ಕಾರಜೋಳ ಎದುರು ಸಾಲು ಸಾಲು ಸವಾಲು

•ನೆರೆ-ಬರದ ಮಧ್ಯೆ ಯುಕೆಪಿ ಸಮಸ್ಯೆ•ಹಾರಿಕೆ ಉತ್ತರ ಕೊಡದೇ ನಿಭಾಯಿಸಬೇಕಿದೆ ಜವಾಬ್ದಾರಿ

Team Udayavani, Sep 17, 2019, 11:26 AM IST

bk-tdy-1

ಬಾಗಲಕೋಟೆ: ಜಿಲ್ಲೆಯ ಮುಧೋಳ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ, ಬಿಜೆಪಿಯ ಹಿರಿಯ ದಲಿತ ನಾಯಕ ಗೋವಿಂದ ಕಾರಜೋಳರಿಗೆ ರಾಜ್ಯದ ಉಪ ಮುಖ್ಯಮಂತ್ರಿ ಸ್ಥಾನ ದೊರೆತಿದ್ದು, ಇದೀಗ ಜಿಲ್ಲೆಯ ಉಸ್ತುವಾರಿ ಸಚಿವರ ಹೊಣೆಯನ್ನೂ ವಹಿಸಲಾಗಿದೆ. ಹೀಗಾಗಿ ಕಾರಜೋಳರ ಎದುರು ಸಾಲು ಸಾಲು ಸವಾಲುಗಳಿದ್ದು, ಹೀಗಾಗಿ ಅವರು ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಲಿ ಎಂಬುದು ಅವರ ಅಭಿಮಾನಿಗಳ ಒತ್ತಾಸೆ.

ಹಿಂದೆ ಇದೇ ಕಾರಜೋಳರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ಜಿಲ್ಲೆಯಲ್ಲಿ ಭೀಕರ ಪ್ರವಾಹ ಎದುರಾಗಿತ್ತು. ಇದೀಗ ಅವರೇ ಉಸ್ತುವಾರಿಯಾಗಿದ್ದು, ಪುನಃ ದೊಡ್ಡ ಮಟ್ಟದ ಪ್ರವಾಹ ಬಂದಿದೆ. ಈ ಬಾರಿ ಬರೋಬ್ಬರಿ 195 ಹಳ್ಳಿಗಳು, ಅಕ್ಷರಶಃ ಮುಳುಗಿದ್ದು, ಜನರು ಪುನರ್‌ ಬದುಕು ಕಟ್ಟಿಕೊಳ್ಳಲು ಹೈರಾಣಾಗುತ್ತಿದ್ದಾರೆ. ಇದೆಲ್ಲದರ ಮಧ್ಯೆ ಹತ್ತು ಹಲವು ಸಮಸ್ಯೆಗಳಿಗೆ ಜಿಲ್ಲೆಯಲ್ಲಿವೆ. ಕನಿಷ್ಠ ಮೂಲ ಸೌಲಭ್ಯಗಳಿಲ್ಲದ ಆಸರೆ ಗ್ರಾಮಗಳಿಗೆ ಸೌಲಭ್ಯ ಕಲ್ಪಿಸಬೇಕಿದೆ. ನೆರೆ-ಬರದಿಂದ ನಲುಗಿದ ಜಿಲ್ಲೆಯ ಜನರ ಬದುಕು, ಮೇಲಕ್ಕೆತ್ತುವ ದೊಡ್ಡ ಹೊಣೆಗಾರಿಕೆ ಗೋವಿಂದ ಕಾರಜೋಳ ಅವರ ಮೇಲಿದೆ.

ಹೇಳಿದ್ದೇ ಮಾಡಿದರೆ ಸಾಕು: ವಿರೋಧ ಪಕ್ಷದಲ್ಲಿದ್ದಾಗ ಹೋರಾಟ ಮಾಡಿ, ಒತ್ತಾಯಿಸುವುದು ಸರಳ. ಅಧಿಕಾರ ಸಿಕ್ಕಾಗ ಆ ಹೋರಾಟ-ಒತ್ತಾಯ ಮರೆಯದೇ, ತಾವೇ ಸರ್ಕಾರಕ್ಕೆ ಕೊಟ್ಟ ಸಲಹೆಯಂತೆ ನಡೆದುಕೊಳ್ಳಬೇಕು ಎಂಬುದು ಹಲವರ ಅಭಿಪ್ರಾಯ. ಕಾಂಗ್ರೆಸ್‌ ಮತ್ತು ಮೈತ್ರಿ ಸರ್ಕಾರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಭೂಮಿ ಕಳೆದುಕೊಳ್ಳುವ ರೈತರಿಗೆ ಪ್ರತಿ ಎಕರೆ ನೀರಾವರಿಗೆ 40ಲಕ್ಷ, ಖುಷ್ಕಿ ಭೂಮಿಗೆ 25ಲಕ್ಷ ಪರಿಹಾರ ಕೊಡಬೇಕೆಂದು ಇದೇ ಕಾರಜೋಳರು ಡಿಸಿ ಕಚೇರಿ ಎದುರು ಹೋರಾಟ ಮಾಡಿದ್ದರು. ಆಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಖಂಡಿತಾ ನಾವು ರೈತರಿಗೆ ಈ ಪರಿಹಾರ ಕೊಡುತ್ತೇವೆಂದು ಹೇಳಿದ್ದರು.

ನೀವೇ ಹೇಳಿದ್ದು ನಡೆಸಿಕೊಡಿ: ಪ್ರಮುಖವಾಗಿ ಮಹದಾಯಿ ನದಿ ಜೋಡಣೆ ಯೋಜನೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಧ್ವನಿಯಲ್ಲಿ ಕೂಗಿದ್ದರು. ಈಗ ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಬಿಜೆಪಿ ಅಧಿಕಾರದಲ್ಲಿದೆ. ಹೀಗಾಗಿ ವಿಳಂಬ ಮಾಡದೇ ಮಹದಾಯಿ ನದಿ ಜೋಡಣೆ ಕೈಗೊಂಡರೆ, ಬಾದಾಮಿ ತಾಲೂಕಿನ ಕುಡಿಯುವ ನೀರಿನ ಬವಣೆ ನೀಗುತ್ತದೆ ಎಂಬುದು ಹಲವರ ಅಭಿಪ್ರಾಯ.

98 ಗ್ರಾಮಸ್ಥರ ಕೈ ಬಿಡದಿರಿ: ಕಳೆದ ತಿಂಗಳು ಜಿಲ್ಲೆಗೆ ಅಪ್ಪಳಿಸಿದ ಪ್ರವಾಹದಿಂದ 195 ಗ್ರಾಮಗಳ ಜನರು, ತೀವ್ರ ಸಂಕಷ್ಟದಲ್ಲಿದ್ದಾರೆ. ಇದರಲ್ಲಿ 40 ಗ್ರಾಮಗಳು ಆಸರೆ ಯೋಜನೆಯಡಿ, 46 ಗ್ರಾಮಗಳು ಯುಕೆಪಿಯಡಿ ಹಾಗೂ 12 ಗ್ರಾಮಗಳು ನಾರಾಯಣಪುರ ಹಿನ್ನೀರಿನಡಿ ಪರಿಹಾರ ಪಡೆದ ಗ್ರಾಮಗಳಾಗಿವೆ. ಹೀಗಾಗಿ ನೆರೆ ಪೀಡಿತ 195 ಗ್ರಾಮಗಳಲ್ಲಿ ಈಗ ಮನೆ ಹಾನಿ ಅಥವಾ ಬೆಳೆ ಹಾನಿಗೆ ಪರಿಹಾರ ನೀಡಲು 98 ಗ್ರಾಮ ಕೈಬಿಡಲಾಗಿದೆ. ಒಂದು ವೇಳೆ ಕೈಬಿಟ್ಟರೆ, ಆ ಗ್ರಾಮಗಳ ಜನರ ಬದುಕು ಶೋಚನೀಯವಾಗಲಿದೆ. ಮಾನವೀಯ ನೆಲೆಯಲ್ಲಿ ಪ್ರವಾಹದಿಂದ ಹಾನಿಯಾದ ಎಲ್ಲಾ ಗ್ರಾಮಗಳ ಜನರಿಗೆ ಪರಿಹಾರ ನೀಡಿ, ಇನ್ನುಮುಂದೆ ಮುಳುಗಡೆ ಗ್ರಾಮಗಳಲ್ಲಿ ಜನರು ವಾಸಿಸಿದರೆ, ಮುಂದೆ ಯಾವುದೇ ಪ್ರವಾಹ ಅಥವಾ ಸರ್ಕಾರಿ ಸೌಲಭ್ಯಗಳನ್ನು ಅಂತಹ ಗ್ರಾಮಸ್ಥರಿಗೆ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಬೇಕಿದೆ. ಆಗ ಜನರು ಹೊಸ ಗ್ರಾಮಗಳತ್ತ ಮುಖ ಮಾಡುತ್ತಾರೆ. ಇಲ್ಲದಿದ್ದರೆ ನೆರೆ ಸಂತ್ರಸ್ತರು ನದಿ ಪ್ರವಾಹಕ್ಕೆ ಒಮ್ಮೆ ಮುಳುಗಿದರೆ, ಸರ್ಕಾರವೂ ಕೈ ಹಿಡಿಯದಿದ್ದರೆ ಅವರ ಬದುಕು ಮತ್ತೆ ಮುಳುಗಲಿದೆ ಎಂಬುದು ನೆರೆ ಸಂತ್ರಸ್ತರ ಅಳಲು.

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.