ಕೆರೂರ ಪಟ್ಟಣದಲ್ಲಿ ಹಿಂದೂ ಕಾರ್ಯಕರ್ತರ ಬೃಹತ್ ಶೋಭಾಯಾತ್ರೆ
ಮಣ್ಣು ತಿನ್ನಬೇಕಾಗುತ್ತದೆ : ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಜಗದೀಶ ಕಾರಂತ್
Team Udayavani, Sep 19, 2022, 10:32 PM IST
ಕುಳಗೇರಿ ಕ್ರಾಸ್: ಕೆರೂರ ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮತ್ತು ಬಂಧನ ಖಂಡಿಸಿ ಹಿಂದೂ ಜಾಗರಣ ವೇದಿಕೆ ನಡೆಸಿದ ಕೆರೂರ ಚಲೋ ಶಕ್ತಿ ಪ್ರದರ್ಶನ ಮಾಡಿದರು.ಸುಮಾರು ಎರಡು ಸಾವಿರಕ್ಕೂ ಅಧಿಕ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.
ರಾಚೋಟೇಶ್ವರ ದೇವಸ್ಥಾನದಿಂದ ಬಸ್ ನಿಲ್ದಾಣ ಸೇರಿದಮತೆ ರಾಷ್ಟ್ರೀಯ ಹೆದ್ದಾರಿ 218ರ ಮೂಲಕ ಸಾಗಿದ ಮೆರವಣಿಗೆ ತರಕಾರಿ ಮಾರುಕಟ್ಟೆಯ ಬೃಹತ್ ವೇದಿಕೆಗೆ ಬಂದು ತಲುಪಿತು. ಜಿಲ್ಲೆ ಹಾಗೂ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಹಿಂದೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹಿಂದೂ ಕಾರ್ಯಕರ್ತರು ಮತ್ತು ಮಹಿಳೆಯರು ಸಿಪಿಐ ಕರಿಯಪ್ಪ ಬನ್ನೆ ವಿರುದ್ಧ ಘೋಷಣೆ ಕೂಗಿದರು. ಬಂಧಿತ ಆರೋಪಿಗಳ ತಾಯಂದಿರು ಮತ್ತು ಕುಟುಂಬಸ್ಥರು ಕಣ್ಣೀರು ಹಾಕಿ ಬೊಬ್ಬೆ ಹೊಡೆದು ಪೊಲೀಸ್ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು. ಮೆರವಣಿಗೆ ವೇಳೆ ಓರ್ವ ಮಹಿಳೆ ಅಸ್ವಸ್ಥರಾಗಿದ್ದು, ಸೇರಿದ್ದ ಜನರು ಮಹಿಳೆಯ ಆರೈಕೆ ಮಾಡಿದರು.
ಮೆರವಣಿಗೆ ಉದ್ದಕ್ಕೂ ಕೇಸರಿ ಧ್ವಜಗಳು ರಾರಾಜಿಸಿದವು. ಪಟ್ಟಣದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಕೆರೂರ ಚಲೋ ಬಂದಗೆ ಬೆಂಬಲ ವ್ಯಕ್ತಪಡಿಸಿದರು.
ಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ ಮೂವರು ಡಿವೈಎಸ್ಪಿಗಳು 9 ಇನಸ್ಪೆಕ್ಟರ್ ಮತ್ತು 15 ಸಬ್ ಇನ್ಸ್ ಪೆಕ್ಟರ್ 200 ಪೇದೆಗಳು 9 ಸಿಆರ್ ಪಿ ತುಕಡಿ ಸೂಕ್ತ ಬಂದೋಬಸ್ತ್ ನೀಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದರು.
ಸರ್ಕಾರಕ್ಕೆ ಎಚ್ಚರಿಕೆ
ಘಟನೆ ಸಂಭಂದ ಪೊಲೀಸರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನನ್ನ ನೇತೃತ್ವದಲ್ಲೇ ಹೋರಾಟ ಮಾಡುವುದಾಗಿ ಹಿಂದೂ ಮುಖಂಡ ಜಗದೀಶ ಕಾರಂತ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಕೆರೂರ ಪಟ್ಟಣದಲ್ಲಿ ಜಿಲ್ಲೆಯ ಹಿಂದೂ ಜಾಗರಣ ವೇದಿಕೆಯವರು ಹಮ್ಮಿಕೊಂಡಿದ್ದ ಕೆರೂರ ಚಲೋ ಕಾರ್ಯಕ್ರಮದಲ್ಲಿ ಶೋಭಾಯಾತ್ರೆ ನಂತರ ಮಾತನಾಡಿದ ಅವರು ಕೆಲವರು ಹಿಂದೂ ಸಂಘಟನೆ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಹಿಂದೂ ಸಂಘಟನೆ ಇದಕ್ಕೆಲ್ಲ ಅವಕಾಶ ನೀಡೋದಿಲ್ಲ. ಕೆರೂರಲ್ಲಿ ನಡೆದ ಘಟನೆ ಸಹಿಸೋದಿಲ್ಲ ನ್ಯಾಯ ಸಿಗುವವರೆಗೂ ನಾವು ಹಿಂದೆ ಸರಿಯೋದಿಲ್ಲ. ಹಿಂದೂ ಸಮಾಜ ಸಂರಕ್ಷಣೆಯೇ ನಮ್ಮ ಗುರಿಯಾಗಿದೆ ಎಂದರು.
ಈ ಹಿಂದೆ ನಮ್ಮ ಕಾರ್ಯಕರ್ತ ಅರುಣ ಮೇಲೆ ಹಲ್ಲೆಯಾದಾಗ ಅದು ವೈಯಕ್ತಿಕ ಗಲಾಟೆ ಎಂದು ಹೇಳಿಕೊಂಡಿದ್ದ ಸಿಎಂ ಅವರು ಪೊಲೀಸರ ಮೇಲೆ ಕಾರ್ಯಕರ್ತರು ಹಲ್ಲೆ ಮಾಡಿದ್ರ ಅಂತ ಕೇಳಿದ ತಕ್ಷಣ ಕ್ರಮಕ್ಕೆ ಮುಂದಾದರು . ಇದೇ ಪರಿಸ್ಥಿತಿ ಮುಂದುವರೆದರೆ ಮುಂಬರುವ ಚುನಾವಣೆಯಲ್ಲಿ ಇದರ ಪರಿಣಾಮವನ್ನ ಸರ್ಕಾರ ಎದುರಿಸಿ ಮಣ್ಣು ತಿನ್ನಬೇಕಾಗುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಮಾತು ಹೇಳಿದರು.
ಘಟನೆ ಕುರಿತು ಡಿವೈಎಸ್‌ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಗಣೇಶ ಉತ್ಸವಕ್ಕೆ ಸಾವಿರ ರೂ. ಲಂಚ ಕೇಳಿದರು ಎಂದು ಆರೋಪಿಸಿದ ಅವರು ನಮ್ಮ ಸ್ಥಿತಿ ಎಲ್ಲಿಗೆ ಬಂತು ನೋಡಿ ಎಂದರು.
ಕೆಲವರು ನಮ್ಮ ದೇಶವನ್ನ ಇಸ್ಲಾಮೀಕರಣ ಮಾಡಲು ಹೊರಟಿದ್ದಾರೆ ಅಂತವರಿಗೆ ತಕ್ಕ ಪಾಠ ಕಲಿಸಬೇಕಿದೆ. ಕೆಲವರು ಪಿಎಫ್ ಐ ಹಾಗೂ ಎಸ್ ಡಿಪಿಐ ಬೆಂಬಲಿಸುವ ಕೆಲಸ ಮಾಡುತ್ತಿದ್ದಾರೆ. ಇದೆ ರೀತಿ ಹಿಂದೂ ಕಾರ್ಯಕರ್ತರ ಪೊಲೀಸರು ದೌರ್ಜನ್ಯ ನಡೆಸಿದರೆ ಮುಂದಿನ ದಿನಗಳಲ್ಲಿ ನಾವು ಸಹಿಸೋದಿಲ್ಲ. ಇಂತಹ ಅಧಿಕಾರಿಗಳನ್ನ ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಕೆರೂರ ಚಲೋಗೆ ನ್ಯಾಯ ಸಿಗದಿದ್ದರೆ ಸರಣಿ ಸತ್ಯಾಗ್ರಹ ಮಾಡುತ್ತೆವೆ ಎಂದು ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದರು.
ಗುಳೇದಗುಡ್ಡ ಅಮರೇಶ್ವರ ಮಠದ ನೀಲಕಂಠ ಸ್ವಾಮಿಜಿ ಸಾನಿಧ್ಯ ವಹಿಸಿದ್ದರು, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತ ಕಾಂತೇಶ ಬೀಜಾಪೂರ, ಶಿವು ಅವಟಿ, ಆನಂದ ಮುತ್ತಗಿ ಸೇರಿದಂತೆ ನೂರಾರು ಮಹಿಳೆಯರು ಸಂಘಟನಾ ಕಾರ್ಯಕರ್ತರು ಇದ್ದರು. ಕುಮಾರ ಹಿರೇಮಠ ಕಾರ್ಯಕ್ರಮ ನೀರೂಪಿಸಿದರು, ಶರಣು ವಜ್ಜಲ್ ವಂದಿಸಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ್, ಮಾಜಿ ಶಾಸಕರಾದ ಎಂ ಕೆ ಪಟ್ಟಣಶೆಟ್ಟಿ, ಮಹಾಂತೇಶ ಮಮದಾಪೂರ, ಎಮ್ ಎಚ್ ಮೆಣಸಗಿ, ಬಸವರಾಜ ಬೊಂಬ್ಲೆ, ಕಾಂತೇಶ ಬಿಜಾಪುರ, ಅರುಣ ಕಟ್ಟಿಮನಿ, ರಮೇಶ ಕೊಣ್ಣೂರ, ರಾಚಣ್ಣ ಕುಂಬಾರ ಸೇರಿದಂತೆ ಇತರರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.