ಜಿಲ್ಲೆಯಲ್ಲಿ ಕುರಿ ಕಳ್ಳತನ ಹೆಚ್ಚಳ: ಮಂಟೂರ
27ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ
Team Udayavani, May 24, 2022, 11:00 AM IST
ಲೋಕಾಪುರ: ಜಿಲ್ಲೆಯಲ್ಲಿ ಕುರಿ ಕಳ್ಳತನಗಳ ಪ್ರಕರಣ ತಡೆಯುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಫಲವಾಗಿರುವುದನ್ನು ಖಂಡಿಸಿ ಮೇ 27ರಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ಕುರುಬ ಸಂಘದ ತಾಲೂಕು ಅಧ್ಯಕ್ಷ ಎಂ.ಆರ್. ಮಂಟೂರ ಹೇಳಿದರು.
ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆವರು, ಕುರಿ ಕಳ್ಳತನವಾಗಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ ಎಂದರು.
ನ್ಯಾಯವಾದಿ ಯಲ್ಲಪ್ಪ ಹೆಗಡೆ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 42 ಕುರಿಗಳು ಕಳ್ಳತನವಾಗಿವೆ. ಇಲ್ಲಿಯವರೆಗೂ ಕುರಿಗಾಹಿಗಳಿಗೆ ನ್ಯಾಯ ಸಿಕ್ಕಿಲ್ಲ ಎಂದು ತಿಳಿಸಿದರು. ಕುರಿಗಾಹಿ ಈಶ್ವರ ಬಿಜ್ಜನ್ನವರ ಮಾತನಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಯಮನಪ್ಪ ಹೊರಟ್ಟಿ, ಕಾಮಣ್ಣ ಜೋಗಿ, ಸಿದ್ದು ಪೂಜಾರಿ, ಯಮನಪ್ಪ ಚಿಚಖಂಡಿ, ಈಶ್ವರ ಬಿಜ್ಜನ್ನವರ, ಕೃಷ್ಣಾ ಮುಧೋಳ, ಲಕ್ಷಣ ಬಿಜ್ಜನ್ನವರ ಇದ್ದರು.
ಕುರಿ ಕಳ್ಳರ ಬಂಧನಕ್ಕೆ ಆಗ್ರಹ
ಬಾದಾಮಿ: ರಾಜ್ಯಾದ್ಯಂತ ಕುರಿಗಳ ಕಳ್ಳತನ ಪ್ರಕರಣಗಳು ಯಥೇಚ್ಚವಾಗಿ ನಡೆಯುತ್ತಿದ್ದರೂ ಸಹಿತ ರಾಜ್ಯ ಸರಕಾರ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕಳ್ಳರನ್ನು ಹಿಡಿದು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಹನಮಂತ ಅಪ್ಪನ್ನವರ ಆಗ್ರಹಿಸಿದರು.
ಪಟ್ಟಣದ ಕಾನಿಪ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುರಿಗಳ ಕಳ್ಳತನ ಪ್ರಕರಣ ನಡೆದರೂ ಪ್ರಕರಣ ಬೇಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದರು.
ಜಿಲ್ಲೆಯ ಇಳಕಲ್, ಗುಳೇದಗುಡ್ಡ, ಹುನಗುಂದ ಹಾಗೂ ಬಾದಾಮಿ ತಾಲೂಕಿನ ವಿವಿಧ ಕಡೆಗಳಲ್ಲಿ ಕುರಿ ಕಳ್ಳತನ ನಡೆದಿದೆ. ಈ ಕುರಿತು ಲಿಖೀತ, ಮೌಖೀಕವಾಗಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಮಾಜಿ ಸಿಎಂ, ಶಾಸಕ ಸಿದ್ಧರಾಮಯ್ಯ ಅವರ ಮೂಲಕ ಸರಕಾರಕ್ಕೆ ಪತ್ರ ಬರೆಸಿದ್ದರೂ ಕ್ರಮ ಕೈಗೊಂಡಿಲ್ಲ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿದ್ದೇವೆ. ಸರಕಾರ ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಗುರುತಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕುರಿ ಕಳ್ಳತನ ಪ್ರಕರಣಗಳು ನಡೆದಾಗ ಮಾಲೀಕರಿಗೆ ಪರಿಹಾರ ಧನ ನೀಡಬೇಕು ಎಂದರು.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಕುರಿಗಾರರ ಕುಂದುಕೊರತೆ ಸಭೆ ಮತ್ತು ಠಾಣಾ ವ್ಯಾಪ್ತಿಯಲ್ಲಿ ಪ್ರತಿ ತಿಂಗಳಿಗೊಮ್ಮೆ ಕುಂದುಕೊರತೆ ಸಭೆ ನಡೆಸಲು ಕ್ರಮ ಕೈಗೊಳ್ಳಬೇಕು. ಸರಕಾರ ಕುರಿಗಾರರಿಗೆ ಶಾಶ್ವತ ಪರಿಹಾರ ನಿಧಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಈ ಕುರಿತು ಬರುವ ಮೇ 27ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು. ಕುರಿಗಾರರಾದ ಬಸವರಾಜ ದ್ಯಾವನವರ, ಚಿದಾನಂದ ಕೋರನ್ನವರ, ಗದಿಗೆಪ್ಪ ಕುರಿ, ರಂಗಪ್ಪ ಮುಚ್ಚಳಗುಡ್ಡ, ದ್ಯಾಮನ್ನ ಅನವಾಲ, ಶರಣಪ್ಪ ಕರಿಗಾರ, ಹನಮಂತ ಪೂಜಾರ ಹಾಜರಿದ್ದರು.
ಈಗಾಗಲೇ ಕುರಿ ಕಳ್ಳತನದ ವಿಷಯ ಗಮನಕ್ಕೆ ಬಂದಿರುವುದರಿಂದ ಜುಲೈ 27ರಂದು ನಡೆಯುವ ಕರ್ನಾಟಕ ಸಹಕಾರ ಕುರಿ ಮಹಾಮಂಡಳದ ಸಬೆಯಲ್ಲಿ ವಿಷಯ ಪ್ರಸ್ತಾಪಿಸುತ್ತೇನೆ. ಕಾಗಿನೆಲೆ ಕನಕಾಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಮಹಾಮಂಡಳದ ಅಧ್ಯಕ್ಷರು ಉಪಾಧ್ಯಕ್ಷರು ಎಲ್ಲ ನಿರ್ದೇಶಕರನ್ನು ಒಳಗೊಂಡ ನಿಯೋಗದೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಿಯೋಗದೊಂದಿಗೆ ಭೇಟಿ ಮಾಡಲಾಗುವುದು. -ಕಾಶಿನಾಥ್ ಹುಡೇದ, ಉಪಾಧ್ಯಕ್ಷರು ಕರ್ನಾಟಕ ಸಹಕಾರ ಕುರಿ ಮಹಾಮಂಡಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.