ಹುನಗುಂದ ಪುರಸಭೆ ಮುಖ್ಯಾಧಿಕಾರಿಗೆ ತರಾಟೆ

| ಹಿರೇಹಳ್ಳದ ಸ್ವತ್ಛತೆಗೆ ಕ್ರಿಯಾಯೋಜನೆ | ದಲಿತರ ಮೇಲೆ ದಬ್ಟಾಳಿಕೆ: ಮುಖಂಡರ ಆಕ್ರೋಶ

Team Udayavani, Apr 4, 2021, 7:10 PM IST

fge

ಹುನಗುಂದ: ಪಟ್ಟಣದ ಮಧ್ಯಭಾಗದಲ್ಲಿರುವ ಹಿರೇಹಳ್ಳದ ನೀರು ಎಸ್‌ಸಿ ಕಾಲೋನಿಗೆ ಪ್ರವೇಶಿಸುತ್ತಿದ್ದರೂ ಪುರಸಭೆ ಅ ಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ದಲಿತ ಮುಖಂಡರು ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ ಅವರನ್ನು ತರಾಟೆಗೆ ತೆಗೆದುಕೊಂಡರು.

ಶನಿವಾರ ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ದಲಿತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಮುಖಂಡ ಹನಮಂತ ನಡುವಿನಮನಿ, ಹಿರೇಹಳ್ಳದ ನೀರು ಬಂದು ಹೋದ ಮೇಲೆ ಲಕ್ಷ್ಮೀ ನಗರ, ಡಾ| ಬಿ.ಆರ್‌.ಅಂಬೇಡ್ಕರ್‌, ಡಾ|ಬಾಬು ಜಗಜೀವನರಾಮ್‌ ಕಾಲೋನಿ ಸುತ್ತಮುತ್ತ ಮುಳ್ಳುಕಂಟಿಗಳು ಬೆಳೆದು ಅಲ್ಲಿನ ನಿವಾಸಿಗಳು ನಿತ್ಯ ಹಾವು ಚೇಳಿನ ಜತೆ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲಿ ಚರಂಡಿ ಎಸ್ಟಿಮೆಂಟ್‌ ಮಾಡಿ ಮೂರು ವರ್ಷಗಳು ಗತಿಸಿದರೂ ಸರಿಯಾದ ಚರಂಡಿ ನಿರ್ಮಾಣವಾಗಿಲ್ಲ ಎಂದು ಆರೋಪಿಸಿದರು.

ಇದಕ್ಕೆ ಉತ್ತರಿಸಿದ ಮುಖ್ಯಾ ಧಿಕಾರಿ ಅಶೋಕ ಪಾಟೀಲ, ಸದ್ಯ ಹಿರೇಹಳ್ಳದ ಸ್ವತ್ಛತೆಗೆ ಕ್ರಿಯಾಯೋಜನೆ ಸಿದ್ಧಗೊಳಿಸಿ ಜಿಲ್ಲಾಧಿ ಕಾರಿಗಳಿಗೆ ಕಳುಹಿಸಲಾಗಿದೆ. ಶೀಘ್ರ ಸ್ವತ್ಛತೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಗ್ರಾಮೀಣ ಪ್ರದೇಶದ ದಲಿತರು ಸಾಕಷ್ಟು ದೌರ್ಜನ್ಯಕ್ಕೆ ಒಳಗಾಗುತ್ತಿದ್ದು. ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕು ಆಡಳಿತದಿಂದ ಗ್ರಾಮೀಣ ಮಟ್ಟದ ದಲಿತರ ಕುಂದುಕೊರತೆ ಸಭೆ ನಡೆಸಬೇಕು. ಕಮಲದಿನ್ನಿ ಗ್ರಾಮದ ಪುನರ್‌ವಸತಿ ಕೇಂದ್ರದಲ್ಲಿ ಹಕ್ಕು ಪತ್ರ ನೀಡದೇ ಇರುವುದರಿಂದ ದಲಿತರು ವಾಸಿಸುತ್ತಿರುವ ಶೆಡ್‌ ತೆರವುಗೊಳಿಸುವಂತೆ ಅಲ್ಲಿನ ಮೇಲ್ವರ್ಗದ ಜನರು ದಲಿತರ ಮೇಲೆ ದಬ್ಟಾಳಿಕೆ ಮಾಡುತ್ತಿದ್ದಾರೆ. ಈ ಕುರಿತು ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ದಲಿತ ಮುಖಂಡ ಮಲ್ಲಿಕಾರ್ಜುನ ಹೊಸಮನಿ, ತಹಶೀಲ್ದಾರ್‌ ಜಿ.ಎಂ.ಕುಲಕರ್ಣಿ ಅವರನ್ನು ಪ್ರಶ್ನಿಸಿದರು.

ಈ ವಿಷಯ ನನ್ನ ಗಮನಕ್ಕೆ ಬಂದಿರಲಿಲ್ಲ. ನಾಳೆ ನಾನು ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳ ಜತೆ ಮಾತನಾಡಿ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು. ಚಿಕ್ಕಮಾಗಿಯಲ್ಲಿ ಮನೆ ಹಂಚಿಕೆಯಲ್ಲಿ ದಲಿತರಿಗೆ ನ್ಯಾಯ ಸಿಗುತ್ತಿಲ್ಲ ಎಂದು ದಲಿತ ಮುಖಂಡ ಬಸವರಾಜ ಹೊಸಮನಿ ಆರೋಪಿಸಿದರು. ಈ ಕುರಿತು ನನಗೆ ಮಾಹಿತಿ ಬಂದಿದೆ. ನಾನು ಮತ್ತು ಸಿಪಿಐ ಅಯ್ಯನಗೌಡ ಪಾಟೀಲ ಅಲ್ಲಿಗೆ ಹೋಗಿ ಬಗೆಹರಿಸಲಾಗುವುದು ಎಂದು ತಹಶೀಲ್ದಾರ್‌ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯಿಂದ ಎಸ್‌ ಸಿಪಿ ಮತ್ತು ಟಿಎಸ್‌ಪಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಸಿಸಿ ರಸ್ತೆಗಳು ಕಳಪೆ ಮಟ್ಟದಿಂದ ಕೂಡಿವೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ದಲಿತ ಮುಖಂಡರು ಆರೋಪಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕೃಷಿ ಇಲಾಖೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಜನಾಂಗಕ್ಕಿರುವ ಅನುದಾನದಲ್ಲಿ ಪಿಂಕ್ಲರ್‌ ಪೈಪ್‌ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂದು ಮುಖಂಡ ಸಂಗಪ್ಪ ಚಲವಾದಿ ಆರೋಪಿಸಿದರು. ಅಬಕಾರಿ ಇನ್ಸ್‌ಪೆಕ್ಟರ್‌ ಮಂಜುನಾಥ, ಸಮಾಜ ಕಲ್ಯಾಣ ಇಲಾಖೆ ಅ ಧಿಕಾರಿ ರವಿ ಇದ್ದಲಗಿ, ದಲಿತ ಮುಖಂಡರು ಹಾಜರಿದ್ದರು.

 

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.