ಜೂನ್‌ ಅಂತ್ಯದವರೆಗೆ ಟ್ಯಾಂಕರ್‌ ನೀರು ಕೊಡಿ

•25 ಗ್ರಾಮಗಳಿಗೆ ನಿತ್ಯ 47 ಟ್ಯಾಂಕರ್‌ ನೀರು ಪೂರೈಕೆ •ನರೇಗಾ ಯೋಜನೆಯಡಿ ಹೆಚ್ಚು ಪ್ರಗತಿಗೆ ಸೂಚನೆ

Team Udayavani, Jun 1, 2019, 2:48 PM IST

bk-tdy-3..

ಬಾಗಲಕೋಟೆ: ಬೆಳಗಾವಿ ವಿಭಾಗದ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ ಗಿರಿನಾಥ ಮಾತನಾಡಿದರು.

ಬಾಗಲಕೋಟೆ: ಜಿಲ್ಲೆಯಲ್ಲಿ ಜೂನ್‌ ಅಂತ್ಯದವರೆಗೆ ಕುಡಿವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ತ್ವರಿತಗತಿಯಲ್ಲಿ ಕ್ರಮವಹಿಸಬೇಕು ಎಂದು ಬೆಳಗಾವಿ ವಿಭಾಗದ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ ಗಿರಿನಾಥ ತಿಳಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬರ ಪರಿಸ್ಥಿತಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜೂನ್‌ ಅಂತ್ಯದವರೆಗೆ ಒಟ್ಟು 209 ಜನವಸತಿಗಳಲ್ಲಿ ಕುಡಿಯುವ ನೀರಿನ ತೊಂದರೆ ಎದುರಿಸಬಹುದಾಗಿದೆ. ಈ ಪೈಕಿ 144 ಜನವಸತಿಗಳಿಗೆ ವಿವಿಧ ಯೋಜನೆಗಳಲ್ಲಿ ಪರಿಹಾರ ಕೈಗೊಳ್ಳಲು ಅನುದಾನ ಒದಗಿಸಲಾಗಿದೆ. ಉಳಿದ 65 ಜನವಸತಿಗಳಿಗೆ ಯೋಜನೆ ರೂಪಿಸಿ ತುರ್ತು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಈಗಾಗಲೇ 25 ಗ್ರಾಮಗಳಲ್ಲಿ 47 ಟ್ಯಾಂಕರ್‌ಗಳ ಮೂಲಕ ಹಾಗೂ 33 ಗ್ರಾಮಗಳಿಗೆ 42 ಖಾಸಗಿ ಬೋರ್‌ವೆಲ್ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿರುವ ಗ್ರಾಮಗಳ ಜನಸಂಖ್ಯೆ ಮತ್ತು ಆ ಗ್ರಾಮಕ್ಕೆ ಎಷ್ಟು ನೀರು ಅವಶ್ಯಕತೆ ಇರುವ ಮಾಹಿತಿ ನೀಡಬೇಕು. ಅಲ್ಲಿರುವ ಜನರಿಗೆ ಎಷ್ಟು ಪ್ರಮಾಣದಲ್ಲಿ ನೀರು ಅವಶ್ಯಕತೆ ಇರುವ ಬಗ್ಗೆ ಮಾಹಿತಿ ಪಡೆದುಕೊಂಡು ಯೋಜನೆ ರೂಪಿಸಬೇಕು. ಈಗಾಗಲೇ ಕುಡಿಯುವ ನೀರಿಗಾಗಿ ಕೈಗೊಂಡ ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳಿಸಲು ತಿಳಿಸಿದರು.

ಬರ ನಿರ್ವಹಣೆಗೆ ಸರಕಾರಿ ನೀಡಿರುವ ಟಿಟಿಎಫ್‌ ಮತ್ತು ಸಿಆರ್‌ಎಫ್‌, ಟಿಟಿಎಫ್‌-1, 2, 3 ಹಾಗೂ ಸಿಆರ್‌ಎಫ್‌-1, 2, 3ರ ಅಡಿಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಕೈಗೊಳ್ಳಲಾದ ಕಾಮಗಾರಿಗಳಿಗೆ ಪಾವತಿಸಲಾದ ಮೊತ್ತ ಹಾಗೂ ಬಾಕಿ ಇರುವ ಬಿಲ್ಗಳ ಮೊತ್ತಗಳ ವಿವರವನ್ನು ಕೇಳಿದಾಗ ಕೆಲವೊಂದು ಕಾಮಗಾರಿಗಳ ಬಿಲ್ ಪಾವತಿಯಾಗದಿರುವದನ್ನು ತಿಳಿದು ಶೀಘ್ರವೇ ಪಾವತಿಗೆ ಕ್ರಮಕೈಗೊಳ್ಳಲು ಸೂಚಿಸಿದರು. ಅಲ್ಲದೇ ಬರ ನಿರ್ವಹಣೆ ಖಾತೆಯಲ್ಲಿ ಸಾಕಷ್ಟು ಹಣವಿದ್ದು, ಸಮರ್ಪಕವಾದ ಕ್ರಿಯಾ ಯೋಜನೆ ರೂಪಿಸಿ ಅನುದಾನ ಬಳಕೆ ಮಾಡಲು ತಿಳಿಸಿದರು.

ಟಿಟಿಎಫ್‌-1ರಡಿ 21 ಕಾಮಗಾರಿಗಳ ಪೈಕಿ 197 ಕಾಮಗಾರಿಗಳಲ್ಲಿ 202 ಕೊಳವೆಬಾವಿ ಕೊರೆಯಲಾಗಿದ್ದು, ಅದರಲ್ಲಿ 167 ಬೋರ್‌ಗಳು ಸಫಲವಾಗಿವೆ. 11 ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ 2 ಪ್ಲಷಿಂಗ್‌ ಕಾಮಗಾರಿ ಅಳವಡಿಸಲಾಗಿದೆ. ಟಿಟಿಎಫ್‌-2 ಅಡಿ 203 ಕಾಮಗಾರಿಗಳಲ್ಲಿ 41 ಕಾಮಗಾರಿಗಳನ್ನು ಟಿಟಿಎಫ್‌-1ರಡಿ ಹೊಂದಾಣಿಕೆ ಮಾಡಿಕೊಂಡು ಉಳಿದ 162 ಕಾಮಗಾರಿಗಳಲ್ಲಿ 129 ಕೊಳವೆ ಬಾವಿ ಕೊರೆಯುವುದನ್ನು ಅಳವಡಿಸಲಾಗಿದೆ ಎಂದು ಸಭೆಗೆ ತಿಳಿಸಲಾಯಿತು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ ಮಾತನಾಡಿ, ನಗರ ಪ್ರದೇಶದಲ್ಲಿಯೂ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮವಹಿಸಬೇಕು. ನೀರಿನ ಸಮಸ್ಯೆಯುಂಟಾಗುವ ಪ್ರದೇಶಗಳಲ್ಲಿನ ವಸ್ತುಸ್ಥಿತಿ ಅರಿತು ಜನಸಂಖ್ಯೆ ಆಧಾರದ ಮೇಲೆ ಕುಡಿಯುವ ನೀರು ಪೂರೈಸುವ ಕೆಲಸವಾಗಬೇಕು. ಜಿಲ್ಲೆಯ ನಗರ ಪ್ರದೇಶಗಳಲ್ಲಿ 170 ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿ ಆ ಪೈಕಿ 109 ಕೊಳವೆ ಬಾವಿಗಳನ್ನು ಉಪಯೋಗಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ ಕುಡಿಯುವ ನೀರಿಗಾಗಿ 2 ಕಂತುಗಳಲ್ಲಿ 513 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ಒಟ್ಟು 162 ಕಾಮಗಾರಿಗಳಿಗೆ ಕ್ರಿಯಾ ಯೋಜನೆಗೆ ಅನುಮೋದನ ನೀಡಿದ್ದು, ಈ ಪೈಕಿ 102 ಕಾಮಗಾರಿಗಳು ಪೂರ್ಣಗೊಂಡಿದ್ದು, 57 ಕಾಮಗಾರಿಗಳು ಪ್ರಗತಿಯಲ್ಲಿವೆ 3 ಕಾಮಗಾರಿಗಳಿಗೆ ಟೆಂಡರ್‌ ಕರೆಯಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಸಮೀಕ್ಷೆಯ ಪ್ರಕಾರ ಮೇವಿನ ಲಭ್ಯತೆ, ಮೇವು ಪೂರೈಕೆ, ಮೇವಿನ ಕಿರು ಪೊಟ್ಟಣಗಳ ವಿವರ, ಮೇವು ನಿಧಿ ಪ್ರಾರಂಭಿಸುವ ಕುರಿತು ಚರ್ಚಿಸಿದರು.

ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌, ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಜಿಪಂ ಉಪಕಾರ್ಯದರ್ಶಿ ದುರ್ಗೇಶ ರುದ್ರಾಕ್ಷಿ, ಉಪ ವಿಭಾಗಾಧಿಕಾರಿಗಳಾದ ಎಚ್.ಜಯಾ ಮತ್ತು ಇಕ್ರಮ ಮುಂತಾದವರು ಉಪಸ್ಥಿತರಿದ್ದರು.

ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಇಲ್ಲಿಯವರೆಗೆ ಶೇ.40ರಷ್ಟು ಪ್ರಗತಿ ಸಾಧಿಸಬೇಕಾಗಿತ್ತು. ಈ ಪೈಕಿ ಶೇ.20.56ರಷ್ಟು ಮಾತ್ರ ಪ್ರಗತಿ ಕಂಡುಬಂದಿದ್ದು, ಹೆಚ್ಚಿನ ಪ್ರಗತಿಗೆ ಸೂಚಿಸಿದರು. ಶಾಲೆಗಳು ಪ್ರಾರಂಭವಾಗಿದ್ದು, ಈ ಸಾಲಿನಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಖಾಳಜಿ ವಹಿಸಿ ಉತ್ತಮ ಫಲಿತಾಂಶಕ್ಕೆ ಯೋಜನೆಗಳನ್ನು ರೂಪಿಸಿಕೊಳ್ಳಲು ಆಯುಕ್ತರು ಸೂಚಿಸಿದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.