ಕೊಯ್ನಾ ನೀರು ಬರದಿದ್ದರೆ ಜಲ ಸಮಸ್ಯೆ
Team Udayavani, May 9, 2019, 11:58 AM IST
ಬಾಗಲಕೋಟೆ: ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಯ ಒಡಲು ಖಾಲಿಯಾಗಿದೆ. ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ ನೀರು ಸಂಗ್ರಹ ಒಂದಷ್ಟು ಹೆಚ್ಚಿನ ಪ್ರಮಾಣದಲ್ಲಿದ್ದರೂ ಅದು ಎರಡು ವಾರಕ್ಕೆ ಖಾಲಿಯಾಗುವ ಆತಂಕ ಸೃಷ್ಟಿಯಾಗಿದೆ.
ಹೌದು, ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಯ 14 ನಗರ ಪ್ರದೇಶ, ಸುಮಾರು 510ಕ್ಕೂ ಹೆಚ್ಚು ಹಳ್ಳಿಗಳು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ಹಿನ್ನೀರನ್ನೇ ನಂಬಿಕೊಂಡಿವೆ.
ಆಲಮಟ್ಟಿ ಜಲಾಶಯದಲ್ಲಿ ಸದ್ಯ ಇರುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕೆಂಬ ನಿರ್ಣಯ ಮಾಡಿದ್ದರೂ ಅದು ಕಡ್ಡಾಯವಾಗಿ ಕಾರ್ಯಗತವಾಗುತ್ತಿಲ್ಲ ಎಂಬ ಮಾತೂ ಕೇಳಿ ಬರುತ್ತಿದೆ.
ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ವಿಜಯಪುರ, ಬಾಗೇವಾಡಿ, ಮನಗೂಳಿ, ನಿಡಗುಂದಿ, ಕೋಲಾರ, ಬಾಗಲಕೋಟೆ, ಇಳಕಲ್ಲ, ಹುನಗುಂದ, ಗುಳೇದಗುಡ್ಡ, ಕಮತಗಿ, ಅಮೀನಗಡ, ಬೀಳಗಿ, ಕುಷ್ಟಗಿ ನಗರ-ಪಟ್ಟಣಗಳು ಅವಲಂಬಿತವಾಗಿವೆ. ಅಲ್ಲದೇ ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ ನದಿಯ ನೀರನ್ನು ನಂಬಿಕೊಂಡೇ ಒಟ್ಟು 19 ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಗಳು ಇಂದಿಗೂ ಕಾರ್ಯ ನಿರ್ವಹಿಸುತ್ತಿವೆ. 19 ಯೋಜನೆಗಳಡಿ 190 ಹಳ್ಳಿಗಳಿಗೆ ಕೃಷ್ಣೆಯ ನೀರು ಪೂರೈಕೆ ಮಾಡಲಾಗುತ್ತಿದೆ. ಕೃಷ್ಣೆ ಸಂಪೂರ್ಣ ಬರಿದಾದರೆ, 14 ನಗರ-ಪಟ್ಟಣ ಹಾಗೂ 190 ಹಳ್ಳಿಗಳಿಗೆ ಜೀವಜಲದ ಸಮಸ್ಯೆ ತೀವ್ರಗೊಳ್ಳಲಿದೆ.
2016ರ ಪರಿಸ್ಥಿತಿ ಇಲ್ಲ: ಕಳೆದ 2016ರಲ್ಲಿ ಕೃಷ್ಣಾ ನದಿ ಸಂಪೂರ್ಣ ಖಾಲಿಯಾಗಿತ್ತು. ಆಗ ನದಿಯ ತಗ್ಗು-ದಿನ್ನಿಗಳಲ್ಲಿದ್ದ ನೀರನ್ನೂ ಒಂದೆಡೆ ಸಂಗ್ರಹಿಸಿ, ವಿದ್ಯುತ್ ಮೋಟಾರ್ ಮೂಲಕ, ಜಾಕವೆಲ್ ವರೆಗೆ ಹರಿಸಿ, ಆ ನೀರನ್ನು ಕುಡಿಯಲು ಬಳಕೆ ಮಾಡಲಾಗಿತ್ತು. ಆಗ 7 ಟಿಎಂಸಿ ನೀರನ್ನು ಮಾರಿಕೊಳ್ಳಲಾಗಿತ್ತು ಎಂಬ ದೊಡ್ಡ ವಿವಾದವೂ ಎಲ್ಲೆಡೆ ಹಬ್ಬಿತ್ತು. ಆದರೆ, ಈ ಬಾರಿ ಅಂತಹ ಪರಿಸ್ಥಿತಿ ಇಲ್ಲ.
ಸದ್ಯ ಜಲಾಶಯದಲ್ಲಿ 28.20 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಇದರಲ್ಲಿ 17.36 ಡೆಡ್ ಸ್ಟೋರೇಜ್ ಇದ್ದು, ಉಳಿದ 10.36 ಟಿಎಂಸಿ ನೀರು ಬಳಕೆಗೆ ಲಭ್ಯವಿದೆ. ಇದರಲ್ಲಿ ಮೇ ಮೊದಲ ಅಥವಾ 2ನೇ ವಾರದಲ್ಲಿ ರಾಯಚೂರಿನ ಶಾಖೋತ್ಪನ್ ಕೇಂದ್ರಕ್ಕೆ 2 ಟಿಎಂಸಿ ಅಡಿ ನೀರು ಕೊಡಬೇಕೆಂಬ ಒಪ್ಪಂದವಿದ್ದು, ಈಗಾಗಲೇ ನಿತ್ಯ 2662 ಕ್ಯುಸೆಕ್ ನೀರನ್ನು ರಾಯಚೂರು ವಿದ್ಯುತ್ ಉತ್ಪಾದನೆ ಕೇಂದ್ರಕ್ಕೆ ಬಿಡಲಾಗುತ್ತಿದೆ. ಉಳಿದ 9.36 ಟಿಎಂಸಿ ನೀರನ್ನು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯ ವ್ಯಾಪ್ತಿಯ ಕುಡಿಯುವ ನೀರಿನ ಯೋಜನೆಗಳಿಗಾಗಿ ಬಳಸಿಕೊಳ್ಳಲು ಮೀಸಲಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.