ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್
ಕಾಮಗಾರಿ ಪೂರ್ಣಗೊಂಡು 2 ವರ್ಷ ಕಳೆದದಿದೆ; ಸರ್ಕಾರದ ಮಟ್ಟದಲ್ಲಿ ಟೆಂಡರ್ ವಿಳಂಬ
Team Udayavani, Oct 20, 2022, 2:51 PM IST
ಹುನಗುಂದ: ಪಟ್ಟಣದ ಗುರುಭವನದ ಪಕ್ಕ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಕಾಮಗಾರಿ ಪೂರ್ಣಗೊಂಡು ಎರಡು ವರ್ಷ ಕಳೆದರೂ ಉದ್ಘಾಟನೆಗೊಂಡಿಲ್ಲ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಸಿವುಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ಪ್ರತಿ ತಾಲೂಕಿಗೆ ಇಂದಿರಾ ಕ್ಯಾಂಟೀನ್ ಆರಂಭಿಸುವ ಯೋಜನೆ ಜಾರಿಗೊಳಿಸಿತ್ತು.
ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಗತ್ಯವಿರುವ ಎಲ್ಲ ಉಪಕರಣ ಅಳವಡಿಸಲಾಗಿದೆ. ಇದುವರೆಗೂ ಈ ಕಟ್ಟಡ ಉದ್ಘಾಟಿಸಿ ಕ್ಯಾಂಟೀನ್ ನಡೆಸಲು ಗುತ್ತಿಗೆ ಪ್ರಕ್ರಿಯೆ ನಡೆಸದ ಕಾರಣ ಕಡಿಮೆ ದರದಲ್ಲಿ ಊಟ, ಉಪಾಹಾರ ಸೌಲಭ್ಯದಿಂದ ಇಲ್ಲಿನ ಬಡವರು, ಕೂಲಿಕಾರ್ಮಿಕರು, ವಿದ್ಯಾರ್ಥಿಗಳು ವಂಚಿತವಾಗುತ್ತಿದ್ದಾರೆ. ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಎನ್ನುವಂತಾಗಿದೆ.
ಹಿಂದಿನ ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ಮಂಜೂರು ಪಡೆದಿದ್ದ ಈ ಇಂದಿರಾ ಕ್ಯಾಂಟೀನ್ ಕಾಮಗಾರಿ ಕುಂಟುತ್ತಾ ಸಾಗಿ, ಕಳೆದ ಎರಡು ವರ್ಷಗಳ ಹಿಂದೆ ಪೂರ್ಣಗೊಂಡಿದೆ. ಕಾಮಗಾರಿ ಪೂರ್ಣಗೊಂಡು 2-3 ವರ್ಷಗಳು ಕಳೆದರೂ ಇದನ್ನು ಬಳಕೆ ಮಾಡದ ಕಾರಣ ಒಳಗೆ ಜೋಡಿಸಿದ ಉಪಕರಣಗಳು ತುಕ್ಕು ಹಿಡಿಯಲಾರಂಭಿಸಿವೆ. ಕಟ್ಟಡ ಹಾಳಾಗುವ ಸ್ಥಿತಿ ತಲುಪಿದೆ.
ಸರ್ಕಾರ ಇಂದಿರಾ ಕ್ಯಾಂಟಿನ್ ಆರಂಭಿಸಲು ಟೆಂಡರ್ ಕರೆದಿಲ್ಲ. ಹೀಗಾಗಿ ಕ್ಯಾಂಟಿನ್‌ಗೆ ಉದ್ಘಾಟನೆ ಭಾಗ್ಯ ದೊರೆತಿಲ್ಲ. ಇಂದಿರಾ ಕ್ಯಾಂಟೀನ್ ಕಟ್ಟಡದ ಪಕ್ಕದಲ್ಲಿ ಸರಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜು ಇದ್ದು ನಿತ್ಯ ನೂರಾರು ವಿದ್ಯಾರ್ಥಿಗಳಿಗೆ, ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಾರ್ಯಾಲಯಕ್ಕೆ ಬರುವ ಶಿಕ್ಷಕರಿಗೆ ಮತ್ತು ಸಾರ್ವಜನಿಕರಿಗೆ ಹೆಚ್ಚು ಉಪಯೋಗವಾಗುತ್ತಿತ್ತು.
ಸರ್ಕಾರದ ಮಟ್ಟದಲ್ಲಿ ಟೆಂಡರ್ ಆಗದ ಕಾರಣ ಇಂದಿರಾ ಕ್ಯಾಂಟೀನ್ ಇನ್ನೂ ಆರಂಭಿಸಲು ಆಗಿಲ್ಲ. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು. -ಅಶೋಕ ಪಾಟೀಲ, ಮುಖ್ಯಾಧಿಕಾರಿ, ಪುರಸಭೆ ಹುನಗುಂದ
–ಸುರೇಶ ಪತ್ತಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.