ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸೂಚನೆ
ನಗರಸಭೆ ಅಧಿಕಾರಿಗಳು ಹಾಗೂ ಜಿಲ್ಲಾ ಯೋಜನಾಧಿಕಾರಿಗಳ ಜತೆ ಸಭೆ ನಡೆಸಿದರು
Team Udayavani, Jul 20, 2022, 4:12 PM IST
ಇಳಕಲ್ಲ: ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರಕಾರದ ಆದೇಶದ ಮೇರೆಗೆ ಪ್ರತಿ ಮಂಗಳವಾರ ಪ್ರತಿ ತಾಲೂಕಿಗೆ ಭೇಟಿ ಕಾರ್ಯಕ್ರಮ ಪ್ರಯುಕ್ತ ನಗರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಹೊಸ ತಾಲೂಕಾದರೂ ಇಲ್ಲಿಯ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸೂಚಿಸಿದರು. ಸಾರ್ವಜನಿಕರ ಮನವಿಯ ಮೇರೆಗೆ ಇಳಕಲ್ಲ ತಾಲೂಕು ಕಚೇರಿಗೆ ತುರ್ತು ಬ್ಯಾಟರಿ ವ್ಯವಸ್ಥೆ ಹಾಗೂ ನೀರಿನ ವ್ಯವಸ್ಥೆ ಮಾಡುವಂತೆ ದಂಡಾಧಿಕಾರಿಗಳಿಗೆ ಸೂಚಿಸಿದರು.
ನಗರಸಭೆಯ ಪೌರಾಯುಕ್ತ ಹಾಗೂ ನಗರಸಭೆ ಅಧಿಕಾರಿಗಳು ಹಾಗೂ ಜಿಲ್ಲಾ ಯೋಜನಾಧಿಕಾರಿಗಳ ಜತೆ ಸಭೆ ನಡೆಸಿದರು. ಪ್ರಗತಿ ಪರಿಶೀಲನಾ ಸಭೆಯ ನಂತರ ಕಚೇರಿಗೆ ಬಂದಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಸಮಾಧಾನದಿಂದ ಅರ್ಜಿಗಳನ್ನು ಪರಿಶೀಲಿಸಿದರಲ್ಲದೇ ಸ್ಪಂದಿಸುವ ಭರವಸೆ ನೀಡಿದರು. ಅಲ್ಲದೇ ನಗರಸಭೆಯ ಕಟ್ಟಡಗಳ ಭೂಬಾಡಿಗೆಯನ್ನು ಬೇಗನೆ ವಸೂಲಿ ಮಾಡುವಂತೆ ನಗರಸಭೆ ಪೌರಾಯುಕ್ತರಿಗೆ ತಿಳಿಸಿದರು.
ಇಳಕಲ್ಲ ನಗರಕ್ಕೆ ಆಗಮಿಸಿದ ತಕ್ಷಣವೇ ಆಶಾದೀಪ ಅಂಗವಿಕಲರ ಸೇವಾ ಸಂಸ್ಥೆಗೆ ಭೇಟಿ ನೀಡಿ ವಿಕಲಚೇತನರ ಸಮಸ್ಯೆ ಆಲಿಸಿದರು. ನಂತರ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನವೀಕರಣಗೊಂಡ ತಾಲೂಕು ಆಡಳಿತದ ನೂತನ ಸಭಾಭವನ ಉದ್ಘಾಟಿಸಿದರು.
ನಗರಸಭೆ ಸದಸ್ಯೆ ರೇಶ್ಮಾ ಮಾರನಬಸರಿ ವಾರ್ಡ್‌ನ ಸಮಸ್ಯೆಗಳ ಕುರಿತು ಹಾಗೂ ನಗರದ ಯುವ ನೇಕಾರರ ಬಳಗ ನೇಕಾರರಿಕೆ ಸಮಸ್ಯೆ ಕುರಿತು ಮತ್ತು 500 ಮನೆ ಪ್ಲಾಟ್ ಗಳಿಗೆ ಸರ್ವಿಸ್ ರಸ್ತೆ ಕುರಿತು ಹಾಗೂ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಕಸಾಯಿಖಾನೆ ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ದಂಡಾಧಿಕಾರಿ ಬಸವರಾಜ ಮೆಳವಂಕಿ ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.