ಕಸ ವಿಲೇವಾರಿ ಡಬ್ಬಿವಿತರಣೆ
Team Udayavani, Jun 5, 2020, 11:02 AM IST
ಲೋಕಾಪುರ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ ಎಂದು ಬಸವೇಶ್ವರ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ ಚುಳಕಿ ಹೇಳಿದರು.
ಲೋಕೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ನೀಡಿದ ಕಸ ವಿಲೇವಾರಿ ಡಬ್ಬಿಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಸಂಘವು ಅತ್ಯುತ್ತಮವಾಗಿ ಬಡವರು, ಕೃಷಿಕರು ಸೇರಿದಂತೆ ಎಲ್ಲ ವರ್ಗದವರ ಹಿತ ಕಾಪಾಡಲು ಶ್ರಮಿಸುತ್ತಿದೆ. ಸಾಮಾಜಿಕ, ಆರ್ಥಿಕವಾಗಿ ಅನೇಕ ಜನಪರ ಯೋಜನೆ ಕೈಗೊಂಡಿದೆ ಎಂದರು.
ಈ ವೇಳೆ ಗ್ರಾಪಂ ಸದಸ್ಯ ರಾಮಣ್ಣ ಕಿಲಾರಿ, ಶಿವಾನಂದ ಬೋಳಿಶೆಟ್ಟಿ, ದೇವಸ್ಥಾನ ಅರ್ಚಕರಾದ ಚನ್ನಯ್ಯ ಗಣಾಚಾರಿ, ಪಟ್ಟಯ್ಯ ಗಣಾಚಾರಿ, ಒಕ್ಕೂಟದ ಪದಾಧಿಕಾರಿಗಳಾದ ಜ್ಯೋತಿ ಸಂಶಿ, ಶಾಂತಾ ಬಿದ್ನಾಳ, ಮಹಾದೇವಿ ರೇವಣಶಿದ್ಧಿ, ಸರೋಜಾ ಬಟಕುರ್ಕಿ, ಲಕ್ಷ್ಮೀ ಬಾಯಿ ಹೂಗಾರ, ಸೇವಾ ಪ್ರತಿನಿಧಿ ಸಾವಿತ್ರಿ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.