಾಗಿ ಪೂರ್ಣಗೊಳಿಸುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯೋಜನಾ ಸಂತ್ರಸ್ತರು, ಫಲಾನುಭವಿಗಳು ಅಲೆದು ಬಸವಳಿದಿದ್ದಾರೆ.

ಈ ಸಂದರ್ಭದಲ್ಲಿ ಮತ್ತೂಮ್ಮೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸದಿದ್ದರೆ ಕುಂಭಕರ್ಣ ನಿದ್ರೆಯಲ್ಲಿದ್ದ ಸರ್ಕಾರ ಸಂತ್ರಸ್ತರ ಆಶೋತ್ತರಗಳಿಗೆ ಬೆಲೆ ಕೊಡಲ್ಲ. ಹೀಗಾಗಿ ಸರ್ಕಾರದ ಕಣ್ಣು ತೆರೆಸುವ ದೃಷ್ಟಿಸುವ ನಾಡಿನ ಹಲವು ಸ್ವಾಮೀಜಿಗಳ ನೇತೃತ್ವದಲ್ಲಿ ಧರ್ಮಾತೀತ, ಜಾತ್ಯತೀತ ಹಾಗೂ ಪಕ್ಷಾತೀತವಾದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ಬಾಗಲಕೋಟೆ-ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯ ಸ್ವಾಮೀಜಿಗಳು, ರೈತ ಸಂಘಟನೆಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು, ಯುಕೆಪಿ ಸಂತ್ರಸ್ತರು, ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪಾದಯಾತ್ರೆ ಯಶಸ್ವಿಗೊಳಿಸಲಿದ್ದಾರೆಂದರು. ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ನಿಗದಿಪಡಿಸಿದ 3ನೇ ಹಂತದ 130 ಟಿಎಂಸಿ ನೀರಿನ ಸದ್ಭಳಕೆಯಾಗಬೇಕು.

15ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಸಿಗಬೇಕು. ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಭೂಮಿ, ಮನೆ, ಮಠ, ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ ರಾಷ್ಟ್ರೀಯ ಪುನರ್‌ ವಸತಿ ನೀತಿಯನ್ವಯ ಯೋಗ್ಯ-ನ್ಯಾಯಯುತ ಪರಿಹಾರ ನೀಡಬೇಕು. ಭೂ ಪರಿಹಾರ ಹಾಗೂ ಕಟ್ಟಡ ಪರಿಹಾರ ನೀಡುವಾಗ ಅನುಸರಿಸುವ ಸಬ್‌ ರೆಜಿ ಸ್ಟ್ರಾರ್‌ ಮಾರ್ಗಸೂಚಿ ಬೆಲೆ ಪರಿಷ್ಕರಿಸಿ ಬೆಲೆ ನಿಗದಿಪಡಿಸಬೇಕು. ಬೀಳಗಿಯಂತೆ ವಿಜಯಪುರ, ಬೆಳಗಾವಿ ಜಿಲ್ಲೆಗಳಿಗೂ ಮಾರ್ಗಸೂಚಿ ಬೆಲೆ ಹೆಚ್ಚಿಸಬೇಕು. ಕಳೆದ 15 ವರ್ಷಗಳಿಂದ ಹೆಚ್ಚಳ ಮಾಡಿಲ್ಲ ಎಂದರು.

3ನೇ ಹಂತದ ನೀರಾವರಿ ಯೋಜನೆಗೆ ಒಟ್ಟು 1.33 ಲಕ್ಷ ಎಕರೆ ಭೂಮಿ ಸ್ವಾಧೀನಕೊಳ್ಳಬೇಕಿದೆ. ಅದರಲ್ಲಿ 75 ಸಾವಿರ ಎಕರೆ ಫಲವತ್ತಾದ ಭೂಮಿ ವಶಕ್ಕೆ ಪಡೆಯಲಾಗುತ್ತಿದೆ. ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಭೂ ಬೆಲೆ ಮಾರ್ಗದರ್ಶಿ ಬೆಲೆ ಪರಿಷ್ಕರಣೆಯಾಗಿಲ್ಲ. ಇದನ್ನು ತಕ್ಷಣ ಪರಿಷ್ಕರಣೆ ಡಬೇಕೆಂದು ಒತ್ತಾಯಿಸಿದರು. ಯುಕೆಪಿ 3ನೇ ಹಂತದ ಯೋಜನೆಗೆ 17 ಸಾವಿರ ಕೋಟಿ ಅನುದಾನ ನಿಗದಿ ಮಾಡಲಾಗಿತ್ತು.

ಈಗ 60 ಸಾವಿರ ಕೋಟಿ ಅಂದಾಜು ಮಾಡಲಾಗಿದೆ. ಸರ್ಕಾರದ ಈಗಿನ ಯುಕೆಪಿ ಕಾಳಜಿ ನೋಡಿದರೆ ಇನ್ನೂ ಮೂರು ದಶಕ ಬೇಕಾಗುತ್ತದೆ. ಇದೊಂದು ಶತಮಾನದ ಯೋಜನೆಯಾಗುವ ಭೀತಿ ಇದೆ ಎಂದರು. ಪಕ್ಕದ ತೆಲಂಗಾಣದಲ್ಲಿ ಕಾಲಕಾಲೇಶ್ವರ ಏತ ನೀರಾವರಿ ಯೋಜನೆ ಕೇವಲ ಮೂರೇ ವರ್ಷದಲ್ಲಿ ಪೂರ್ಣಗೊಳಿಸಿ ಇಡೀ ದೇಶಕ್ಕೆ ಮಾದರಿಯಾಗಿದೆ. ನಮ್ಮ ಯುಕೆಪಿ ಯೋಜನೆ ಆರು ದಶಕ ಕಳೆದರೂ ಪೂರ್ಣಗೊಳ್ಳುತ್ತಿಲ್ಲ. ಈಗ ನಮ್ಮದೇ ಭಾಗದ ಮುಖ್ಯಮಂತ್ರಿಗಳಿದ್ದಾರೆ, ಜಿಲ್ಲೆಯವರೇ ಆದ ಗೋವಿಂದ ಕಾರಜೋಳ ಜಲಸಂಪನ್ಮೂಲ ಸಚಿವರಾಗಿದ್ದಾರೆ. ಕೇಂದ್ರ-ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಈ ಯೋಜನೆ ಪೂರ್ಣಗೊಳಿಸಲು ಇದು ಸಕಾಲವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಯೋಜನಾ ವೆಚ್ಚ ಎಷ್ಟು: ಮಾಜಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಯುಕೆಪಿ 3ನೇ ಹಂತದ ಯೋಜನೆಗಳಿಗೆ 50 ಸಾವಿರ ಕೋಟಿ ಬೇಕು ಎಂದು ಸರ್ಕಾರ ಹೇಳುತ್ತಿದೆ. ಹೊಸ ಭೂಸ್ವಾಧೀನ ಕಾಯ್ದೆ ಅನ್ವಯ ಸ್ವಾಧೀನಗೊಳ್ಳುವ ಭೂಮಿಗೆ ಕಾನೂನು ಬದ್ಧವಾಗಿ ಪರಿಹಾರ ನೀಡಲು ಎಷ್ಟು ಅನುದಾನ ಬೇಕೆಂಬುದನ್ನು ಸ್ಪಷ್ಟಪಡಿಸಬೇಕು. ಭೂಮಿ ಕಳೆದುಕೊಳ್ಳುವವರಷ್ಟೇ ಸಂತ್ರಸ್ತರಲ್ಲ. ಕೃಷಿ ಉಪ ಕಸಬುಗಳಿಂದ ಬದುಕುವವರೂ ಸಂತ್ರಸ್ತರು ಎಂದರು.

ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ, ಮಾಜಿ ಸಚಿವ ಎಚ್‌.ವೈ. ಮೇಟಿ, ಕೆಪಿಸಿಸಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಮುಧೋಳದ ಕಾಂಗ್ರೆಸ್‌ ಮುಖಂಡ ಸತೀಶ ಬಂಡಿವಡ್ಡರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ, ಸಂತ್ರಸ್ತರ ಹೋರಾಟ ಸಮಿತಿಯ ಪ್ರಕಾಶ ಅಂತರಗೊಂಡ ಮುಂತಾದವರು ಉಪಸ್ಥಿತರಿದ್ದರು.

ಕಾವೇರಿ ಮತ್ತು ಮಹದಾಯಿ ನೀರು ಹಂಚಿಕೆ ಅಂತಿಮ ತೀರ್ಪಿನ ವಿಷಯ ಕೋರ್ಟ್‌ನಲ್ಲಿತ್ತು. ಆದರೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಈಗ ಕೃಷ್ಣಾ ನದಿ ನೀರು ಹಂಚಿಕೆಯ ಬ್ರಿಜೇಶಕುಮಾರ ನೇತೃತ್ವದ ನ್ಯಾಯಾಧಿಕರಣದ ಐತೀರ್ಪಿಗೆ ಅಧಿಸೂಚನೆ ಹೊರಡಿಸಲು ಮನವಿ ಮಾಡಿದರೆ, ವಿವಾದ ಕೋರ್ಟ್‌ನಲ್ಲಿದೆ ಎಂಬ ಸಬೂಬು ಹೇಳಲಾಗುತ್ತಿದೆ. ಅಧಿಸೂಚನೆ ಹೊರಡಿಸಲು ಯಾವುದೇ ತೊಂದರೆ ಇಲ್ಲ. ಕೇಂದ್ರ ಸರ್ಕಾರ ಕೂಡಲೇ ಅಧಿಸೂಚನೆ ಹೊರಡಿಸಬೇಕು.
*ಎಸ್‌.ಆರ್‌. ಪಾಟೀಲ,
ವಿರೋಧ ಪಕ್ಷದ ನಾಯಕ, ವಿಧಾನ ಪರಿಷತ್‌

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.