23 ಜನರಿಗೆ ಹೋಂ ಕ್ವಾರಂಟೈನ್
Team Udayavani, Jul 10, 2020, 3:27 PM IST
ಮಹಾಲಿಂಗಪುರ: ಕಳೆದ ಆರೇಳು ದಿನಗಳ ಹಿಂದೆ ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಧಾರವಾಡ ಆಸ್ಪತ್ರೆಗೆ ದಾಖಲಾಗಿದ್ದ ಪಟ್ಟಣದ ಬುದ್ನಿಪಿಡಿ ನಿವಾಸಿಗೆ ಕೋವಿಡ್ ದೃಢಪಟ್ಟಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಜು.7ರ ಧಾರವಾಡ ಹೆಲ್ತ್ ಬುಲೆಟಿನ್ ದಲ್ಲಿ ಪತ್ತೆಯಾದ ಡಿಡಬ್ಲೂಡಿ 643ನೇ ಕೋವಿಡ್ ರೋಗಿ ಪಟ್ಟಣದ ನಿವಾಸಿ ಎಂದು ಬುಧವಾರ ರಾತ್ರಿ ಖಚಿತ ಮಾಹಿತಿ ನಂತರ ಬುದ್ನಿಪಿಡಿ ಏರಿಯಾವನ್ನು ಸೀಲ್ ಡೌನ್ ಮಾಡಿ, ಆ ಏರಿಯಾವನ್ನು ಕಂಟೇನ್ಮೆಂಟ್ ಜೋನ್ ಆಗಿ ಪರಿವರ್ತಿಸಲಾಗಿದೆ. ಜತೆಗೆ ರೋಗಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 6 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು.
23 ಜನರಿಗೆ ಕ್ವಾರಂಟೈನ್: ಪಟ್ಟಣದ ಮೊದಲ ಕೋವಿಡ್ ರೋಗಿಯ ಪ್ರಾಥಮಿಕ ಸಂಪರ್ಕ ಹೊಂದಿದ ರೋಗಿಯ ಸಂಬಂಧ ಯುವಕನ ಪ್ರಿಂಟಿಂಗ್ ಪ್ರಸ್ ಇರುವ ಏರಿಯಾಕ್ಕೆ ಸಾರ್ವಜನಿಕರು ಪ್ರವೇಶಿಸದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಜೊತೆಗೆ ರೋಗಿಯ ದ್ವಿತೀಯ ಸಂಪರ್ಕದಲ್ಲಿರುವ 23 ಜನರನ್ನು ಗುರುವಾರ ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ತಾಲೂಕು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ಐದು ತಿಂಗಳಿಂದ ಕೋವಿಡ್ ಕಾಟವಿಲ್ಲದೇ ನಿರಾಳವಾಗಿದ್ದ ಮಹಾಲಿಂಗಪುರಕ್ಕೆ ಕೋವಿಡ್ ವಕ್ಕರಿಸಿ, ಪಟ್ಟಣದ ಜನತೆಯಲ್ಲಿ ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.