ಗ್ರಾಮೀಣ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಸಿದ್ದು ಸವದಿ
Team Udayavani, Jun 28, 2022, 7:16 PM IST
ರಬಕವಿ-ಬನಹಟ್ಟಿ: ಗ್ರಾಮೀಣ ಪ್ರದೇಶದ ಮಕ್ಕಳು ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು ಮತ್ತು ಅವರು ತಮ್ಮ ಗ್ರಾಮದಲ್ಲಿಯೇ ಉನ್ನತ ಶಿಕ್ಷಣ ಕಲಿಯುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಅವರು ಸಮೀಪದ ನಾವಲಗಿ ಗ್ರಾಮದಲ್ಲಿ ರೂ. 2 ಕೋಟಿ ಮೊತ್ತದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿರುವ ಶಾಲಾ ಕಾಲೇಜುಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸುವುದರ ಜೊತೆಗೆ ಅವುಗಳಿಗೆ ಬೇಕಾಗುವ ಮೂಲ ಸೌಕರ್ಯಗಳನ್ನು ಕೂಡಾ ನೀಡಲಾಗುವುದು. ಶಾಲಾ ಕಾಲೇಜುಗಳಲ್ಲಿಯ ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ಶಾಸಕರ ಗಮನಕ್ಕೆ ತರಬೇಕು. ಶಾಲಾ ಕಾಲೇಜುಗಳ ಅಭಿವೃದ್ಧಿಯಲ್ಲಿ ಶಾಲಾ ಅಭಿವೃದ್ಧಿ ಮಂಡಳಿ, ಶಿಕ್ಷಕರ, ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಪಾತ್ರ ಕೂಡಾ ಮುಖ್ಯವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಂಡು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವಂತಾಗಲಿ ಎಂದು ಶಾಸಕ ಸವದಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾಲೇಜು ಪ್ರಾಚಾರ್ಯ ಶರತ್ಚಂದ್ರ ಜಂಬಗಿ ಮಾತನಾಡಿ, ಕಾಲೇಜು ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಮತ್ತು ವಿದ್ಯಾರ್ಥಿಗಳ ಸಹಕಾರ ಮುಖ್ಯವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಶಾಸಕರಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಮನವಿ ಪತ್ರ ನೀಡಿದರು.
ಕಾರ್ಯಕ್ರಮದಲ್ಲಿ ಗುರು ಮರಡಿಮಠ ಮಾತನಾಡಿದರು. ವೇದಿಕೆಯ ಮೇಲೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸಪ್ಪ ಬಳವಾಡ, ಉಪಾಧ್ಯಕ್ಷೆ ರಚನಾ ಕಾಂತಿ, ಆನಂದ ಕಂಪು, ಅಲ್ಲಪ್ಪ ಮುಗಳಖೋಡ, ಗೋವಿಂದ ಪಾಟೀಲ, ಮುತ್ತಪ್ಪ ಅಂಗಡಿ, ಶಂಕರ ಧರಿಗೌಡರ, ಈರಪ್ಪ ವಾಲಿ ಸೇರಿದಂತೆ ಅನೇಕರು ಇದ್ದರು.
ಎಂ.ಸಿ. ನರೆಗಲ್ ಸ್ವಾಗತಿಸಿದರು.ಬಿ.ಎಸ್.ಚಲವಾದಿ ನಿರೂಪಿಸಿದರು. ಬಿ.ಬಿ.ಕುಂಬಾರ ವಂದಿಸಿದರು.
ಕಾರ್ಯಕ್ರಮದಲ್ಲಿ ಲಕ್ಷ್ಮಣ ಸವದಿ, ರೇಖಾ ಕಾಂತಿ, ಶಾಂತಾ ಬಿದರಿ, ಮಹಾದೇವಿ ಸಂಗಾನಟ್ಟಿ, ಆರತಿ ಸಂಗಾನಟ್ಟಿ, ಪುಟ್ಟವ್ವ ಭಜಂತ್ರಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.