ಬಜೆಟ್‌ನಲ್ಲಿ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಿ

ರಾಜೇಂದ್ರ ಪ್ರಸಾದ್‌ ಹಾಗೂ ಜಸ್ಟೀಸ್‌ ರಂಗನಾಥ ಮಿಶ್ರ ವರದಿ ಜಾರಿಗೆ ತರಬೇಕು.

Team Udayavani, Feb 12, 2022, 2:55 PM IST

ಬಜೆಟ್‌ನಲ್ಲಿ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಿ

ಬಾಗಲಕೋಟೆ: ರಾಜ್ಯದಲ್ಲಿ ಕೃಷಿ, ಉದ್ಯೋಗ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡುವಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಮುಖಂಡ ಅಕ್ರಮ ಹಸನ್‌ ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ್ವಲಂತ ಸಮಸ್ಯೆಗಳು ತೀವ್ರ ಸ್ವರೂಪದಲ್ಲಿ ಕಾಡುತ್ತಿವೆ. ಅವುಗಳಿಗೆ ಪರಿಹಾರ ನೀಡುವುದರ ಜತೆಗೆ ಎಲ್ಲ ಕ್ಷೇತ್ರಗಳಿಗೆ ಸಮರ್ಪಕ ಅನುದಾನ ಒದಗಿಸಬೇಕು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಿಎಂ
ಬಸವರಾಜ ಬೊಮ್ಮಾಯಿ ಮುಂದಾಗಬೇಕು ಎಂದು ಆಗ್ರಹಿಸಿದರು. ಪ್ರತಿ ತಾಲೂಕುಗಳಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪಿಸಿ ಅಗತ್ಯವಿದ್ದು, ವೈದ್ಯಕೀಯ ಸಿಬ್ಬಂದಿಯನ್ನು ನೇಮಕ ಮಾಡಬೇಕು.

ಅಮೆರಿಕಾ ಮಾದರಿಯಲ್ಲಿ ರಾಜ್ಯದಲ್ಲಿ ಏರೋಸ್ಪೇಸ್‌ ಮತ್ತು ಏರೋನಾಟಿಕಲ್‌ ಸಂಶೋಧನಾ ಕೇಂದ್ರವನ್ನು ಟಿಪ್ಪು ಸುಲ್ತಾನ್‌ ಅವರ ಹೆಸರಿನಲ್ಲಿ ಸ್ಥಾಪಿಸಬೇಕು. ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕನಿಷ್ಠ 10 ಸಾವಿರ ಕೋಟಿ ರೂ. ಮೀಸ ಲಿಡಬೇಕು. ಉರ್ದು ಭಾಷೆಗೆ ಉತ್ತೇಜನಕ್ಕಾಗಿ ಉತ್ತರ ಕರ್ನಾಟಕದಲ್ಲಿ ಉರ್ದು ವಿಶ್ವ ವಿದ್ಯಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ರಾಜೇಂದ್ರ ಪ್ರಸಾದ್‌ ಹಾಗೂ ಜಸ್ಟೀಸ್‌ ರಂಗನಾಥ ಮಿಶ್ರ ವರದಿ ಜಾರಿಗೆ ತರಬೇಕು. ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದವರ ಅಭಿವೃದ್ಧಿಗೆ ಒತ್ತು ನೀಡಬೇಕು. ಕೃಷಿಕರಿಗೆ ಹೆಚ್ಚಿನ ನೆರವು, ಸೌಲಭ್ಯಗಳನ್ನು ಕಲ್ಪಿಸಬೇಕು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮುಂದಾಗಬೇಕು.ಎಂದರು.

ರಾಜ್ಯದಲ್ಲಿ ಕೆಲ ದಿನಗಳಿಂದ ಹಿಜಾಬ್‌-ಕೇಸರಿ ವಿವಾದ ಭುಗಿಲೆದಿದ್ದು, ಇಂತಹ ಘಟನೆಗಳಿಂದ ಮಕ್ಕಳ ಮನಸ್ಸು ಒಡೆಯುವ ಕೆಲಸವಾಗಬಾರದು. ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಮೆರವಣಿಗೆಗೆ ಅವಕಾಶ ನೀಡಲಿಲ್ಲ. ಇದರಿಂದ ಬಿಲ್ಲವರು, ಈಡಿಗರು ಕರಾವಳಿ ಭಾಗದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಇದನ್ನು ಸಹಿಸಲು ಸಾಧ್ಯವಾಗದೆ ಜನರ
ಮನಸ್ಸು ಬೇರೆಡೆ ತಿರುಗಿಸಲು ಈ ವಿವಾದ ಹುಟ್ಟು ಹಾಕಿದ್ದಾರೆ. ದೇಶದಲ್ಲಿ ಎಲ್ಲರೂ ಒಂದಾಗಿ ಬಾಳುವ ಕೆಲಸವಾಗಬೇಕಿದೆ ಎಂದು ತಿಳಿಸಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ 50 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ಪಕÒ‌ಕ್ಕಾಗಿ ದುಡಿದವರಿಗೆ ಬರುವ ಚುನಾವಣೆಯಲ್ಲಿ ಆದ್ಯತೆ ನೀಡಲಾಗುವುದು.

ಭ್ರಷ್ಟಚಾರಹಿತ, ಜನಪರ ಆಡಳಿತ ನೀಡಬೇಕು ಎನ್ನುವುದು ನಮ್ಮ ಆಶಯ ಎಂದು ಹೇಳಿದರು. ಎಸ್‌ಡಿಪಿಐ ಪಕ್ಷದ ಉಪಾಧ್ಯಕ್ಷ ಶ್ರೀನಾಥ ನವಣಿ, ಕಾರ್ಯದರ್ಶಿ ಮೊಹಮ್ಮದ್‌ ಅಂಬಿ, ಮುಖಂಡರಾದ ಕಾಶೀಮ ಕಟನಹಳ್ಳಿ, ರಾಜಭಕ್ಷ ಜಮಾದಾರ, ರಾಜೇಸಾಬ ತಾಳಿಕೋಟಿ, ಯಮನಪ್ಪ ಗುಣದಾಳ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.