ಶ್ರೀರಾಮಸೇನೆ ಕಾರ್ಯಕರ್ತರಿಗೆ ಬಂದೂಕು ತರಬೇತಿ: 27 ಮಂದಿ ವಿರುದ್ಧ ಪ್ರಕರಣ ದಾಖಲು
ಕಾಜಿಬೀಳಗಿ ಗುಡ್ಡದಲ್ಲಿ ಡಿ.24ರಿಂದ 29ರವರೆಗೆ ನಡೆದಿದ್ದ ತರಬೇತಿ, ದೂರು ನೀಡಿದ್ದ ಜಮೀನು ಮಾಲೀಕ
Team Udayavani, Jan 11, 2025, 6:45 AM IST
ಬಾಗಲಕೋಟೆ: ಜಮಖಂಡಿ ತಾಲೂಕಿನ ಕಾಜಿಬೀಳಗಿಯಲ್ಲಿ ಅನುಮತಿ ಇಲ್ಲದೇ ವ್ಯಕ್ತಿತ್ವ ವಿಕಸನ ಶಿಬಿರದ ಹೆಸರಿನಲ್ಲಿ ಬಂದೂಕು ತರಬೇತಿ ನೀಡಿದ ಆರೋಪದ ಮೇಲೆ 27 ಜನ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ.
ಕಾಜಿಬೀಳಗಿ ಗ್ರಾಮದ ಗುಡ್ಡದ ಖಾಸಗಿ ಭೂಮಿಯಲ್ಲಿ ಕಳೆದ ಡಿ. 24ರಿಂದ 29ರ ವರೆಗೆ ಕರಾಟೆ, ಗುಡ್ಡಗಾಡು ಪ್ರಯಾಣ, ಬಂದೂಕು ತರಬೇತಿ ಸೇರಿದಂತೆ ವಿವಿಧ ಸಾಹಸಮಯ ತರಬೇತಿ ನೀಡಲಾಗಿತ್ತು. ಬಾಗಲಕೋಟೆ, ಗದಗ ಜಿಲ್ಲೆಯವರು ಎನ್ನಲಾದ ಪ್ರಕಾಶ ಪತ್ತಾರ, ಮಹೇಶ ಬಿರಾದಾರ, ಯಮನಪ್ಪ ಕೋರಿ, ಆನಂದ ಜಂಬಗಿಮಠ, ರಾಜು ಖಾನಪ್ಪನವರ, ಗಂಗಾಧರ ಕುಲಕರ್ಣಿ, ಮಹೇಶ ರೋಕಡೆ, ಮಹಾಂತೇಶ ಹೊನ್ನಪ್ಪನವರ ಸೇರಿದಂತೆ 27 ಜನ ಕಾರ್ಯಕರ್ತರು ಈ ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಬಂದೂಕು ತರಬೇತಿ ನೀಡಿದ್ದಲ್ಲದೇ, ತರಬೇತಿ ಪಡೆಯುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಜನರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ವರ್ತಿಸಿದ್ದರು ಎನ್ನಲಾಗಿದೆ.
ಶ್ರೀರಾಮ ಸೇನೆಯಿಂದ ಯುವಕರಿಗೆ ವ್ಯಕ್ತಿತ್ವ ವಿಕಸನ ಅಭ್ಯಾಸ ವರ್ಗ ತರಬೇತಿ, ಸೇನಾ ತರಬೇತಿ ಮಾದರಿಯಲ್ಲಿ ತರಬೇತಿ ನೀಡಲಾಗಿತ್ತು. ದಂಡ ಪ್ರಯೋಗ, ಏರ್ ಗನ್ ಮೂಲಕ ತರಬೇತಿ, ಕರಾಟೆ ಸೇರಿದಂತೆ ವಿವಿಧ ಕೌಶಲ ತರಬೇತಿ ನೀಡಲಾಗಿತ್ತು, ಸುರಕ್ಷೆಗಾಗಿ ವಿವಿಧ ರûಾ ತರಬೇತಿ, ಮುಳ್ಳುಗಂಟಿಯ ಗುಂಡಿಯಲ್ಲಿ ಹಾದು ಹೋಗುವುದು, ಬಂದೂಕು ಬಳಕೆ ಟಾರ್ಗೆಟ್ ಸೆಟ್ ಮಾಡಿ ಗುರಿ ಇಟ್ಟು ಹೊಡೆಯುವ ತರಬೇತಿ ಕೊಡುತ್ತಿದ್ದರು ಎನ್ನಲಾಗಿದೆ. ತರಬೇತಿ ನಡೆದ ಜಾಗದ ಮಾಲಕ ನಿಂಗಪ್ಪ ಹೂಗಾರ ಈ ಕುರಿತು ಸಾವಳಗಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
MUST WATCH
ಹೊಸ ಸೇರ್ಪಡೆ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.