ಹೆಚ್ಚಿದ ನೀರಿನ ಹಾಹಾಕಾರ

•ಟ್ಯಾಂಕರ್‌ ಮೂಲಕ ನೀರು ಪೂರೈಸಿದ್ದರೂ ಸಾಕಾಗುತ್ತಿಲ್ಲ•ಹಿಡಕಲ್ ಜಲಾಶಯದಿಂದಲೂ ಬರಲಿಲ್ಲ ನೀರು

Team Udayavani, May 29, 2019, 10:02 AM IST

bk-tdy-2..

ಬನಹಟ್ಟಿ : ನಗರದ ನೀರಿನ ಟ್ಯಾಂಕ್‌ ಹತ್ತಿರದ ಪ್ರದೇಶದಲ್ಲಿ ಬೋರವೆಲ್ ನೀರಿಗಾಗಿ ಕೊಡಗಳನ್ನು ಸರತಿಯಲ್ಲಿ ಇಡಲಾಗಿದೆ.

ಬನಹಟ್ಟಿ: ಒಂದೂವರೆ ತಿಂಗಳಿಂದ ರಬಕವಿ- ಬನಹಟ್ಟಿ, ರಾಮಪುರ ಹಾಗೂ ಹೊಸೂರ ಜನತೆ ಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಆದರೆ, ಕಳೆದ ಐದಾರು ದಿನಗಳಿಂದ ನೀರಿನ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಸ್ಥಳೀಯ ಗುಡ್ಡದ ಪ್ರದೇಶದಲ್ಲಿ ಜನರು ನೀರಿಗಾಗಿ ನಾಲ್ಕಾರು ದಿನಗಳ ಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾಗಿದೆ. ಇಲ್ಲಿ ಸರತಿಯಲ್ಲಿಟ್ಟ ಕೊಡಗಳನ್ನು ಯಾರು ಮನೆಗೆ ತೆಗೆದುಕೊಂಡು ಹೋಗಿಲ್ಲ. ವಾರಕ್ಕೆ ಹತ್ತಾರು ಕೊಡು ನೀರು ಸಿಗುವುದು ಕೂಡಾ ದುರ್ಬಲವಾಗಿದೆ. ಬೋರವೆಲ್ ಸಮರ್ಪಕವಾಗಿ ನೀರು ಕೊಡುತ್ತಿಲ್ಲ. ಆದರೂ ಈ ಭಾಗದಲ್ಲಿ ಟ್ಯಾಂಕರ್‌ ಕಳುಹಿಸುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ನೀರಿನ ಟ್ಯಾಂಕ್‌ ಹಿಂದುಗಡೆಯ ಸಾರ್ವಜನಿಕರು.

ಟ್ಯಾಂಕರ್‌ ನೀರು ಸಾಲುತ್ತಿಲ್ಲ: ಆದರೆ ನಗರಸಭೆಯವರು ಕೂಡಾ ನೀರು ಪೂರೈಸಲು ಹರಸಾಹಸ ಮಾಡುತ್ತಿದ್ದಾರೆ. ನೀರಿನ ಅವಶ್ಯಕತೆ ಇದ್ದ ಪ್ರದೇಶದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 8 ಟ್ಯಾಂಕರ್‌ಗಳ ಮೂಲಕ 28 ಟ್ರಿಪ್‌ ನೀರು ಪೂರೈಸಲಾಗುತ್ತಿದೆ. ಆದರೂ ನೀರಿನ ಸಮಸ್ಯೆ ಮಾತ್ರ ಕಡಿಮೆ ಆಗಿಲ್ಲ. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿದರೂ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ನೀರು ಎಲ್ಲೆಂದರಲ್ಲಿ ಸಾಕಾಗುತ್ತಿಲ್ಲ.

ಶುದ್ಧ ಕುಡಿಯುವ ನೀರಿನ ಘಟಕ ಬಂದ್‌: ಶುದ್ಧ ನೀರು ಪೂರೈಸುತ್ತಿದ್ದ ಕಾಡಸಿದ್ದೇಶ್ವರ ದೇವಸ್ಥಾನ ಹತ್ತಿರದ ಘಟಕ ಕೂಡಾ ಬಂದ್‌ ಆಗಿದೆ. ಇದರಿಂದ ತೀವ್ರ ತೊಂದರೆಯಾಗಿದೆ. ನಗರದಲ್ಲಿ ಸರಕಾರಿ 5 ಶುದ್ಧ ನೀರಿನ ಘಟಕಗಳಿದ್ದರೂ ಕೂಡ ನೀರಿಲ್ಲದೆ ತನ್ನ ಕಾರ್ಯ ಸ್ಥಗಿತಗೊಳಿಸಿವೆ. ಜನತೆಗೆ ಕುಡಿಯಲು ಶುದ್ಧ ನೀರಿಗಾಗಿ ಲಕ್ಷ್ಮೀ ನಗರ, ಮಂಗಳವಾರ ಪೇಟೆ ಹೊರತುಪಡಿಸಿದರೆ ದೂರದ 2-3 ಕಿ.ಮೀ. ದೂರ ಸಾಗಬೇಕಿದೆ.

ಆಡಳಿತ ಮತ್ತು ವಿರೋಧ ಪಕ್ಷದವರು ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡಿಸುವಲ್ಲಿ ವಿಫಲರಾಗಿದ್ದಾರೆ. ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲಾಯಿತು. ಆದರೆ, ರಬಕವಿ ಬನಹಟ್ಟಿ ಹತ್ತಿರ ಮಹಿಷವಾಡಗಿ ಬ್ಯಾರೇಜ್‌ಗೆ ಬಂದು ತಲುಪುವುದು ಕೂಡಾ ಕಷ್ಟವಾಗಿದೆ.

ಉತ್ತಮ ಮಳೆ ಬಿದ್ದರೂ ನೀರಿನ ಬವಣೆ ಮಾತ್ರ ತಪ್ಪಿಲ್ಲ. ನೇಕಾರಿಕೆಯ ನಗರಗಳು ಈಗ ನೀರಿಗಾಗಿ ಪರದಾಡುತ್ತಿವೆ. ನೇಕಾರರು ಮನೆಯ ಉದ್ಯೋಗವನ್ನು ಬಿಟ್ಟು ನೀರಿಗಾಗಿ ಹಗಲು ರಾತ್ರಿ ಪರದಾಡುವಂತಾಗಿದೆ.

ಸ್ಥಳೀಯ 31 ವಾರ್ಡ್‌ಗಳಲ್ಲಿ ತಾರತಮ್ಯ ಎಸಗದೆ ನೀರು ಪೂರೈಕೆಗೆ ಸನ್ನದ್ಧವಾಗಿದೆ. ಸದ್ಯಕ್ಕೆ ನೀರಿನ ಸಮಸ್ಯೆ ಅಷ್ಟಾಗಿ ಇಲ್ಲ. ಎಲ್ಲ ಕಡೆ ನಿಯಂತ್ರಣದಲ್ಲಿದೆ. ಬೋರವೆಲ್ಲಗಳು ಬಂದ್‌ ಆದ ಕಡೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿದ್ದೇವೆ. ಅಲ್ಲದೇ ಖಾಸಗಿ ಬೋರವೆಲ್ಗಳ ಮಾಲೀಕರ ಮನವೊಲಿಸಿ ಅವರಿಂದಲು ನೀರು ಕೊಡಿಸುವ ವ್ಯವಸ್ಥೆ ಮಾಡಿದ್ದೇವೆ. •ಆರ್‌. ಎಂ. ಕೊಡಗೆ, ಪೌರಾಯುಕ್ತರು ರಬಕವಿ-ಬನಹಟ್ಟಿ ನಗರಸಭೆ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.