ಕನ್ನಡ ಸೇವೆ : ಈ ಮಠದ ಬಗ್ಗೆಯೂ ಸ್ವಲ್ಪ ತಿಳಿದುಕೊಳ್ಳೋಣ


Team Udayavani, Oct 31, 2022, 10:23 PM IST

1-sfsfdf

ಕುಳಗೇರಿ ಕ್ರಾಸ್(ಬಾಗಲಕೋಟೆ): ರಾಜ್ಯೋತ್ಸವ ನವೆಂಬರ್ ೧ ರಂದು ಅಷ್ಟೇ ಏಕೆ…? ನೋಡಬನ್ನಿ ಇಲ್ಲಿ ವರ್ಷಪೂರ್ತಿ ನಡೆಯುತ್ತೆ ಕನ್ನಡ ರಾಜ್ಯೋತ್ಸವ ಈ ಮಠದಲ್ಲಿ… ಹೌದು ಮಠ-ಮಂದಿರಗಳು ಧಾರ್ಮಿಕ ಕಾರ್ಯಕ್ರಮಕ್ಕೆ ಮಾತ್ರ ಮಿಸಲು ಎಂದು ತಿಳಿದಿರುವ ನಾವು ಈ ಮಠದ ಬಗ್ಗೆಯೂ ಸ್ವಲ್ಪ ತಿಳಿದುಕೊಳ್ಳೋಣ.

ಮಠಗಳೆಂದರೆ ಪುರಾಣ-ಪ್ರವಚನ ಧಾರ್ಮಿಕ ಕಾರ್ಯಕ್ರಮ, ದಾಸೋಹ, ಪೂಜೆ-ಪುನಸ್ಕಾರ ಹಿಗೆ ಹತ್ತು ಹಲವು ಕಾರ್ಯಕ್ರಮಗಳು ಮಠ-ಮಂದಿರಗಳಲ್ಲಿ ನಡೆಯೋದು ಸಾಮಾನ್ಯ. ಆದರೆ ಈ ಮಠದ ಸ್ವಾಮಿಜಿ ಧಾರ್ಮಿಕ ಕಾರ್ಯಕ್ರಮ ನಡೆಸುವುದರ ಜೊತೆಗೆ ಕನ್ನಡ-ಕನ್ನಡಿಗ-ಕರ್ನಾಟಕ ಎಂದು ಭಾಷೆ-ನೆಲ-ಜಲ ಹಿಗೆ ಸದ್ದಿಲ್ಲದೇ ನಮ್ಮ ಕನ್ನಡ ಉಳಿಸಿ ಬೆಳೆಸುವ ಕೆಲಸ ಮಾಡುತ್ತಿರುವವರೇ ಬೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಪೂಜ್ಯ ಶಾಂತಲಿಂಗ ಸ್ವಾಮಿಜಿ.

ಸ್ವತಃ ಸಾಹಿತಿಗಳಾದ ಪೂಜ್ಯರು ದೊರೆಸ್ವಾಮಿ ಸಾಹಿತ್ಯ ಪ್ರಕಾಶನ ಸಂಸ್ಥೆಯನ್ನು ಸ್ಥಾಪಿಸಿ ಆ ಮೂಲಕ ಸುಮಾರು ೨೦ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ ಪುಸ್ತಕ ಪ್ರೀಯರು. ಅಲ್ಲದೇ ಶ್ರೀಮಠದಲ್ಲಿ ಸಿಂದಗಿ ಶ್ರೀಶಾಂತವಿರೇಶ್ವರ ಗ್ರಂಥಾಲಯವನ್ನು ಸ್ಥಾಪಿಸಿ ಅದರಲ್ಲಿ ಆದ್ಯಾತ್ಮಿಕ, ಸಾಹಿತ್ಯಿಕ ಇನ್ನಿತರೆ ಸಾವಿರಾರು ಪುಸ್ತಕಗಳನ್ನು ಸಂಗ್ರಹಿಸಿ ಗ್ರಾಮೀಣ ಭಾಗದ ಜನರಿಗೆ ಓದುವ ಹವ್ಯಾಸವನ್ನು ಬೆಳೆಸುತ್ತಿರುವ ಪುಸ್ತಕ ಸೇವೆ ಅನನ್ಯವಾದದ್ದು.

ಕನ್ನಡಕ್ಕೆ ಶಾಸ್ರ್ತೀಯ ಸ್ಥಾನ-ಮಾನ ಸಿಗಬೇಕೆಂದು ಒತ್ತಾಯಿಸಿ ಲಿಂ.ಡಾ.ಸಿದ್ದಲಿಂಗ ಮಹಾಸ್ವಾಮಿಗಳ ಸಾನಿದ್ಯದಲ್ಲಿ ಪಾದಯಾತ್ರೆ ಮಾಡಿದವರು. ಪ್ರತಿವರ್ಷ ಕನ್ನಡ ರಥವನ್ನು ನಿರ್ಮಿಸಿ ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ ಹಿಗೆ ವಿವಿಧ ಜಿಲ್ಲೆಯ ಹಳ್ಳಿಗಳಲ್ಲಿ ಕನ್ನಡ ಉಪನ್ಯಾಸ ಮಾಲೆಗಳನ್ನು ಏರ್ಪಡಿಸಿ ಕನ್ನಡದ ಕಂಪನ್ನು ಪಸರಿಸುತ್ತಿದ್ದಾರೆ.

ಅಷ್ಟೇ ಅಲ್ಲ ರಾಷ್ಟ್ರೀಯತೆಯೂ ಇವರ ಮೈಯಲ್ಲಿ ಹರಿಯುತ್ತೆ. ಅಖಂಡ ೭೫ನೇ ಅಮೃತ ಮಹೋತ್ಸವದ ಅಂಗವಾಗಿ ಉಪನ್ಯಾಸಕರಿಂದ ೭೫ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಉಪನ್ಯಾಸ ಕಾರ್ಯಕ್ರಮ ನೀಡಿ ಆ ಮೂಲಕ ಜನರಿಗೆ ಹೋರಾಟಗಾರರ ಚರಿತ್ರೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಅಮೃತ ಮಹೋತ್ಸವದ ಅಂಗವಾಗಿ ೭೫ ಯೋಧಯನ್ನ ಸನ್ಮಾನಿಸಿ ಗೌರವಿಸಿದ್ದಾರೆ ಇಂಥ ಒಬ್ಬ ಕನ್ನಡ ಕಟ್ಟಾಳು ಈ ಮಠದ ಸ್ವಾಮಿಜಿ.

ಉದ್ಘಾಟನಾ ಸಮಾರಂಭ
ನವೆಂಬರ್ ೧ರಂದು ನಡೆಯಲಿರುವ ಕಾರ್ಯಕ್ರಮದ ಸಾನಿಧ್ಯವನ್ನ ಶ್ರೀಮಠದ ಶಾಂತಲಿಂಗ ಸ್ವಮಿಜಿ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ ಉಧ್ಘಾಟಿಸಲಿದ್ದು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ ಆರ್ ಯಾವಗಲ್. ಲಕ್ಷ್ಮವ್ವ ಕಟ್ಟಿಮನಿ, ನಾಗಪ್ಪ ಬೆನ್ನೂರ, ಶೃತಿ ಸಂಗಳದ, ಮಂಗಳಾ ಪಾಟೀಲ, ಬಿ ಸಿ ಹನಮಂತಗೌಡ್ರ, ಸಂಗಯ್ಯ ಹಿರೇಮಠ, ಶ್ರೀಮತಿ ಸಲ್ಮಾ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಯವರು ಭಾಗವಹಿಸುವರು.

ಪಂಪ ಯುಗದ ಕನ್ನಡ, ವಚನಕಾರರ ಕನ್ನಡ, ಹರಿಹರ-ರಾಘವಾಂಕ ಕನ್ನಡ, ಕುಮಾರವ್ಯಾಸ-ಚಾಮರಸ ಕನ್ನಡ, ಬೇಂದ್ರೆ-ಕುವೆಂಪು ಕನ್ನಡ ಹಿಗೆ ೭೫ಕ್ಕೂ ಹೆಚ್ಚು ಸಾಹಿತಿಗಳ ಕುರಿತು ವಿವಿಧ ಗ್ರಾಮಗಳಲ್ಲಿ ಉಪನ್ಯಾಸ ಮಾಲೆಗಳನ್ನ ನಡೆಸಿ ಕನ್ನಡ ಭಾಷೆ ನೆಲ-ಜಲದ ಕುರಿತು ಜಾಗೃತಿ ಮೂಡಿಸಲಾಗುವುದು.

ಟಾಪ್ ನ್ಯೂಸ್

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.