ಕೆರೂರ ಬಸ್ ನಿಲ್ದಾಣದಲ್ಲಿ ಕಂಡಲೆಲ್ಲ ಕಸ
ಕುಡಿವ ನೀರು- ಮಹಿಳೆಯರ ಪ್ರತ್ಯೇಕ ವಿಶ್ರಾಂತಿ ಕೊಠಡಿ, ಸುಸಜ್ಜಿತ ಆಸನ ವ್ಯವಸ್ಥೆ ಇಲ್ಲ
Team Udayavani, Nov 4, 2022, 3:04 PM IST
ಕೆರೂರ: ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 218ರ ಮೇಲಿರುವ ಪಟ್ಟಣದ ಬಸ್ ನಿಲ್ದಾಣ ಗಬ್ಬೆದ್ದು ನಾರುತ್ತಿದ್ದು, ಪ್ರಯಾಣಿಕರಿಗೆ ಕನಿಷ್ಠ ಸೌಲಭ್ಯ ಇಲ್ಲದಂತಾಗಿದೆ.
ಪಟ್ಟಣ ಸುಮಾರು 25 ಸಾವಿರ ಜನಸಂಖ್ಯೆ ಹೊಂದಿದೆ. ಸುತ್ತಲೂ ಸುಮಾರು 65 ಹಳ್ಳಿಗಳ ವ್ಯಾಪಾರ-ವ್ಯವಹಾರ, ದಿನಬಳಕೆ ವಸ್ತು ಖರೀದಿ ಕೇಂದ್ರವಾಗಿದೆ. ಶಾಲೆ-ಕಾಲೇಜುಗಳನ್ನು ಹೊಂದಿದ್ದು, ನಿತ್ಯವೂ ಸಾವಿರಾರು ಜನ ಪ್ರಯಾಣಿಕರು ಇಲ್ಲಿಗೆ ಬರುತ್ತಾರೆ. ಇನ್ನು ಪ್ರತಿ ಮಂಗಳವಾರ ನಡೆಯುವ ವಾರದ ಸಂತೆ ದಿನ ಬಸ್ ನಿಲ್ದಾಣ ಸಂಪೂರ್ಣ ಜನದಟ್ಟಣೆಯಿಂದ ಕೂಡಿರುತ್ತದೆ.
ಬೇರೆಡೆ ತೆರಳಲು, ಬೇರೆಡೆಯಿಂದ ಇಲ್ಲಿಗೆ ಬರುವ ಜನರಿಗೆ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರು, ಮಹಿಳೆಯರ ಪ್ರತ್ಯೇಕ ವಿಶ್ರಾಂತಿ ಕೊಠಡಿ, ಸುಸಜ್ಜಿತ ಆಸನ ವ್ಯವಸ್ಥೆ ಇಲ್ಲ. ಮಾಹಿತಿ ಫಲಕ ಸೇರಿದಂತೆ ಯಾವುದೊಂದು ಮೂಲಸೌಕರ್ಯ ಸಾರಿಗೆ ಸಂಸ್ಥೆ ಕಲ್ಪಿಸಿಲ್ಲ ಎಂಬ ಆರೋಪ ಕೇಳಿ ಬರುತ್ತಿವೆ.
ನಿಲ್ದಾಣದ ತುಂಬಾ ಎಲ್ಲೆಂದರಲ್ಲಿ ಗುಟಕಾ ಚೀಟುಗಳನ್ನು, ಖಾಲಿ ನೀರಿನ ಬಾಟಲ್ ಗಳನ್ನು, ತಿಂಡಿ-ತಿನಿಸುಗಳ ಪಾಕೇಟ್‌ಗಳನ್ನು ಬೀಸಾಕಲಾಗಿದೆ.
ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಮಾರ್ಗಕ್ಕೆ ಪಟ್ಟಣ ಹೊಂದಿಕೊಂಡಿರುವುದರಿಂದ ಹುಬ್ಬಳ್ಳಿ, ವಿಜಯಪುರ, ಬಾಗಲಕೋಟೆ ವಿಭಾಗದಿಂದ ಈ ಮಾರ್ಗದಲ್ಲಿ ದಿನನಿತ್ಯ ಹಲವಾರು ಬಸ್‌ಗಳು ಹಾಯ್ದು ಹೋಗುತ್ತವೆ. ಸ್ಥಳೀಯ ಬಸ್‌ಗಳಲ್ಲೂ ಸಾವಿರಾರು ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಆಗಮಿಸುತ್ತಾರೆ. ನಿಲ್ದಾಣದಲ್ಲಿ ಸ್ವತ್ಛತೆ ಮರೀಚಿಕೆಯಾಗಿದೆ. ಮೂಲಸೌಕರ್ಯ ಕೊರತೆಯಿಂದ ಪ್ರಯಾಣಿಕರು ಪರದಾಡುವಂತಾಗಿದೆ.ಬಾಗಲಕೋಟೆಗೆ ತೆರಳುವ ಪ್ರಯಾಣಿಕರು ಬಸ್ ನಿಲ್ದಾಣದ ಮುಂಭಾಗ ಬಿಸಿಲಲ್ಲಿ ಗಂಟೆಗಟ್ಟಲೆ ಒಂಟಿಗಾಲಲ್ಲಿ ನಿಂತು ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲಿ ಕೂರಲು ಆಸನ ಮತ್ತು ನೆರಳಿನ ವ್ಯವಸ್ಥೆ ಕಲ್ಪಿಸಬೇಕೆನ್ನುವುದು ಪ್ರಯಾಣಿಕರ ಬೇಡಿಕೆಯಾಗಿದೆ.
ಕ್ಯಾಂಟೀನ್ ಬಲು ದುಬಾರಿ : ನಿಲ್ದಾಣದಲ್ಲಿರುವ ಕ್ಯಾಂಟೀನ್ ತಿಂಗಳಿಗೆ ಸುಮಾರು 60 ಸಾವಿರ ಬಾಡಿಗೆ ಕಟ್ಟುತ್ತಿದ್ದು, ಮಾಲೀಕರು ಅದರ ಹೊರೆಯನ್ನು ಗ್ರಾಹಕರ ಮೇಲೆ ಹೇರಿದ್ದಾರೆ. ಪರಿಣಾಮ ಜನ ಸೇವಿಸುವ ಉಪಾಹಾರಗಳ ದರ ಬಲು ದುಬಾರಿಯಾಗಿದೆ. ಶೌಚಾಲಯ ಬಳಕೆಯೂ ದುಬಾರಿಯಾಗಿದೆ. ಶೌಚಕ್ಕೆ 10 ರೂ, ಮೂತ್ರವಿಸರ್ಜನೆಗೆ 5 ರೂ. ದರ ನಿಗದಿ ಮಾಡಲಾಗಿದೆ. ಕುಡುಕರ ಹಾವಳಿ ನಿಲ್ದಾಣ ನಿಯಂತ್ರಕರಿಗೆ ತಲೆನೋವಾಗಿದೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳು ಇತ್ತ ಗಮನ ಹರಿಸಿ ಬಸ್ ನಿಲ್ದಾಣಕ್ಕೆ ಮೂಲಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.
ಶೌಚಾಲಯ ದುರ್ವಾಸನೆ: ನಿಲ್ದಾಣದಲ್ಲಿನ ಸಂಕೀರ್ಣಗಳ ಮದ್ಯದ ಮಳಿಗೆಯಲ್ಲಿ ಮಹಿಳೆ ಮತ್ತು ಪುರುಷರ ಶೌಚಾಲಯ ಇದ್ದು, ಸ್ವಚ್ಛತೆ ಇಲ್ಲದೇ ದುರ್ವಾಸನೆ ಹರಡಿದೆ. ಇದರಿಂದ ಪ್ರಯಾಣಿಕರು ಮೂಗು ಮುಚ್ಚಿಕೊಳ್ಳುವಂತಾಗಿದೆ.
ಕೆರೂರ ಬಸ್ ನಿಲ್ದಾಣದ ಸಮಸ್ಯೆಗಳ ಕುರಿತು ಹಿರಿಯ ಅ ಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಇರುವುದರಲ್ಲೇ ಸರಿ ಮಾಡಿಕೊಂಡು ನಮ್ಮ ಕರ್ತವ್ಯ ನಿರ್ವಹಿಸುತ್ತಿದ್ದೇವೆ. –ಎಂ.ಎಸ್. ಬುಳ್ಳಾ, ಬಿ.ಆರ್. ಕುಲಕರ್ಣಿ (ನಿಲ್ದಾಣ ನಿಯಂತ್ರಕರು).
ವೃದ್ಧರಿಗೆ ಮತ್ತು ಅಂಗವಿಕಲ ಪ್ರಯಾಣಿಕರಿಗೆ ಕೂರಲು ಸುರಕ್ಷಿತ ಆಸನ ವ್ಯವಸ್ಥೆಯಿಲ್ಲ. ಪ್ರಯಾಣಿಕರಿಗೆ ಯಾವುದೇ ಮೂಲಸೌಕರ್ಯ ಇಲ್ಲ. ಬಸ್ ನಿಲ್ದಾಣ ಸಂಪೂರ್ಣ ಅವ್ಯವಸ್ಥೆಯ ಆಗರವಾಗಿದೆ. –ರಮೇಶ ಕೊಣ್ಣೂರ (ಪ್ರಯಾಣಿಕ)
ಶ್ರೀಧರ ಚಂದರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.