‘ಅಪೂರ್ಣಗೊಂಡ ಕಾಮಗಾರಿ ಶೀಘ್ರ ಪೂರ್ಣಗೊಳಿಸುವೆ’
ಬಾಗಲಕೋಟೆ-ಕುಡಚಿ ರೈಲು ಮಾರ್ಗಕ್ಕೆ ಒತ್ತು
Team Udayavani, Jun 14, 2019, 2:34 PM IST
ಜಮಖಂಡಿ: ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ ಅವರನ್ನು ಸನ್ಮಾನಿಸಲಾಯಿತು.
ಜಮಖಂಡಿ: ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ಶೀಘ್ರ ಮುಗಿಸಲು ಸಿಎಂ ಹಾಗೂ ಅಧಿಕಾರಿಗಳ ಮೇಲೆ ಒತ್ತಡ ತರುವ ಮೂಲಕ ಜಿಲ್ಲೆಯಲ್ಲಿ ಅಪೂರ್ಣಗೊಂಡ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.
ನಗರದಲ್ಲಿ ಗುರುವಾರ ಜಮಖಂಡಿ ವಿಧಾನಸಭೆ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಬಾಗಲಕೋಟೆ-ಕುಡಚಿ ರೈಲು ಮಾರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಿ, ಈ ಭಾಗದ ಜನತೆಗೆ ಅನುಕೂಲವಾಗುವಂತೆ ಮಾಡಲಾಗುತ್ತದೆ. ರೈಲು ಮಾರ್ಗ ವಿಳಂಬಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ತನ್ನ ಪಾಲಿನ ಅನುದಾನ ನೀಡಿದ್ದು, ಭೂಸ್ವಾಧೀನ ಪ್ರಕ್ರಿಯೆ ವಿಳಂಬದಿಂದ ಕಾಮಗಾರಿ ನಿಧಾನವಾಗಿ ಸಾಗಿದೆ ಎಂದರು.
ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಿದರೂ ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಕಣಕ್ಕಿಳಿದು ಗೆಲುವು ಸಾಧಿಸಿರುವುದು ಸಂತೋಷ ನೀಡಿದೆ. ಜನರ ಪ್ರೀತಿ ವಿಶ್ವಾಸಕ್ಕೆ ಎಂದೂ ಚ್ಯುತಿ ಬಾರದಂತೆ ನಡೆದುಕೊಳ್ಳುವುದಾಗಿ ಹೇಳಿದರು. ಅಪೂರ್ಣಗೊಂಡ ಡಾ| ಗುರುದೇವ ರಾನಡೆ ಸಮುದಾಯ ಭವನಕ್ಕೆ ಕೇಂದ್ರದಿಂದ ಇನ್ನಷ್ಟು ಅನುದಾನ ತಂದು ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದರು. ಬಾಗಲಕೋಟೆ ಲೋಕಸಭೆ ಮತಕ್ಷೇತ್ರದಲ್ಲಿನ ಜನರ ನಾಡಿ ಮಿಡಿತಕ್ಕೆ ಸ್ಪಂದಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಹೇಳಿದರು.
ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ರಾಜ್ಯದ 171 ವಿಧಾನಸಭೆ ಮತಕ್ಷೇತ್ರದಲ್ಲಿ ಬಿಜೆಪಿ ಪ್ರಥಮ ಸ್ಥಾನದಲ್ಲಿದೆ. ಶೀಘ್ರದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಗೆ ಕ್ಷಣಗಣನೆ ನಡೆದಿದೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕಂಡ ರಾಮರಾಜ್ಯ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡುತ್ತಿದ್ದರಿಂದ ಹೆಚ್ಚಿನ ಸಂಖ್ಯೆಯ ಬಿಜೆಪಿ ಸಂಸದರು ಲೋಕಸಭೆಗೆ ಹೋಗಿದ್ದಾರೆ. ಬಿಜೆಪಿ ತತ್ವ-ಸಿದ್ದಾಂತಗಳನ್ನು ಅರಿತು ಕಾರ್ಯಕರ್ತರು ಸಂಘಟಿತರಾಗಬೇಕು. ಕಾಂಗ್ರೆಸ್ ಪಕ್ಷದ ಮುಖಂಡರು ವಿನಾಕಾರಣ ಬಿಜೆಪಿ ಟೀಕಿಸುತ್ತಿರುವುದು ಖಂಡನೀಯ. ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಮಾದರಿ ಪ್ರಧಾನಿಯಾಗಲಿದ್ದಾರೆ ಎಂದರು.
ತೇರದಾಳ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದು ಸವದಿ, ಬಿಜೆಪಿ ಮುಖಂಡ, ಉದ್ಯಮಿ ಜಗದೀಶ ಗುಡಗುಂಟಿ, ಜಿ.ಎಸ್.ನ್ಯಾಮಗೌಡ, ಬಸವರಾಜ ಸಿಂಧೂರ, ಜಿಪಂ ಸದಸ್ಯ ಶಿವಾನಂದ ಪಾಟೀಲ ಮಾತನಾಡಿದರು. ಟಿಎಪಿಸಿಎಂಎಸ್ ಸೊಸಾಯಿಟಿಗೆ ಹಾಗೂ ಎಪಿಎಂಸಿಗೆ ಆಯ್ಕೆಯಾದ ನೂತನ ಸದಸ್ಯರನ್ನು ಸನ್ಮಾನಿಸಲಾಯಿತು.
ತಾಪಂ ಅಧ್ಯಕ್ಷೆ ನಾಗವ್ವ ಕುರಣಿ, ತಿಮ್ಮನಗೌಡ ಬಿರಾದಾರ, ಈಶ್ವರ ಆದೆಪ್ಪನ್ನವರ, ಅಶೋಕ ತುಂಗಳ, ಜಿಪಂ ಸದಸ್ಯ ಬಸವರಾಜ ಬಿರಾದಾರ, ಬಸವರಾಜ ಕಲೂತಿ, ನಾಗಪ್ಪ ಸನದಿ, ದೇವಲ ದೇಸಾಯಿ, ಹನಮಂತ ಇಟ್ಟಿ, ಏಗಪ್ಪ ಸವದಿ, ಮನೋಹರ ಶಿರೋಳ, ಡಾ| ವಿಜಯಲಕ್ಷ್ಮೀ ತುಂಗಳ, ವಿಜಯಲಕ್ಷ್ಮೀ ಉಕುಮನಾಳ, ಶಶಿಕಾಂತ ವಿಶ್ವಬ್ರಾಹ್ಮಣ ಇದ್ದರು.
ಬಿಜೆಪಿ ನಗರ ಘಟಕ ಅಧ್ಯಕ್ಷ ಡಾ| ರಾಕೇಶ ಲಾಡ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಸಿ.ಟಿ.ಉಪಾಧ್ಯೆ ನಿರೂಪಿಸಿದರು. ನಗರಸಭೆ ಮಾಜಿ ಸದಸ್ಯ ಶ್ರೀನಿವಾಸ ಅಪರಂಜಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.