ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಿಸಲು ಸಹಕರಿಸಿ; ಚೇತನಾ ಆರೀಕಟ್ಟಿ

ಮಕ್ಕಳಿಗೆ ಪ್ರತಿಭೆ ಪ್ರದರ್ಶಿಸಲು ಸಮಾನ ಅವಕಾಶ ನೀಡಬೇಕು

Team Udayavani, Nov 16, 2022, 6:30 PM IST

ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಿಸಲು ಸಹಕರಿಸಿ; ಚೇತನಾ ಆರೀಕಟ್ಟಿ

ಹುನಗುಂದ: ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಿಸುವುದರ ಜತೆಗೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹುನಗುಂದದ ಜೆಎಂಎಫ್‌ಸಿ ನ್ಯಾಯಾಲಯದ ಅಪರ ದಿವಾಣಿ ನ್ಯಾಯಾಧೀಶರಾದ ಚೇತನಾ ಆರೀಕಟ್ಟಿ ಹೇಳಿದರು.

ಪಟ್ಟಣದ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಉಚಿತ ಪ್ರಸಾದ ನಿಲಯದಲ್ಲಿ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಾರ್ಯಾಲಯ ಹಾಗೂ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಭಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಪಾಠದ ಜತೆಗೆ ಪಠ್ಯೇತರ ಚಟುವಟಿಕೆ ಮತ್ತು ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡುವುದು ಅವಶ್ಯ. ಉತ್ತಮ ಶಿಕ್ಷಣ, ಆರೋಗ್ಯ, ಆಹಾರ ನೀಡುವುದು ಮೊದಲ ಕರ್ತವ್ಯ. ಉತ್ತಮ ಸಂಸ್ಕಾರ, ದೇಶಭಕ್ತಿ, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹಾನ್‌ ನಾಯಕರ ಚರಿತ್ರೆ ಮನದಟ್ಟು ಮಾಡಿಕೊಡಬೇಕು ಎಂದರು. ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಓದಿನ ಜತೆಗೆ ಅವರಲ್ಲಿನ ಇತರೆ ಕೌಶಲ್ಯ ಗುರುತಿಸಿ ಬೆಳೆಸುವುದೇ ಮಕ್ಕಳ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದರು.

ವಿ.ಮ. ಸಂಘದ ಗೌರವ ಕಾರ್ಯದರ್ಶಿ ಡಾ| ಮಹಾಂತೇಶ ಕಡಪಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳೇ ದೇಶದ ಸಂಪತ್ತು. ಎಲ್ಲ ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಬೆಳೆಸುವ ಜವಾಬ್ದಾರಿಯನ್ನು ತಂದೆ, ತಾಯಿ. ಶಿಕ್ಷಕ ಮತ್ತು ಸಮಾಜ ತೆಗೆದುಕೊಳ್ಳಬೇಕು. ಮಕ್ಕಳಿಗೆ ಪ್ರತಿಭೆ ಪ್ರದರ್ಶಿಸಲು ಸಮಾನ ಅವಕಾಶ ನೀಡಬೇಕು ಎಂದರು.

ನ್ಯಾಯವಾದಿ ಪವನ ಎಸ್‌. ಕರವಾಮಾತನಾಡಿ, ಶಿಕ್ಷಣ ಸಂಸ್ಥೆಗಳು ಹಾಕಿಕೊಡುವ ಬುನಾದಿ ಭದ್ರವಾಗಿದ್ದರೆ ಮಾತ್ರ ವಿದ್ಯಾರ್ಥಿ ಸಾಧನೆಯ ಶಿಖರ ಏರಲು ಸಾಧ್ಯ. ಈ ನಿಟ್ಟಿನಲ್ಲಿ ಕೇವಲ ಪಠ್ಯಗಳಿಗೆ ಸೀಮಿತವಾಗಿರುವ ಹಕ್ಕು ಕಾನೂನುಗಳನ್ನು ದೈನಂದಿನ ಜೀವನಕ್ಕೆ ಅಳವಡಿಸಿಕೊಳ್ಳುವಂತೆ ಶಿಕ್ಷಣ ಸಂಸ್ಥೆಗಳು ರೂಪಿಸಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಮಾಧವರಾವ ದೇಶಪಾಂಡೆ, ಉಚಿತ ಪ್ರಸಾದ ನಿಲಯದ ಕಾರ್ಯಾದ್ಯಕ್ಷ ಸಂಗಣ್ಣ ಚಿನಿವಾಲ, ನಿರ್ದೇಶಕರಾದ ವೀರಣ್ಣ ಬಳೂಟಗಿ, ಅರುಣ ದುದ್ಗಿ, ವಿ.ಮ ಸಂಘದ ಆಡಳಿತಾ ಕಾರಿ ಶಶಿಕಲಾ ಎಸ್‌. ಶಿಕ್ಷಣ ಇಲಾಖೆ ಸಂಪನ್ಮೂಲ ವ್ಯಕ್ತಿಗಳಾದ ವಿನೋಧ ಭೋವಿ, ಎ.ಎಚ್‌. ಗೌಡರ, ಬಿ.ವೈ. ಮುಂಡೇವಾಡಿ, ಮುಖ್ಯ ಗುರುಮಾತೆ ಎಸ್‌ .ಪಿ. ಮಲ್ಲಪ್ಪನ್ನವರ, ನ್ಯಾಯಾಲಯ ಸಿಬ್ಬಂದಿ ಚನ್ನಪ್ಪ ಮುದಗಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.