ಸಾರ್ವಜನಿಕರ ಸಮಸ್ಯೆಗೆ ಸರ್ಕಾರದಿಂದ ಸ್ಪಂದನೆ
ಸ್ಥಗಿತಗೊಂಡ ಪಿಂಚಣಿ ತಕ್ಷಣ ಪುನಾರಂಭಿಸಿ
Team Udayavani, May 8, 2022, 11:46 AM IST
ರಬಕವಿ-ಬನಹಟ್ಟಿ: ಬಿಜೆಪಿ ಸರಕಾರ ಸಾರ್ವಜನಿಕರ ತೊಂದರೆಗೆ ಸದಾ ಸ್ಪಂದಿಸುತ್ತದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ರಾಮಪುರನ ದಾನಮ್ಮದೇವಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಪಿಂಚಣಿ ಅದಾಲತ್ ಉದ್ಘಾಟಿಸಿ ಅವರು ಮಾತನಾಡಿದರು.
ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲಚೇತನರ ಮಾಸಾಶನ, ಮನಸ್ವಿನಿ ಸೇರಿದಂತೆ ಎಲ್ಲ ಬಗೆಯ ಮಾಸಾಶನದ ನೀಡಿಕೆಯ ಮೊತ್ತವನ್ನು ಸಿಎಂ ಬಸವರಾಜ ಬೊಮ್ಮಾಯಿ ಹೆಚ್ಚಿಸಿದ್ದಾರೆ. ಸ್ಥಗಿತಗೊಂಡ ಪಿಂಚಣಿಗಳನ್ನು ತಕ್ಷಣವೇ ಪುನಾರಂಭಿಸಲು ಕಂದಾಯ ಅಧಿಕಾರಿಗಳಿಗೆ ಈಗಾಗಲೇ ಆದೇಶಿಸಿದ್ದು, ಪ್ರಮಾದಗಳನ್ನು ಸರಿಪಡಿಸಿ ಎಲ್ಲ ವಿಧದ ಪಿಂಚಣಿ ನೀಡಲು ಮತ್ತು ವಂಚಿತ ಫಲಾನುಭವಿಗಳಿಗೆ ನ್ಯಾಯ ಒದಗಿಸಲು ಅಧಿಕಾರಿಗಳು ಶ್ರಮಿಸಬೇಕು. ರೈತರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗಲು ರಾಜ್ಯ ಸರ್ಕಾರ ನೀಡುತ್ತಿದ್ದ ವಿದ್ಯಾನಿಧಿ ಯೋಜನೆಯನ್ನು ನೇಕಾರ ಮಕ್ಕಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗುತ್ತಿದೆ.
ಕಿಸಾನ್ ಸಮ್ಮಾನ ಯೋಜನೆಯಂತೆ ನೇಕಾರ ಸಮ್ಮಾನ್ ಯೋಜನೆಗೂ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ನೇಕಾರರಿಗೂ ಮಾಸಿಕ 4 ಸಾವಿರ ರೂ. ಮಾಸಾಶನ ದೊರೆಯುತ್ತದೆ. ತೇರದಾಳ ಮತ್ತು ಮಹಾಲಿಂಗಪುರ ಹೋಬಳಿ ಕೇಂದ್ರಗಳಲ್ಲಿನ ಪಿಂಚಣಿದಾರರಿಗೆ ನೆರವಾಗಲು ಪ್ರತ್ಯೇಕವಾಗಿ ತೇರದಾಳ ಮತ್ತು ಮಹಾಲಿಂಗಪುರಗಳಲ್ಲಿ ಪಿಂಚಣಿ ಅದಾಲತ್ ನಡೆಸಲು ನಿರ್ಧರಿಸಲಾಗಿದೆ ಎಂದರು.
ಪಿಂಚಣಿಗೆ ಸಂಬಂಧಿತ ಸಮಸ್ಯೆಗಳ ನಿವಾರಣೆಗೆ ನಾನು ಪ್ರತಿ 15 ದಿನಕ್ಕೊಮ್ಮೆ ಪಿಂಚಣಿ ಅದಾಲತ್ ನಡೆಸಲು ನಿರ್ಧರಿಸಿದ್ದೇನೆ. ರಬಕವಿ-ಬನಹಟ್ಟಿ ನಗರಸಭೆಗೆ ಈ ಬಾರಿ ಮುಖ್ಯಮಂತ್ರಿಗಳು ವಿಶೇಷ ಆಸಕ್ತಿ ವಹಿಸಿ 5ಕೋಟಿ ಮೊತ್ತದ ವಿಶೇಷ ಅನುದಾನ ಮತ್ತು 30 ಕೋಟಿ ನಗರೋತ್ಥಾನ ಯೋಜನೆಗೆ ಹಣ ಮಂಜೂರು ಮಾಡಿದ್ದಾರೆ. ಅಭಿವೃದ್ಧಿ ಕಾಮಗಾರಿ ನಡೆಸಲು ಮತ್ತು ನಗರ ಸೌಂದರ್ಯೀಕರಣಕ್ಕೆ ಹಣಕಾಸಿನ ತೊಂದರೆ ಇಲ್ಲದ ಕಾರಣ ಕ್ಷೇತ್ರದಲ್ಲಿನ ಅಗತ್ಯ ಕಾಮಗಾರಿ ಆರಂಭಗೊಳ್ಳಲಿವೆ. ಸರ್ಕಾರದ ವಿವಿಧ ಇಲಾಖೆಗಳಿಂದ ಹೆಚ್ಚುವರಿ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲು ನಾನು ಬದ್ಧ ಎಂದರು.
ನಗರಸಭೆ ಅಧ್ಯಕ್ಷ ಸಂಜಯ ತೆಗ್ಗಿ, ಉಪಾಧ್ಯಕ್ಷೆ ವಿದ್ಯಾ ಧಬಾಡಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸಪ್ರಭು ಹಟ್ಟಿ, ರಬಕವಿ-ಬನಹಟ್ಟಿ ನಗರಸಭೆ ಸ್ಥಾಯಿ ಸಮಿತಿ ಚೇರಮನ್ನರಾದ ಸದಾಶಿವ ಪರೀಟ, ಗೌರಿ ಮಿಳ್ಳಿ, ಜಯಶ್ರೀ ಬಾಗೇವಾಡಿ, ದೀಪಾ ಕೊಣ್ಣೂರ, ದುರ್ಗವ್ವ ಹರಿಜನ, ಶ್ರೀಶೈಲ ಬಾಗೇವಾಡಿ, ಯಲ್ಲಪ್ಪ ಕಟಗಿ, ವಿಜಯ ಕಲಾಲ, ಚಿದಾನಂದ ಹೊರಟ್ಟಿ, ಆನಂದ ಕಂಪು, ಪರಪ್ಪ ಬಿಳ್ಳೂರ, ಉಪತಹಶೀಲ್ದಾರ್ ಶ್ರೀಕಾಂತ ಮಾಯನ್ನವರ, ಬಸವರಾಜ ಬಿಜ್ಜರಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.