Bagalkot Ticket ಬದಲಿಸಲು 2 ದಿನ ಗಡುವು ನೀಡಿದ ಕಾಶಪ್ಪನವರ್
Team Udayavani, Mar 22, 2024, 11:36 PM IST
ಬಾಗಲಕೋಟೆ: ವ್ಯಕ್ತಿಗಿಂತ ಪಕ್ಷ ದೊಡ್ಡದು. ಪಕ್ಷದೊಳಗಿನ ಶಿಸ್ತಿನ ಬಗ್ಗೆ ನಾನು ಯಾರಿಂದಲೂ ಕಲಿಯಬೇಕಿಲ್ಲ. ನಮ್ಮ ಪಕ್ಷದ ಹಿರಿಯರ ಮೇಲೆ ನನಗೆ ನಂಬಿಕೆ ಇದೆ. ಐದು ವರ್ಷ ಪಕ್ಷಕ್ಕಾಗಿ ದುಡಿದವರ ಹೆಸರನ್ನೇ ಎಐಸಿಸಿಗೆ ಕಳುಹಿಸಿಲ್ಲ. ಇದು ಕೇವಲ ಬಾಗಲಕೋಟೆ ಕ್ಷೇತ್ರದ ಸ್ವಾಭಿಮಾನಕ್ಕೆ ಧಕ್ಕೆಯಾಗಿಲ್ಲ. 50 ವರ್ಷಗಳಿಂದ ಕಾಂಗ್ರೆಸ್‌ನಲ್ಲಿರುವ ಕಾಶಪ್ಪನವರ್ ಕುಟುಂಬದ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ. ಹೈಕಮಾಂಡ್ ಎರಡು ದಿನಗಳಲ್ಲಿ ಟಿಕೆಟ್ ಬದಲಿಸಬೇಕು. ಇಲ್ಲದಿದ್ದರೆ ನಾನು ನನ್ನ ನಿರ್ಧಾರವನ್ನು ಪ್ರಕಟಿಸಬೇಕಾಗುತ್ತದೆ ಎಂದು ಹುನಗುಂದ ಶಾಸಕ, ಕರ್ನಾಟಕ ವೀರಶೈವ ಲಿಂಗಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ವೀಣಾ ಕಾಶಪ್ಪನವರ್ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು ಹಾಗೂ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಇತರ ಶಾಸಕರೇ ಬೆಂಬಲ ಕೊಡುತ್ತಿಲ್ಲ. ಅಂತಹ ವಿರೋಧದ ಮಧ್ಯೆ ಗೆದ್ದು ಬರುವ ತಾಕತ್ತು ಇದೆಯಾ ಎಂದು ವಿಜಯಪುರದವರೊಬ್ಬರು ಪ್ರಶ್ನೆ ಮಾಡಿದ್ದಾರೆ.
ನಮ್ಮ ತಾಕತ್ತು ಏನೆಂಬುದು ನನಗೆ ಗೊತ್ತಿದೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನ ಗೆಲ್ಲಲು ನನ್ನ ಪಾತ್ರವೂ ಇದೆ. 50 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಯಾರು ಬಂದರು, ಯಾರು ಹೋದರು ಎಲ್ಲವನ್ನೂ ನೋಡಿದ್ದೇನೆ. ನನಗೂ ಇಡೀ ರಾಜ್ಯವನ್ನೇ ಒಂದು ಕೈ ನೋಡೋಣ (ಸಿಎಂ ಆಗುವ ಕನಸು) ಎಂಬ ಆಲೋಚನೆ ಇದೆ ಎಂದರು.
ಪಕ್ಷನಿಷ್ಠೆ ಬಗ್ಗೆ ಮಾತನಾಡುವ ಸಚಿವ ಶಿವಾನಂದ ಪಾಟೀಲ್ ಕುಟುಂಬದವರು ಯಾವ ಯಾವ ಪಕ್ಷದಲ್ಲಿದ್ದಾರೆ. ನೀವು ಯಾವಾಗ ಕಾಂಗ್ರೆಸ್‌ಗೆ ಬಂದಿದ್ದೀರಿ. ನೀವು ಪಕ್ಷಕ್ಕೆ ಬರುವ ಮೊದಲೇ ನಮ್ಮ ತಂದೆ ಶಾಸಕರು, ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ನಿಮ್ಮಿಂದ ಪಕ್ಷದ ಬಗ್ಗೆ ತಿಳಿದುಕೊಳ್ಳಬೇಕಿಲ್ಲ ಎಂದರು.
ನಮ್ಮ ಪಕ್ಷದ ಹಿರಿಯರ ಮೇಲೆ ನನಗೆ ವಿಶ್ವಾಸವಿದೆ. ಯಾರದೋ ಬೆದರಿಕೆ ಅಥವಾ ಆಮಿಷಕ್ಕೆ ಬಗ್ಗದೆ ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಇಲ್ಲದಿದ್ದರೆ ಎರಡು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ.
– ವಿಜಯಾನಂದ ಕಾಶಪ್ಪನವರ್, ಕಾಂಗ್ರೆಸ್ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.