ಹಸಿರು ನ್ಯಾಯಪೀಠ ನಿರ್ದೇಶನ; ಪಾಲನೆ ಕಡ್ಡಾಯ
Team Udayavani, Jul 24, 2019, 10:46 AM IST
ಬಾಗಲಕೋಟೆ: ನಗರದಲ್ಲಿ ಘನತ್ಯಾಜ್ಯ ವಸ್ತು ವಿಲೇವಾರಿ ಕುರಿತು ಜರುಗಿದ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮಾತನಾಡಿದರು.
ಬಾಗಲಕೋಟೆ: ಜಿಲ್ಲೆಯ 15 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬರುವ ಪ್ರತಿಯೊಂದು ವಾಡ್‌ರ್ಗಳ ಮನೆ ಮನೆಗಳ ಕಸ ಸಂಗ್ರಹಿಸಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಸೂಚಿಸಿದರು.
ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಘನ ತ್ಯಾಜ್ಯ ವಸ್ತು ವಿಲೇವಾರಿ ಕುರಿತು ಜರುಗಿದ ಸಭೆಯಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠದ ಆದೇಶದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಶೇ.100 ರಷ್ಟು ಕಸ ಸಂಗ್ರಹಣೆ ಮಾಡಬೇಕು. ಈಗಾಗಲೇ ಎಲ್ಲ ಸ್ಥಳೀಯ ಸಂಸ್ಥೆಗಳ 326 ವಾರ್ಡ್‌ಗಳ ಪೈಕಿ 80 ವಾರ್ಡಗಳಲ್ಲಿ ಶೇ. 100 ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ ಮಾಡಿ ಸಂಗ್ರಹಿಸಲಾಗುತ್ತಿದೆ ಎಂದು ಸಭೆಗೆ ತಿಳಿಸಿದಾಗ ಜು.25 ರೊಳಗಾಗಿ 20 ವಾರ್ಡ್‌ಗಳಲ್ಲಿ ತ್ಯಾಜ್ಯ ವಿಂಗಡಣೆಗೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನೀಡಿದ ನಿರ್ದೇಶನ ಕಟ್ಟುನಿಟ್ಟಾಗಿ ಪಾಲಿಸಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮನೆ ಮನೆ ಕಸ ಸಂಗ್ರಹ ಹಾಗೂ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಸಾರ್ವಜನಿಕರು ನಗರ ಸ್ಥಳೀಯ ಸಂಸ್ಥೆಗಳ ಆಡಳಿತದೊಂದಿಗೆ ಸಹಕರಿಸಿ ಮನೆ ಮನೆ ಕಸ ಸಂಗ್ರಹಣೆ ಹಾಗೂ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಗೆ ಸಹಕರಿಸಿ ನಗರದ ಸ್ವಚ್ಛತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
ಪ್ರೊಬೆಷನರಿ ಐಎಎಸ್ ಅಧಿಕಾರಿ ಗರಿಮಾ ಪೋವಾರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಿ.ಎಚ್. ಗೋನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್. ದೇಸಾಯಿ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.