ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆ
Team Udayavani, Mar 16, 2020, 2:17 PM IST
ಸಾಂದರ್ಭಿಕ ಚಿತ್ರ
ಕುಳಗೇರಿ ಕ್ರಾಸ್: ಮಲಪ್ರಭಾ ನದಿಯ ಹತ್ತಿರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಪ್ರವೇಶ ಮಾಡುವ ಕಾರು-ಬಸ್ ಸೇರಿದಂತೆ ಇತರೆ ವಾಹನಗಳಲ್ಲಿನ ಜನರನ್ನು ತಪಾಸಣೆ ಮಾಡಲಾಗುತ್ತಿದೆ.
ಪ್ರವಾಸಿಗರು ಪ್ರವೇಶ ಪಡೆಯುವ ಮುಖ್ಯ ರಸ್ತೆಯಲ್ಲಿ ತಾಲೂಕು ಆಡಳಿತ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ, ಗ್ರಾಪಂ ಜಂಟಿಯಾಗಿ ಕೊರೋನಾ ವೈರಸ್ ತಪಾಸಣಾ ಚೆಕ್‌ಪೋಸ್ಟ್ ನಿರ್ಮಿಸಿದ್ದು, ಜಿಲ್ಲಾಧಿಕಾರಿ ಆದೇಶದಂತೆ ತಪಾಸಣೆ ನಡೆಸಿದ್ದಾರೆ. ಹೊರದೇಶ ಹಾಗೂ ರಾಜ್ಯಗಳಿಂದ ಬಾದಾಮಿ -ಬನಶಂಕರಿ, ಶಿವಯೋಗಮಂದಿರ, ಮಹಾಕೂಟ, ಪಟ್ಟದಕಲ್ಲು, ಐಹೊಳೆ ಹಾಗೂ ಕೂಡಲಸಂಗಮ ಸೇರಿದಂತೆ ಐತಿಹಾಸಿಕ ತಾಣಗಳಿಗೆ ಬರುವ ಪ್ರವಾಸಿಗರನ್ನ ತಪಾಸಣೆ ಮಾಡುತ್ತಿದ್ದಾರೆ.
ಜಿಲ್ಲೆ ಪ್ರವೇಶಿಸಿ ವಾಹನಗಳಲ್ಲಿ ಬರುವ ಎಲ್ಲ ಜನರನ್ನ ತಪಾಸಣೆ ಮಾಡುತ್ತಿದ್ದು ಮುಂಜಾಗ್ರತ ಕ್ರಮವಾಗಿ ಬೇರೆ ದೇಶಗಳಿಂದ ರಾಜ್ಯಗಳಿಂದ ಬರುವ ವ್ಯಕ್ತಿಗಳನ್ನು ಗುರುತಿಸಿ ಆರೋಗ್ಯ ಇಲಾಖೆಯವರು ವಿಚಾರಿಸಿ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಹಶೀಲ್ದಾರ್ ಸುಹಾಸ್ ಇಂಗಳೆ ತಿಳಿಸಿದರು.
ಆರೋಗ್ಯ, ಕಂದಾಯ, ಪೊಲೀಸ್ ಸಿಬ್ಬಂದಿ ಸೇರಿದಂತೆ ಸುಮಾರು 12ರಿಂದ 15ಜನ ಕಾರ್ಯನಿರ್ವಹಿಸುತ್ತಿದ್ದು ಮುನ್ನಚ್ಚರಿಕೆ ಕ್ರಮವಾಗಿ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುವಂತೆ ಆದೇಶ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಒಂದು ಆ್ಯಂಬುಲನ್ಸ್ ಗಡಿ ಭಾಗದಲ್ಲಿ ನಿಲ್ಲಿಸಲಾಗಿದೆ ಎಂದು ಹೇಳಿದರು. ತಾಲೂಕು ಆರೋಗ್ಯ ಅಧಿಕಾರಿ ಎಂ.ಬಿ. ಪಾಟೀಲ, ಕಂದಾಯ ನೀರಿಕ್ಷಕ ಎ.ಡಿ. ಸಾರವಾಡ, ಗ್ರಾಮ ಲೆಕ್ಕಾಧಿಕಾರಿ ಗೋಡೆ, ಮೇಡಿ, ಮುಲ್ಲಾ, ಎಎಸ್‌ಐ ಗೊರವರ್, ನಾಗರಬೆಟ್ಟ, ಎಂ.ಐ. ತೋಟದ, ಸಿದ್ದು ಚಲವಣ್ಣವರ, ಮಲ್ಲು ಕುರಿ ಸೇರಿದಂತೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ
ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್ ದೇಶಕ್ಕೆ ರಫ್ತು!
ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ
Rabakavi: ರೈತರ ಬದುಕಿನ ರೊಟ್ಟಿಯನ್ನು ಕಾಂಗ್ರೆಸ್ ಕಸಿದುಕೊಳ್ಳುತ್ತಿದೆ: ಶಾಸಕ ಸಿದ್ದು ಸವದಿ
Rabkavi Banhatti: ಜಗದಾಳದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಪಗಡೆಯಾಟ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.