ಸಾವಿನಲ್ಲೂ ಒಂದಾದ ದಂಪತಿ: ಮೂರು ಗಂಟೆ ಅಂತರದಲ್ಲಿ ಗಂಡ-ಹೆಂಡತಿ ಸಾವು
Team Udayavani, Aug 30, 2022, 5:07 PM IST
ರಬಕವಿ-ಬನಹಟ್ಟಿ : ಸಾವಿನಲ್ಲಿಯೂ ಒಂದಾಗುವ ಬಹಳಷ್ಟು ಘಟನೆ ನಡೆಯುತ್ತಲೇ ಇರುತ್ತವೆ. ವಿವಾಹವಾಗಿ ಬಾಳಿ, ಮಕ್ಕಳು, ಮೊಮ್ಮಕ್ಕಳನ್ನು ಕಂಡು ಸಿಹಿ, ಕಹಿ, ನೋವು, ಕಷ್ಟಗಳ ಸವಾಲುಗಳನ್ನು ಒಟ್ಟಿಗೆ ಎದುರಿಸಿ, ಒಟ್ಟಿಗೇ ಸ್ವರ್ಗಸ್ಥರಾಗುವುದೆಂದರೆ ಸುಮ್ಮನೆಯಾ? ಎಲ್ಲೋ ಒಂದಷ್ಟು ಜೋಡಿಗಳಷ್ಟೇ ಈ ಪುಣ್ಯ ಮಾಡಿರುತ್ತಾರೆ. ಸಾವಿನಲ್ಲೂ ಸಂಗಾತಿ ಜೊತೆಗೆ ಅನ್ನೋದು ಇದೇನಾ.
ಹೌದು, ವಿವಾಹವಾಗಿ 55 ವರ್ಷಗಳ ಕಾಲ ಜತೆಯಾಗಿ ಬದುಕಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ.
ಬನಹಟ್ಟಿಯ ಮಂಗಳವಾರ ಪೇಟೆ ನಿವಾಸಿ ಭೀಮಪ್ಪ ಬಾಗಲಕೋಟ(80) ಮತ್ತು ಇವರ ಪತ್ನಿ ಕಸ್ತೂರಿ ಬಾಗಲಕೋಟ(74) ಸಾವಿನಲ್ಲೂ ಒಂದಾದ ದಂಪತಿಗಳಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಭೀಮಪ್ಪ ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ 1 ಗಂಟೆಗೆ ನಿಧನ ಹೊಂದಿದ್ದರು. ಆರೋಗ್ಯವಾಗಿಯೇ ಮನೆಯಲ್ಲಿದ್ದ ಪತ್ನಿ ಕಸ್ತೂರಿ ನಿಧನದ ಸುದ್ದಿ ಕೇಳುತ್ತಿದ್ದಂತೆಯೇ ಹೃದಯಾಘಾತದಿಂದ ಬೆಳಗಿನ ಜಾವ 4 ಗಂಟೆಗೆ ನಿಧನರಾದರು.
ಇಂದು ಅವರ ಮನೆಯಲ್ಲಿ ಕುಟುಂಬಸ್ಥರು ದಿವಂಗತ ದಂಪತಿಯನ್ನು ಜೋಡಿಯಾಗಿಯೇ ಕೂಡಿಸಿ ಅಂತ್ಯ ಕ್ರಿಯೆ ನಡೆಸಿದ್ದಾರೆ. ಮೃತರು 3 ಜನ ಸುಪುತ್ರಿಯರು, ಓರ್ವ ಸುಪುತ್ರ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.