ಮದ್ಯ ಮಾರಾಟ ಸಂಪೂರ್ಣವಾಗಿ ನಿಲ್ಲಿಸಿ
Team Udayavani, May 8, 2020, 3:41 PM IST
ಹುನಗುಂದ: ಮದ್ಯ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಬಸವರಾಜ ನಾಗರಾಳ ಅವರಿಗೆ ಮನವಿ ಸಲ್ಲಿಸಿದರು.
ಹುನಗುಂದ: ರಾಜ್ಯದಲ್ಲಿ ಮದ್ಯ ಮಾರಾಟ ಸಂಪೂರ್ಣವಾಗಿ ನಿಲ್ಲಿಸುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘ ತಹಶೀಲ್ದಾರ್ ಬಸವರಾಜ ನಾಗರಾಳ ಅವರಿಗೆ ಮನವಿ ಸಲ್ಲಿಸಿತು.
ಗ್ರಾಕೋಸ್ ತಾಲೂಕ ಸಂಚಾಲಕ ಮಹಾಂತೇಶ ಹೊಸಮನಿ ಮಾತನಾಡಿ, ರಾಜ್ಯಾದ್ಯಂತ ಮದ್ಯ ನಿಷೇಧಿಸುವಂತೆ ಹಲವಾರು ವರ್ಷಗಳಿಂದ ರಾಜ್ಯದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಗಳು ಮತ್ತು ವಿವಿಧ ಮಹಿಳಾ ಸಂಘಟನೆಗಳು ನೇತೃತ್ವದಲ್ಲಿ ಅನೇಕ ಹೋರಾಟ ಮಾಡುತ್ತಿವೆ. ಆದರೆ, ಯಾವುದೇ ಪ್ರಯೋಜನವಾಗಿರಲಿಲ್ಲ. ಕೋವಿಡ್-19 ವೈರಸ್ ಭೀತಿಯಿಂದ ಮದ್ಯ ಮಾರಾಟವನ್ನು ಸಂಪೂರ್ಣ ಬಂದ್ ಮಾಡಿದ್ದರಿಂದ ವ್ಯಸನದಿಂದ ಮುಕ್ತವಾಗಿ ಉತ್ತಮ ಜೀವನವನ್ನು ನಡೆಸುತ್ತಿದ್ದರು. ಮತ್ತೇ ಸರ್ಕಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಿರುವುದು ದೊಡ್ಡ ಪ್ರಮಾದವಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಮದ್ಯ ಸೇವನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಮದ್ಯ ಮುಕ್ತ ಕರ್ನಾಟಕಕ್ಕಾಗಿ ಸರ್ಕಾರ ನೀತಿ ಜಾರಿಗೊಳಿಸಬೇಕು. ಅಲ್ಲಿವರಗೂ ಕರ್ನಾಟಕದಲ್ಲಿ ಮದ್ಯ ಮಾರಾಟ ನಿಲ್ಲಿಸಬೇಕು. ಪ್ರತಿಯೊಂದು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಮದ್ಯವರ್ಜನ ಕೇಂದ್ರ ಸ್ಥಾಪಿಸಬೇಕು. ಅತಿಯಾದ ಕುಡಿತಕ್ಕೆ ಒಳಗಾದ ವ್ಯಕ್ತಿಗಳನ್ನು ಗುರುತಿಸಿ ಮದ್ಯ ವರ್ಜನ ಕೇಂದ್ರಗಳಿಗೆ ಸೇರಿಸಿ ಅವರ ಆರೋಗ್ಯ ಕಾಪಾಡುವ ಕೆಲಸ ಮಾಡಬೇಕು ಎಂದರು. ಗ್ರಾಕೋಸ್ ಸಂಘದ ಸದಸ್ಯರಾದ ಗೀತಾ ಬುರಲಿ, ಸೈರಾಬಾನು ಹಿರೇಮನಿ, ಸೌಮ್ಯಾ ವಟವಟಿ, ಯಮನೂರ ಮಾದರ, ಎಸ್.ಎಂ. ಭದ್ರಶೆಟ್ಟಿ, ಎಸ್.ಪಿ. ಪರಗೌಡ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಮಧ್ಯರಾತ್ರಿ ನಡುರಸ್ತೆಯಲ್ಲಿ ಕಬ್ಬು ತುಂಬಿದ ಟ್ರೇಲರ್ ಪಲ್ಟಿ
Political Gap: ನಾನು ರಾಜಕೀಯದಿಂದ ಸ್ವಿಚ್ಡ್ ಆಫ್ ಆಗಿದ್ದೇನೆ: ಸ್ಪೀಕರ್ ಯು.ಟಿ. ಖಾದರ್
Excise: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಇನ್ನು ಕೌನ್ಸೆಲಿಂಗ್: ಸಚಿವ ತಿಮ್ಮಾಪುರ
ನಿರ್ವಹಣೆಯೇ ಇಲ್ಲದ ಬಸ್ ನಿಲ್ದಾಣ! ರಾತ್ರಿ ವೇಳೆ ಬಸ್‌ಗಳ ಓಡಾಟ ತೀರಾ ಕಡಿಮೆ
Rabakavi-Banahatti: ಯಲ್ಲಟ್ಟಿ ಬಳಿ ಸಿಎನ್‌ಜಿ ಟ್ಯಾಂಕರ್ ಪಲ್ಟಿ
MUST WATCH
ಹೊಸ ಸೇರ್ಪಡೆ
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.