ಜನರ ಆರೋಗ್ಯ ಮೇಲಿರಲಿ ನಿಗಾ

Team Udayavani, Apr 19, 2020, 6:08 PM IST

ಜನರ ಆರೋಗ್ಯ ಮೇಲಿರಲಿ ನಿಗಾ

ಬಾದಾಮಿ: ಕೋವಿಡ್ 19 ವೈರಸ್‌ ಹರಡದಂತೆ ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಸ್ವಕ್ಷೇತ್ರದ ತಾಲೂಕಾಮಟ್ಟದ ಅಧಿಕಾರಿಗಳೊಂದಿಗೆ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಶನಿವಾರ ವಿಡಿಯೋ ಕಾನ್ಫೆರೆನ್ಸ್‌ ನಡೆಸಿ ಮಾಹಿತಿ ಪಡೆದರು.

ಕೋವಿಡ್ 19  ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಲಹೆ ಸೂಚನೆ ನೀಡಿದರು. ಗ್ರಾಮೀಣ ಭಾಗಗಳಲ್ಲಿ ಗ್ರಾಪಂ ವತಿಯಿಂದ ಕೂಲಿ ಕಾರ್ಮಿಕರಿಗೆ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಕಲ್ಪಿಸುವುದು, ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ, ತಾಲೂಕಿನ ಮತಕ್ಷೇತ್ರದ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನಚ್ಚರಿಕೆ ತೆಗೆದುಕೊಳ್ಳಬೇಕು, ಕಾರ್ಮಿಕರಿಗೆ ಅಗತ್ಯ ನೆರವು, ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು ಎಂದು ಹೇಳಿದರು.

ವಲಸೆ ಹೋಗಿದ್ದ ಕಾರ್ಮಿಕರು ಸ್ವಕ್ಷೇತ್ರಕ್ಕೆ ಬಂದಿರುವ ಸೌಲಭ್ಯಗಳ ಬಗ್ಗೆ ವಿವರಣೆ ಪಡೆದರು. ಗುಳೇದಗುಡ್ಡ, ಕೆರೂರ, ಬಾದಾಮಿ ಪಟ್ಟಣದ ಸಾರ್ವಜನಿಕರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ತಾಲೂಕಾಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್‌ ಸುಹಾಸ ಇಂಗಳೆ ಮಾಹಿತಿ ನೀಡಿ, ಈಗಾಗಲೇ ಕೋವಿಡ್ 19  ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಹೊರ ರಾಜ್ಯದಿಂದ ಬಂದ 893 ಜನರನ್ನು ಮತ್ತು ಹೊರ ಜಿಲ್ಲೆಯಿಂದ ಬಂದ 37 ಜನರನ್ನು ಸೇರಿದಂತೆ ಎಲ್ಲರನ್ನು ಪರೀಕ್ಷೆ ಮಾಡಿಸಲಾಗಿದೆ. ಯಾರಿಗೂ ಕೊರೊನಾ ಸೋಂಕು ಇಲ್ಲ ಇವರೆಲ್ಲರನ್ನು ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ 43 ಜನರನ್ನು ಜಾಲಿಹಾಳ ವಸತಿ ನಿಲಯದಲ್ಲಿ ಮತ್ತು ಗುಳೇದಗುಡ್ಡದಲ್ಲಿ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ತಾಲೂಕಿನಲ್ಲಿ ಈಗಾಗಲೇ ಅಗತ್ಯ ಮಾಸ್ಕ್, 7 ವೆಂಟಿಲೇಟರ್‌, ಸ್ಯಾನಿಟೈಸರ್‌ ಲಭ್ಯಇವೆ. ತಾಲೂಕಿನ 70324 ಬಿಪಿಎಲ್‌, ಎಎಪಿ ಕುಟುಂಬಗಳಿಗೆ ಎರಡು ತಿಂಗಳು ಪಡಿತರ ವಿತರಣೆ ಮಾಡಬೇಕಾಗಿದ್ದು, ಇದರಲ್ಲಿ ಶೇ70 ರಷ್ಟು ಕುಟುಂಬಗಳಿಗೆ ವಿತರಣೆ ಮಾಡಲಾಗಿದೆ.

322 ಕುಟುಂಬಗಳಿಗೆ ತಾತ್ಕಾಲಿಕ ಪಡಿತರ ನೀಡಿ ಅಗತ್ಯ ಪಡಿತರ ವಿತರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಹಾರಾಷ್ಟ್ರದಿಂದ ವಲಸೆ ಬಂದಿರುವ 26 ಅಲೆಮಾರಿ ಕುಟುಂಬಗಳಿಗೆ ಪಡಿತರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ವಿಡಿಯೋ ಕಾನ್ಪ ರೆನ್ಸ್‌ನಲ್ಲಿ ತಹಶೀಲ್ದಾರ್‌ ಸುಹಾಸ ಇಂಗಳೆ, ತಾಪಂ ಇಒ ಡಾ| ಪುನೀತ, ಪುರಸಭೆ ಮುಖ್ಯಾಧಿಕಾರಿ ಜ್ಯೋತಿಗಿರೀಶ, ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ಪ್ರಕಾಶ ಬಣಕಾರ ಸೇರಿದಂತೆ ತಾಲೂಕಾಮಟ್ಟದ ಎಲ್ಲ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಸೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಶೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

2

Mudhol: ಸಾಲಬಾಧೆಯಿಂದ ರೈತ ಆತ್ಮಹ*ತ್ಯೆ

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

ರಬಕವಿ-ಬನಹಟ್ಟಿ: ಜಗದಾಳ ರೈತನ ಬಾಳೆಹಣ್ಣು ಇರಾನ್‌ ದೇಶಕ್ಕೆ ರಫ್ತು

ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್‌ ದೇಶಕ್ಕೆ ರಫ್ತು!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.