ಮಹಾಲಿಂಗಪುರದಲ್ಲಿ ವ್ಯಕ್ತಿಗೆ ಸೋಂಕು
Team Udayavani, Aug 8, 2020, 2:00 PM IST
ಮಹಾಲಿಂಗಪುರ: ಪಟ್ಟಣದಲ್ಲಿ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಶುಕ್ರವಾರ ಹ್ಯಾಗಾಡಿ ಪ್ಲಾಟ್‌ನ 38 ವಯಸ್ಸಿನ ಯುವಕನಿಗೆ ಕೋವಿಡ್ ಸೋಂಕು ತಗುಲಿದ್ದು, ಕೋವಿಡ್ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
39 ಸೊಂಕಿತರಲ್ಲಿ ಇಲ್ಲಿಯವರೆಗೆ ಐವರು ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಶುಕ್ರವಾರ ಪತ್ತೆಯಾದ ಹ್ಯಾಗಾಡಿ ಪ್ಲಾಟ್‌ನ ಕೋವಿಡ್ ಸೊಂಕಿತ ಯುವಕನ ಪ್ರಾಥಮಿಕ ಸಂಪರ್ಕದಲ್ಲಿರುವ ಕುಟುಂಬದ 13 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಯುವಕನ ಮನೆಯ ಏರಿಯಾವನ್ನು ಸೀಲ್‌ಡೌನ್ ಮಾಡಲಾಗಿದೆ.
50 ಜನರ ಗಂಟಲು ದ್ರವ ಪರೀಕ್ಷೆ: ಸಮೀರವಾಡಿ ಕಾರ್ಖಾನೆ ಕಾರ್ಮಿಕರು ಮತ್ತು ನೌಕರರು ಸೇರಿದಂತೆ ಸುಮಾರು 50 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ .
ಕೋವಿಡ್ ಸೆಂಟರ್‌ನಿಂದ 17 ಜನರ ಬಿಡುಗಡೆ: ಪಟ್ಟಣದ ಬುದ್ನಿಪಿಡಿಯಲ್ಲಿನ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮೀರವಾಡಿ ಮತ್ತು ಮಹಾಲಿಂಗಪುರ ಸೇರಿ 35 ಜನರಲ್ಲಿ 17 ಜನರ ಕೋವಿಡ್ ವರದಿ ನೆಗೆಟಿವ್ ಬಂದ ಕಾರಣ ಅವರನ್ನು ಬಿಡುಗಡೆ ಮಾಡಿ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಆರೋಗ್ಯಾಧಿಕಾರಿ ಗೈಬುಸಾಬ ಗಲಗಲಿ, ಪುರಸಭೆ ಮುಖ್ಯಾಧಿಕಾರಿ ಬಿ.ಆರ್.ಕಮತಗಿ, ಕಿರಿಯ ಆರೋಗ್ಯ ನಿರೀಕ್ಷಕರಾದ ರಾಜು ಹೂಗಾರ, ಸಿದ್ದು ಅಳ್ಳಿಮಟ್ಟಿ, ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕ ಎಂ.ಬಿ.ಗೋಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಮಧ್ಯರಾತ್ರಿ ನಡುರಸ್ತೆಯಲ್ಲಿ ಕಬ್ಬು ತುಂಬಿದ ಟ್ರೇಲರ್ ಪಲ್ಟಿ
Political Gap: ನಾನು ರಾಜಕೀಯದಿಂದ ಸ್ವಿಚ್ಡ್ ಆಫ್ ಆಗಿದ್ದೇನೆ: ಸ್ಪೀಕರ್ ಯು.ಟಿ. ಖಾದರ್
Excise: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಇನ್ನು ಕೌನ್ಸೆಲಿಂಗ್: ಸಚಿವ ತಿಮ್ಮಾಪುರ
ನಿರ್ವಹಣೆಯೇ ಇಲ್ಲದ ಬಸ್ ನಿಲ್ದಾಣ! ರಾತ್ರಿ ವೇಳೆ ಬಸ್‌ಗಳ ಓಡಾಟ ತೀರಾ ಕಡಿಮೆ
Rabakavi-Banahatti: ಯಲ್ಲಟ್ಟಿ ಬಳಿ ಸಿಎನ್‌ಜಿ ಟ್ಯಾಂಕರ್ ಪಲ್ಟಿ
MUST WATCH
ಹೊಸ ಸೇರ್ಪಡೆ
Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು
Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್; ವಶಕ್ಕೆ ಪಡೆದುಕೊಂಡ ಪೊಲೀಸರು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.