ವಿದ್ಯಾರ್ಥಿನಿ ಪ್ರಿಯಂಕಾ ಸಾವಿನ ತನಿಖೆ ಆರಂಭ
•ಆತ್ಯಹತ್ಯೆ ಬದಲು ಕೊಲೆ ಪ್ರಕರಣ ದಾಖಲು •ಮರಣೋತ್ತರ ಪರೀಕ್ಷೆ ವರದಿ ನಂತರ ತನಿಖೆ ತೀವ್ರ
Team Udayavani, Jul 19, 2019, 9:03 AM IST
ಜಮಖಂಡಿ: ನಗರದ ರಾಯಲ್ ಪ್ಯಾಲೇಸ್ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಂಕಾ ಮೇತ್ರಿ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದರು. ಸಾವನ್ನು ಆತ್ಮಹತ್ಯೆ ಎಂದು ದಾಖಲಿಸಿಕೊಂಡಿದ್ದ ಜಮಖಂಡಿ ಗ್ರಾಮೀಣ ಪೊಲೀಸರು ಪಾಲಕರ ಒತ್ತಾಯದಂತ್ತೆ ಕೊಲೆ ಪ್ರಕರಣವೆಂದು ಮರು ದಾಖಲಿಸಿ ತನಿಖೆಗೆ ಕೈಗೆತ್ತಿಕೊಂಡಿದ್ದಾರೆ.
ರಾಯಲ್ ಪ್ಯಾಲೇಸ್ ಕಾಲೇಜಿಗೆ ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಭೇಟಿ ನೀಡಿ, ಕಾಲೇಜಿನ ಆಡಳಿತ ಮಂಡಳಿಯ 10 ಜನ ಅಧ್ಯಾಪಕರನ್ನು, ಮೃತಳ ಸಹಪಾಠಿಗಳು, ಅಲ್ಲದೇ ಹಾಸ್ಟೇಲ್ ಸಿಬ್ಬಂದಿ, ಸೆಕ್ಯೂರಿಟಿ ಗಾರ್ಡ್‌ಗಳನ್ನು ಪ್ರತ್ಯೇಕವಾಗಿ ಕರೆಯಿಸಿ ವಿಚಾರಣೆ ನಡೆಸಿದರು.
ಕಾಲೇಜಿನ ಅಧ್ಯಾಪಕರನ್ನು ಸಿಪಿಐ ಕಚೇರಿಗೆ ಕರೆಯಿಸಿ ಕುಲಂಕುಶವಾಗಿ ವಿಚಾರಣೆ ನಡೆಸಿದ ನಂತರ ಮಾತನಾಡಿದ ಅವರು, ಪ್ರಿಯಾಂಕಾ ವಾಸಿಸುವ ಕೊಠಡಿ, ಮಹಡಿ ಮೇಲೆ ಹೋಗಲು ಕಾರಣ, ಮಹಡಿ ಮೇಲಿಂದ ಬಿದ್ದಸ್ಥಳ ಕೂಲಂಕುಶವಾಗಿ ಪರಿಶೀಲಿಸಲಾಗಿದೆ. ಪಾಲಕರು ನೀಡಿದ್ದ ದೂರಿನಂತೆ ಆತ್ಮಹತ್ಯೆ ಕೇಸ್ ಬದಲಿಸಿ, ಈಗ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾಲೇಜಿನ ಪ್ರತಿ ಸಿಸಿಟಿವಿ ಕ್ಯಾಮೆರಾ ಪರೀಕ್ಷಿಸಿ, ವರದಿ ಪಡೆಯಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ನಂತರ ತನಿಖೆ ತೀವ್ರಗೊಳಿಸಲಾಗುವುದು. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು ಎಂದರು.
ಡಿವೈಎಸ್ಪಿ ಆರ್.ಕೆ.ಪಾಟೀಲ, ಸಿಪಿಐ ಮಹಾಂತೇಶ ಹೊಸಪೇಟ, ಗ್ರಾಮೀಣ ಠಾಣೆ ಪಿಎಸ್‌ಐ ಎಚ್.ವೈ.ಬಾಲದಂಡಿ, ಕಾಲೇಜಿನ ಆಡಳಿತ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ನ್ಯಾಮಗೌಡ, ಪ್ರಾಚಾರ್ಯೆ ರೀತಾ ಜೈನರ್, ನಗರ ಪ್ರಾಧಿಕಾರ ಮಾಜಿ ಅಧ್ಯಕ್ಷ ಶಾಮರಾವ್ ಘಾಟಗೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.