Ghataprabha ನದಿಯ ಪ್ರವಾಹ ಇಳಿಮುಖ: ಸಂಚಾರಕ್ಕೆ ಮುಕ್ತವಾದ ನಂದಗಾಂವ ಸೇತುವೆ
Team Udayavani, Jul 29, 2023, 9:33 PM IST
ಮಹಾಲಿಂಗಪುರ: ಮಹಾರಾಷ್ಟ್ರದಲ್ಲಿ ಕಳೆದ ಎರಡು ದಿನಗಳಿಂದ ಮಳೆಯು ಕಡಿಮೆಯಾದ ಕಾರಣ ಘಟಪ್ರಭಾ ನದಿಗೆ ಬರುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗಿ ಕಳೆದ ಒಂದು ವಾರದಿಂದ ಜಲಾವೃತವಾಗಿದ್ದ ಸಮೀಪದ ನಂದಗಾಂವ ಸೇತುವೆಯು ಶನಿವಾರ ಸಂಜೆ ಸಂಚಾರಕ್ಕೆ ಮುಕ್ತವಾಗಿದೆ.
ಶನಿವಾರ ಸಂಜೆ 6ರ ಮಾಹಿತಿಯಂತೆ ಹಿರಣ್ಯಕೇಶಿ ನದಿಯಿಂದ ದುಪದಾಳ ಜಲಾಶಯಕ್ಕೆ 9740 ಕ್ಯೂಸೆಕ್ ನೀರಿನ ಒಳಹರಿವು ಇದ್ದು, ಇದರಲ್ಲಿ 6540 ಕ್ಯೂಸೆಕ್ ಘಟಪ್ರಭಾ ನದಿಗೆ, 800 ಜಿಆರ್‌ಬಿಸಿಗೆ, 2400 ಘಟಪ್ರಭಾ ಎಡದಂಡೆ ಕಾಲುವೆಗೆ ಸೇರಿದಂತೆ ಒಟ್ಟು 9740ಕ್ಯೂಸೆಕ್ ನೀರನ್ನು ದುಪದಾಳ ಜಲಾಶಯದಿಂದ ಘಟಪ್ರಭಾ ನದಿಗೆ ಬಿಡಲಾಗುತ್ತಿದೆ.
ಹಿಡಕಲ್ ಜಲಾಶಯಕ್ಕೆ 22 ಸಾವಿರ ಕ್ಯೂಸೆಕ್ ಒಳಹರಿವು : ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರ ಜೀವನಾಡಿಯಾದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯಕ್ಕೆ ಮಹಾರಾಷ್ಟ್ರದಲ್ಲಿನ ನಿರಂತರ ಮಳೆಯಿಂದಾಗಿ ಕಳೆದ 10 ದಿನಗಳಿಂದ ಪ್ರತಿನಿತ್ಯ 30 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬಂದಿತ್ತು. ಶನಿವಾರ ಸಂಜೆ ಮಾಹಿತಿಯಂತೆ 51 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯಯುಳ್ಳ ಜಲಾಶಯದಲ್ಲಿ 34 ಟಿಎಂಸಿ ನೀರಿನ ಸಂಗ್ರಹವಾಗಿದೆ. ಜಲಾಶಯಕ್ಕೆ ಶನಿವಾರ 22413 ಕ್ಯೂಸೆಕ್ ಒಳಹರಿವು ಇದ್ದು, ಈವರೆಗೂ ಜಲಾಶಯದಿಂದ ನೀರನ್ನು ಹೊರಗೆ ಬಿಟ್ಟಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.