ಸೌಲಭ್ಯಗಳಿಗೆ ಆಗ್ರಹಿಸಿ ಹೆದ್ದಾರಿ ತಡೆ
Team Udayavani, Sep 22, 2019, 9:54 AM IST
ಮುಧೋಳ: ಘಟಪ್ರಭಾ ನದಿಯ ಪ್ರವಾಹದಲ್ಲಿ ಸಿಲುಕಿ ಕಂಗಾಲಾಗಿರುವ ನೆರೆ ಸಂತ್ರಸ್ತರಿಗೆ ಈವರೆಗೂ ನಯಾಪೈಸೆ ಪರಿಹಾರ ದೊರಕಿಲ್ಲ. ಸಂತ್ರಸ್ತರಿಗೆ ಮೂಲಭೂತ ಸೌಲಭ್ಯ ಆಗ್ರಹಿಸಿ ಜೀರಗಾಳ ಗ್ರಾಮಸ್ಥರು ವಿಜಯಪುರ-ಬೆಳಗಾವಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಗ್ರಾಮದ ಮಹಿಳೆಯರು ಹೆದ್ದಾರಿ ಬಂದ್ ಮಾಡಿ ರಸ್ತೆ ಮೇಲೆಯೇ ಧರಣಿ ಕುಳಿತು ಪ್ರತಿಭಟಿಸಿದರು. ನೆರೆ ಸಂತ್ರಸ್ತರಾದ ನಾವು ಮನೆ ಮಠ ಜಮೀನು ಕಳೆದುಕೊಂಡು ಬೀದಿಗೆ ಬಿದ್ದು ತಿಂಗಳು ಕಳೆದರೂ ನಮ್ಮ ಗೋಳು ಕೇಳುವವರೇ ಇಲ್ಲ. ಈ ಹಿಂದೆಯೇ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ನಮ್ಮ ಅಹವಾಲು ಹೇಳಿಕೊಂಡು ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ತುರ್ತಾಗಿ ಕೊಡುವ 10 ಸಾವಿರ ರೂಪಾಯಿಗಳಾಗಲಿ, ಮನೆ ಕಟ್ಟಿಕೊಳ್ಳುವ ಕಂತಾಗಲಿ, ಕನಿಷ್ಠ ತಗಡಿನ್ ಶೆಡ್‌ಗಳನ್ನು ಸಹನಮಗೆ ಒದಗಿಸಿಲ್ಲ. ದನಕರುಗಳು ಸಹ ಮೇವು, ನೆಲೆ ಇಲ್ಲದೆ ಪರದಾಡುತ್ತಿವೆ ಎಂದರು. ನಡುಗಡ್ಡೆಯಂತಾಗಿದ್ದ ಜೀರಗಾಳಗ್ರಾಮಕ್ಕೆ ಸಂಘ ಸಂಸ್ಥೆಗಳಿಂದಾಗಲಿ, ಸರ್ಕಾರದಿಂದ ಆಗಲಿ ನೆರವು ಸಿಗಲೇ ಇಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ದಿಢೀರ್ ಪ್ರತಿಭಟನೆಯಿಂದ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡಿದರು.
ತಾಪಂ ಅಧ್ಯಕ್ಷ ತಿಮ್ಮಣ್ಣ ಬಟಕುರ್ಕಿ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಜಿಲ್ಲಾ ಪಂಚಾಯತ ಸದಸ್ಯೆ ರತ್ನಕ್ಕಾ ತಳೇವಾಡ, ತಹಶೀಲ್ದಾರ್ ಸಂಜಯ ಇಂಗಳೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.