ಗುಡೂರ ಸರ್ಕಾರಿ ಆಸ್ಪತ್ರೆಗೆ ಸೌಲಭ್ಯ ಒದಗಿಸಿ
ಆಸ್ಪತ್ರೆಗೆ ಡಿಎಚ್‌ಒ ಡಾ| ದೇಸಾಯಿ ಭೇಟಿ : ಭರವಸೆ ನಂತರ ಪ್ರತಿಭಟನೆ ಹಿಂದಕ್ಕೆ
Team Udayavani, Feb 11, 2021, 1:11 PM IST
ಅಮೀನಗಡ: ಗುಡೂರ(ಎಸ್.ಸಿ) ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೂಲ ಸೌಲಭ್ಯ ಹಾಗೂ ಅಗತ್ಯ ಸಿಬ್ಬಂದಿ ಒದಗಿಸುವಂತೆ ಗ್ರಾಪಂ ಅಧ್ಯಕ್ಷರು ಸದಸ್ಯರು ಹಾಗೂ ಸಾರ್ವಜನಿಕರು ಆಸ್ಪತ್ರೆ ಎದುರು ಪ್ರತಿಭಟನೆ ಮಾಡಿದರು.
ಪ್ರತಿಭಟನಾನಿರತ ಇಳಕಲ್ ತಾಪಂ ಅಧ್ಯಕ್ಷೆ ಶಾರದಾ ಗೋಡಿ ಮತ್ತು ಗ್ರಾಪಂ ಅಧ್ಯಕ್ಷೆ ಚಾಂದನಿ ಇಟಗಿ ಮಾತನಾಡಿ, ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ, ಆಂಬ್ಯುಲೆನ್ಸ್ ಸಮಸ್ಯೆ ಸೇರಿದಂತೆ ಹಲವಾರು ಮೂಲ ಸೌಲಭ್ಯಗಳ ಕೊರತೆಯಿಂದ ಆಸ್ಪತ್ರೆಗೆ ಬರುವ ವೃದ್ಧರು, ಗರ್ಭಿಣಿಯರು ಹಾಗೂ ಬಡ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರಿಂದ ಕೂಡಲೇ ಆರೋಗ್ಯ ಇಲಾಖೆ ಅಧಿ ಕಾರಿಗಳು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂಲ ಸೌಲಭ್ಯ ಒದಗಿಸಬೇಕು ಮತ್ತು ರೋಗಿಗಳಿಗೆ ನಿರಂತರ ಸೇವೆ ಒದಗಿಸುವುದರ ಮೂಲಕ ಬಡ ರೋಗಿಗಳ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಗ್ರಾಪಂ ಸದಸ್ಯ ಇಟಗಿ ಮಾತನಾಡಿ, ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಗುಡೂರ ಸೇರಿದಂತೆ 9 ಗ್ರಾಮಗಳ ಬಡ ರೋಗಿಗಳಿಗೆ ಇದು ಆಸರೆಯಾಗಿದೆ. ಆರೋಗ್ಯ ಕೇಂದ್ರದಲ್ಲಿ ವೈದ್ಯಾ ಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಮೂಲ ಸೌಲಭ್ಯವಿಲ್ಲದ ಕಾರಣ ಬಡ ರೋಗಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಆಂಬ್ಯುಲೆನ್ಸ್ ಸೇವೆ ಇಲ್ಲದೆ ಇರುವುದರಿಂದ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳು ಪರದಾಡುವಂತಾಗಿದೆ. ಆದರಿಂದ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಯಲ್ಲಿ ಕೂಡಲೇ ಆಂಬ್ಯುಲೆನ್ಸ್ ಸೇವೆ ಒದಗಿಸಬೇಕು. ಸಿಬ್ಬಂದಿ ಕೊರತೆಯನ್ನು ಕೂಡಲೇ ತುಂಬಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ :ವಿಶ್ವ ಮಾರುಕಟ್ಟೆಗೆ Mi 11 ಸ್ಮಾರ್ಟ್ ಫೋನ್ ಎಂಟ್ರಿ; ವಿಶೇಷತೆಗಳೇನು?
ಸ್ಥಳಕ್ಕೆ ಜಿಲ್ಲಾ ಆರೋಗ್ಯಾ ಧಿಕಾರಿ ಡಾ|ಅನಂತ ದೇಸಾಯಿ ಭೇಟಿ ಮಾಡಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು. ಇದೆ ತಿಂಗಳೊಳಗೆ ಎಲ್ಲ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ತಾಲೂಕು ವೈದ್ಯಾ ಧಿಕಾರಿ ಡಾ|ಪ್ರಶಾಂತ ತುಂಬಗಿ, ಆಡಳಿತ ವೈದ್ಯಾಧಿ ಕಾರಿ ಡಾ| ರಾಘವೇಂದ್ರ ಸವದತ್ತಿ, ಡಾ| ಹರ್ಷವರ್ಧನ ಸಜ್ಜನ ಇದ್ದರು. ಪ್ರತಿಭಟನೆಯಲ್ಲಿ ಗ್ರಾಪಂ ಉಪಾಧ್ಯಕ್ಷ ಹನುಮಂತಪ್ಪ ತೊಟ್ಲಪ್ಪನವರ, ಸದಸ್ಯರಾದ ವೀರೇಶ ಮ್ಯಾಗೇರಿ, ಹಸೀನಾ ಜರತಾರಿ, ಫಕ್ರುದ್ದೀನ ವಾಲಿಕರ, ಶಿವಕುಮಾರ ಸಾಲಿಮಠ, ಮಹಿಬೂಬ್ ಗುಡದಾರಿ, ಸಲೀಂ ಜರತಾರಿ, ಆನಂದ ವಡ್ಡರ್,ಫಕೀರಪ್ಪ ತೊಟ್ಲಪ್ಪನವರ, ವಿವಿಧ ಸಂಘಟನೆಯವರು ಹಾಗೂ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.