ಯುವಶಕ್ತಿಗೆ ಮಾರ್ಗದರ್ಶನ ನೀಡಿ: ಫೀರಜಾತಸಿಂಗ್‌

ಜೀವನ ಪರಿವರ್ತನೆ ಮಾಡಿಕೊಳ್ಳುವುದರ ಜತೆ ತಮ್ಮ ಉದ್ಯೋಗವನ್ನು ಹೆಚ್ಚಳ ಮಾಡಿಕೊಳ್ಳಲು ದಾರಿಯಾಗುತ್ತದೆ.

Team Udayavani, May 2, 2022, 5:52 PM IST

ಯುವಶಕ್ತಿಗೆ ಮಾರ್ಗದರ್ಶನ ನೀಡಿ: ಫೀರಜಾತಸಿಂಗ್‌

ಇಳಕಲ್ಲ: ಯುವ ಶಕ್ತಿ ದುಶ್ಚಟಗಳ ದಾಸರಾಗುತ್ತಿದ್ದು, ಅವರು ಸನ್ಮಾರ್ಗದತ್ತ ಸಾಗಬೇಕಾದರೇ ಉತ್ತಮ ಮಾರ್ಗದರ್ಶನದ ಅವಶ್ಯಕತೆ ಇದೆ. ಈ ಕಾರ್ಯವನ್ನು ಜೇಸಿ ಸಂಸ್ಥೆ ಮಾಡಲು ಮುಂದಾಗಿದೆ ಎಂದು ಅಮೃತಸರ ನಗರದ ಜೇಸಿ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ ಜೆಎಫ್‌ಇ ದಿದಾ ಫೀರಜಾತಸಿಂಗ್‌ ಲೋಟೆಯಾ ಹೇಳಿದರು.

ನಗರದಲ್ಲಿ ಅಂತಾರಾಷ್ಟ್ರೀಯ ಸಂಸ್ಥೆಯ ಜ್ಯೂನಿಯರ್‌ ಚೇಂಬರ್‌ ಆಪ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯ ವಲಯ 24ರ ಇಳಕಲ್ಲ ಘಟಕದಲ್ಲಿ ನಡೆದ ಮಲ್ಟಿ ಚಾಪ್ಟರ್‌ ವಿಜಿಟ್‌ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜೇಸಿ ಸಂಸ್ಥೆಯು 18 ವರ್ಷದಿಂದ 40 ವರ್ಷದ ಒಳಗಿನ ಯುವ ಜನಾಂಗಕ್ಕೆ ಉತ್ತಮ ಕಾರ್ಯ ಮಾಡುವ ಅನೇಕ ಮಾರ್ಗಗಳ ತರಬೇತಿ ಕೊಡಲು ಮುಂದಾಗಿದೆ. ಅದರ ಸದುಪಯೋಗವನ್ನು ಎಲ್ಲ ಯುವಕ ಯುವತಿಯರು ಪಡೆಯಬೇಕು. ಸಾರ್ವಜನಿಕರು ಸಾಮಾಜಿಕ ಸೇವೆ ಮಾಡುವ ಸಂಘ ಸಂಸ್ಥೆಗಳ ಸದಸ್ಯರಾಗುವ ಮೂಲಕ ತಮ್ಮ ದೈನಂದಿನ ಚಟುವಟಿಕೆಗಳ ಜತೆಗೆ ಸಾಮಾಜಿಕ ಚಿಂತನೆ ಹಾಗೂ ಸಮಾಜಸುಧಾರಣೆಯಂತಹ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಾರೆ.

ಇದರಿಂದ ಅವರ ಜೀವನ ಪರಿವರ್ತನೆ ಮಾಡಿಕೊಳ್ಳುವುದರ ಜತೆ ತಮ್ಮ ಉದ್ಯೋಗವನ್ನು ಹೆಚ್ಚಳ ಮಾಡಿಕೊಳ್ಳಲು ದಾರಿಯಾಗುತ್ತದೆ. ನಗರದ ಮಹಿಳಾ ಜೇಸಿ ಸಂಸ್ಥೆಯು ಸಮಾಜಮುಖಿ ಕಾರ್ಯ ಮಾಡುವುದರ ಮೂಲಕ ರಾಜ್ಯದಲ್ಲೇ ಅತ್ಯುತ್ತಮ ಸಂಸ್ಥೆ ಎಂದು ಗುರುತಿಸಿಕೊಂಡಿರುವುದು ಹೆಮ್ಮೆ ವಿಷಯವಾಗಿದೆ ಎಂದು ಹೇಳಿದರು.

ಜೇಸಿ ಸಂಸ್ಥೆಯ ವಲಯ 24ರ ಅಧ್ಯಕ್ಷೆ ಜೇಸಿ ದೀಪಿಕಾ ಬೀದರ್‌ ಮಾತನಾಡಿ, ಜೇಸಿ ಸಂಸ್ಥೆಯು ರಾಜ್ಯದ ದಕ್ಷಿಣ ಭಾಗದಲ್ಲಿ ಬೆಳವಣಿಗೆ ಹೊಂದುತ್ತಿದೆ. ಎಲ್ಲ ಸದಸ್ಯರು ಸಹಕರಿಸಬೇಕುಎಂದು ತಿಳಿಸಿದರು.

ಇಳಕಲ್ಲ ಜೇಸಿ ಸಿಲ್ಕ ಸಿಟಿ ಘಟಕ, ಇಳಕಲ್ಲಿನ ಜೇಸಿ ಮಹಾಂತಶ್ರೀ ಘಟಕ, ವಿಜಯಪುರದ ಜೇಸಿ ವಿಜಯಪುರ ಘಟಕ ಹಾಗು ಜೇಸಿ ವಿಜಯಪುರ ವಿಶ್ವರೂಪ ಘಟಕದ ಅದ್ಯಕ್ಷರು ಹಾಗು ಸದಸ್ಯರು ಭಾಗವಹಿಸಿದ್ದರು. ನಗರದ ಜೇಸಿ ಸಿಲ್ಕ ಸಿಟಿ ಸಂಸ್ಥೆಯ ಅಧ್ಯಕ್ಷೆ ಜೇಸಿ ವಿದ್ಯಾ ಸಜ್ಜನ ಅಧ್ಯಕ್ಷತೆ ವಹಿಸಿದ್ದರು. ಜೇಸಿ ವಲಯ 24ರ ಉಪಾದ್ಯಕ್ಷ ಗೌರಿಶ ಭಾರ್ಗವ, ನಗರದ ಜೇಸಿ ಅವಿನಾಶ ಅಕ್ಕಿ, ವಿಜಯಪುರದ ಜೇಸಿ ಹರವಿ, ಜೇಸಿ ಹಿರೇಮಠ ಉಪಸ್ಥಿತರಿದ್ದರು. ಮಹೇಶ್ವರಿ
ಮತ್ತು ರಾಜೇಶ್ವರಿ ಪ್ರಾರ್ಥಿಸಿದರು. ಮಮತಾ ಪಾಟೀಲ ಸ್ವಾಗತಿಸಿದರು. ರಶ್ಮಿ ಗವಿಮಠ ನಿರೂಪಿಸಿದರು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.