ಕೊಟ್ಪಾ ದಾಳಿ: 35 ಪ್ರಕರಣ, ದಂಡ ವಸೂಲಿ
Team Udayavani, May 31, 2020, 6:23 AM IST
ಬಾಗಲಕೋಟೆ: ಜಿಲ್ಲೆಯಾದ್ಯಂತ ತಂಬಾಕು ಮಾರಾಟ ಮಾಡುವ ಅಂಗಡಿ ಗಳ ಮೇಲೆ ದಾಳಿ ಮುಂದುವರಿದಿದ್ದು, ಶನಿವಾರ ಬೀಳಗಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ನಿಯಂತ್ರಣ ತಂಡ ದಾಳಿ ನಡೆಸಿ ನಿಯಮಗಳ ಉಲ್ಲಂಘನೆ ಆರೋಪದಡಿ 35 ಪ್ರಕರಣ ದಾಖಲಿಸುವ ಮೂಲಕ 2400 ರೂ.ಗಳ ದಂಡ ವಿಧಿಸಿದೆ.
ಬೀಳಗಿ ನಗರದಲ್ಲಿ ತಂಬಾಕು ಉತ್ಪನ್ನಗಳ ಸಗಟು ಹಾಗೂ ಚಿಲ್ಲರೆ ಮಾರಾಟಗಾರರ ಅಂಗಡಿಗಳಿಗೆ ದಾಳಿ ನಡೆಸಿದಾಗ ಕೊಟ್ಪಾ ಕಾಯ್ದೆ-2003ರ 4, ಮತ್ತು 6 ಸೆಕ್ಷನ್‌ಗಳ ಉಲ್ಲಂಘಿಸಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಮೂಲಕ ದಂಡ ವಿಧಿಸಲಾಯಿತು. ತಂಬಾಕು ಉತ್ಪನ್ನಗಳ ಮಾರಾಟ, ಮಾರಾಟಗಾರರಿಗೆ ತಮ್ಮ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಫಲಕ ಹಾಕುವುದು ಹಾಗೂ ಸಿಗರೇಟ್ ಬೀಡಿಗಳನ್ನು ಬಿಡಿ ಬಿಡಿಯಾಗಿ ಮಾರಾಟ ಮಾಡಬಾರದು ಹಾಗೂ ತಂಬಾಕು ಉತ್ಪನ್ನಗಳ ಬಗ್ಗೆ ಗೋಡೆ ಬರಹ, ಹೋರ್ಡಿಂಗ್ಸ್ ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡಬಾರದು ಎಂದು ಕರಪತ್ರ ನೀಡುವ ಮೂಲಕ ತಿಳಿಸಿದರು.
ದಾಳಿಯಲ್ಲಿ ಬೀಳಗಿ ತಾಲೂಕ ಆರೋಗ್ಯ ಅಧಿಕಾರಿ ಡಾ| ದಯಾನಂದ ಕರೆನ್ನವರ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ಜಿಲ್ಲಾ ತಂಬಾಕು ಸಲಹೆಗಾರ ಶಶಿಕಾಂತ ಕುಮಠಳ್ಳಿ, ತಾಲೂಕಿನ ಹಿರಿಯ ಆರೋಗ್ಯ ಮೇಲ್ವಿಚಾರಕರು ಶಿವಲಿಂಗ ಕರಗಣ್ಣಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
MUST WATCH
ಹೊಸ ಸೇರ್ಪಡೆ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.