ಕತ್ತಲೆ ಭಾಗ್ಯ ಕೊಡ್ತಿದೆ ಕಾಂಗ್ರೆಸ್ ಸರ್ಕಾರ: ಬಿಜೆಪಿ ಆರೋಪ
Team Udayavani, Jan 24, 2017, 1:06 PM IST
ಬಾಗಲಕೋಟೆ: ಹೊತ್ತು ಗೊತ್ತಿಲ್ಲದೇ ವಿದ್ಯುತ್ ಕಡಿತಗೊಳಿಸುವ ಮೂಲಕ ಜನತೆಗೆ ಕತ್ತಲೆಭಾಗ್ಯವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಲ್ಪಿಸಿದೆ ಎಂದು ಟೀಕಿಸಿದ ಬಿಜೆಪಿ ಕಾರ್ಯಕರ್ತರು, ಸೋಮವಾರ ನವನಗರದ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರ ಹಾಗೂ ನಗರ ಘಟಕದ ಹಲವಾರುಮುಖಂಡರು, ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದರು. ಸುಮಾರು ಅರ್ಧ ಗಂಟೆಗೂ ಅಧಿಕ ಕಚೇರಿ ಎದುರು ಧರಣಿ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಬರಗಾಲದ ಈ ಸಂದರ್ಭದಲ್ಲಿ ರೈತರು ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸದ್ಯ ನೀರಾವರಿ ಹೊಂದಿರುವ ರೈತರಾದರೂ ಹೊಟ್ಟೆ ತುಂಬಿಸಿಕೊಳ್ಳುವುದಕ್ಕೆ ಕೃಷಿ ಕೈಗೊಂಡಿದ್ದರು.
ಆದರೆ, ಸದ್ಯದ ಸರ್ಕಾರ ಹಾಗೂ ಸರ್ಕಾರಿ ಅಧಿಕಾರಿಗಳು ರೈತರಿಗೆ ವಿದ್ಯುತ್ ಅಭಾವ ಸೃಷ್ಟಿಸುತ್ತಿದ್ದಾರೆ. ಇಲ್ಲಿಯವರೆಗೂ ವಿದ್ಯುತ್ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳುತ್ತವೆಂಬ ಆಶ್ವಾಸನೆ ನೀಡಿ ಸದ್ಯ ರೈತರಿಗೆ ವಿದ್ಯುತ್ ಅಭಾವ ಸೃಷ್ಟಿಸುತ್ತಿದ್ದಾರೆ. ಸರ್ಕಾರ ಹಾಡುಹಗಲೇ ಮಣ್ಣು ಎರೆಚುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಬರಗಾಲದ ಪರಿಸ್ಥಿತಿಯಲ್ಲಿ ಬೆಳೆಗಳಿಗೆ ಬೆಲೆ ಇಲ್ಲದೇ ಜನ ಜಾನುವಾರುಗಳಿಗೆ ನೀರಿನ ಅವಶ್ಯಕತೆ ಇದ್ದು, ವಿದ್ಯುತ್ ಇಲ್ಲದೇ ಹಾಹಾಕಾರ ಉಂಟಾಗಿದೆ. ಇದರಿಂದಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು. ರೈತರಿಗೆ ಆಶ್ವಾಸನೆ ನೀಡಿ ಅಧಿಕಾರ ಪಡೆದ ತಮ್ಮ ಮಾತುಗಳನ್ನು ನೆನಪಿಸಿಕೊಂಡು ರೈತರ ಪರ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ರೈತ ಮೋರ್ಚಾ ಅಧ್ಯಕ್ಷ ರಾಮಣ್ಣ ಹೆರಕಣ್ಣವರ, ಗ್ರಾಮೀಣ ಘಟಕದ ಅಧ್ಯಕ್ಷ ರಾಜು ಮುದೇನೂರ, ಪ್ರಧಾನ ಕಾರ್ಯದರ್ಶಿ ಸುರೇಶ ಕೊಣ್ಣೂರ, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ, ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ ಅವರಾದಿ, ನರೇಂದ್ರ ಕುಪ್ಪಸ್ತ, ನಗರಸಭೆ ಉಪಾಧ್ಯಕ್ಷೆ ಭಾರತಿ ಕೂಡಗಿ, ಸದಸ್ಯರಾದ ಉಮಾ ಚಟ್ಟರಕಿ, ಕವಿತಾ ದಾಯಪುಲೆ, ಮುಖಂಡರಾದ ಧೂಳಪ್ಪ ಕೊಪ್ಪದ, ಮಹಾಂತೇಶ ಯಳ್ಳಿಗುತ್ತಿ, ಬಸಪ್ಪ ಯಳ್ಳಿಗುತ್ತಿ, ಕಳಕಪ್ಪ ಬಾದೋಡಗಿ, ಶೈಲಾ ಅಂಕಲಗಿ, ಭಾರತಿ ಪಾಟೀಲ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.