ಇಂದಿನ ರಾಜಕಾರಣಿಗಳಿಗೆ ಅರಸು ಮಾದರಿ: ಸಚಿವ ಆರ್‌.ಬಿ. ತಿಮ್ಮಾಪುರ


Team Udayavani, Aug 21, 2024, 5:34 PM IST

ಇಂದಿನ ರಾಜಕಾರಣಿಗಳಿಗೆ ಅರಸು ಮಾದರಿ: ಸಚಿವ ಆರ್‌.ಬಿ. ತಿಮ್ಮಾಪುರ

■ ಉದಯವಾಣಿ ಸಮಾಚಾರ
ಬಾಗಲಕೋಟೆ: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ದುರ್ಬಲ ವರ್ಗದ ಜನರ ಏಳ್ಗೆಗೆ ಶ್ರಮಿಸಿದ್ದ ಮಹಾನ್‌ ನಾಯಕ ಡಿ. ದೇವರಾಜ ಅರಸು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು.

ನವನಗರದ ಕಲಾ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾನ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಡಿ. ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದುಳಿದವರ ಸರ್ವತೋಮುಖ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮ ಹಮ್ಮಿಕೊಂಡು ದುರ್ಬಲ ವರ್ಗದ ಜನರ ಏಳ್ಗೆಗೆ ಶ್ರಮಿಸಿದ್ದಾರೆ. ದೇವರಾಜ ಅರಸು ಮೈಸೂರನ್ನು ಕರ್ನಾಟಕ ಎಂದು ನಾಮಕರಣ ಮಾಡಿದವರು. ಅವರ ಕಾಲದಲ್ಲಿ ಕೂಲಿ
ಮಾಡುವವರು ಭೂ ಮಾಲೀಕರಾದರು.

ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡಿದರು. ಸಣ್ಣ ಸಣ್ಣ ಸಮುದಾಯದವರನ್ನು ರಾಜಕೀಯದಲ್ಲಿ ಬರುವಂತೆ ಮಾಡಿದ ಫಲವಾಗಿ ಇಂದು ಅನೇಕರು ಮುಖ್ಯಮಂತ್ರಿ ಹುದ್ದೆ ಅಲಂಕರಿಸುವಂತಾಗಿದೆ. ಅರಸು ಕಾರ್ಯ ಇಂದಿನ ರಾಜಕೀಯ ವ್ಯಕ್ತಿಗಳಿಗೆ ನೀತಿ ಪಾಠವಾಗಿದ್ದು, ಅವರ ಆಡಳಿತ ಎಲ್ಲರೂ ಅನುಸರಿಸುವಂತಾಗಿದೆ ಎಂದರು.

ಇಂತಹ ಮಹಾನ್‌ ನಾಯಕರ ಇತಿಹಾಸ ಇಂದಿನ ಯುವ ಪೀಳಿಗೆ ಅನುಸರಿಸುವ ಅಗತ್ಯವಿದೆ. ಈ ಹಿನ್ನೆಲೆ ಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಒಂದು ದಿನವಾದರೂ ಡಿ. ದೇವರಾಜ ಅರಸುರಂತಹ ಮಹಾನ್‌ ವ್ಯಕ್ತಿಗಳ ಇತಿಹಾಸ ಸಾರುವ ಪುಸ್ತಕ ಓದುವ ಕಾರ್ಯ ನಡೆಯಬೇಕಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಮಾತನಾಡಿ, ದಿ. ದೇವರಾಜ ಅರಸು ರಾಷ್ಟ್ರಕಂಡ ಧೀಮಂತ ನಾಯಕ, ಮುತ್ಸದ್ಧಿ ರಾಜಕಾರಣಿ, ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದಾರೆ. ದೇಶಕ್ಕೆ ರಾಜಕೀಯ ಸ್ವಾತಂತ್ರ್ಯ ದೊರೆತರೆ, ಸಾಲದು ದುರ್ಬಲರಿಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯವೂ ದೊರೆತಾಗ ಮಾತ್ರ ನಿಜವಾದ ಸ್ವಾತಂತ್ರ್ಯ ದೊರೆತಂತಾಗುತ್ತದೆ ಎಂದರು.

ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ದೇವರಾಜ ಅರಸು ಸಮಾಜದ ಮಾರ್ಗದರ್ಶಕರಾಗಿದ್ದು, ಸಣ್ಣ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಶ್ರೀಮಂತರ ಮನೆಯಲ್ಲಿ ಹುಟ್ಟಿ ಬೆಳೆದರೂ ದುರ್ಬಲ ವರ್ಗಗಳ ಏಳ್ಗೆಗೆ ಆದ್ಯತೆ ನೀಡಿದ್ದಾರೆ. ಅಂತಹ ಮಹಾನ್‌ ವ್ಯಕ್ತಿಗಳ ಪ್ರತಿಮೆ ಪ್ರತಿ ಜಿಲ್ಲೆಯಲ್ಲಿ ಸ್ಥಾಪನೆ ಮಾಡಲು ಸರ್ಕಾರಕ್ಕೆ ಮನವಿ
ಮಾಡಿಕೊಳ್ಳುವುದಾಗಿ ತಿಳಿಸಿದರು. ಜಿಲ್ಲಾಧಿ ಕಾರಿ ಜಾನಕಿ ಕೆ.ಎಂ ಮಾತನಾಡಿ, ಶೋಷಿತರು ಹಾಗೂ ಅವಕಾಶ ವಂಚಿತರ ಪರವಾಗಿ ಇದ್ದವರು ದೇವರಾಜ ಅರಸು ಎಂದು ಹೇಳಿದರು.

ಧಾರವಾಡದ ಕರ್ನಾಟಕ ಉನ್ನತ ಶಿಕ್ಷಣ ಪರಿಷತ್‌ ನಿರ್ದೇಶಕ ಪ್ರೊ| ಎಂ. ಚಂದ್ರು ಪೂಜಾರ ಉಪನ್ಯಾಸ ನೀಡಿದರು. ಬಿಟಿಡಿಎ ಅಧ್ಯಕ್ಷರೂ ಆಗಿರುವ ಶಾಸಕ ಎಚ್‌.ವೈ. ಮೇಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಶಶಿಧರ ಕುರೇರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಎಂ. ತುಂಬರಮಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಭಾಕರ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಸೇರಿದಂತೆ ಇತರರಿದ್ದರು.

ಭಾವಚಿತ್ರ ಮೆರವಣಿಗೆಗೆ ಸಂಸದ ಗದ್ದಿಗೌಡರ ಚಾಲನೆ
ಡಿ. ದೇವರಾಜ ಅರಸು ಜಯಂತ್ಯುತ್ಸವ ನಿಮಿತ್ತ ಜಿಲ್ಲಾಡಳಿತ ಭವನದ ಆವರಣದಲ್ಲಿ ದೇವರಾಜ ಅರಸು ಭಾವಚಿತ್ರಕ್ಕೆ ಸಂಸದ ಪಿ.ಸಿ. ಗದ್ದಿಗೌಡರ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನಗರದ ನಾನಾ ಕಡೆ ಸಂಚರಿಸಿ ಕಲಾಭವನಕ್ಕೆ ಮುಕ್ತಾಯಗೊಂಡಿತು. ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು.

ಅತಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನ
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಿಸಿಎಂ ಇಲಾಖೆ ವ್ಯಾಪ್ತಿಯ ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಪ್ರೀತಂ ಕೊಣ್ಣೂರ, ಸಾಗರ ಕುರಬೆಟ್ಟ, ಸುನೀಲ ಮುಧೋಳ
ಹಾಗೂ ಪಿಯುಸಿಯಲ್ಲಿ ಪ್ರವೀಣ ಕೊಲಕಾರ, ಮಹೇಶ ಲಮಾಣಿ, ಐಶ್ವರ್ಯ ಕೌಜಲಗಿ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.