ಮಲಪ್ರಭೆ ಮಕ್ಕಳಿಗೆ ಕೃಷ್ಣೆಯ ನೀರು


Team Udayavani, Feb 1, 2020, 11:55 AM IST

bk-tdy-1

ಬಾಗಲಕೋಟೆ: ಬಾದಾಮಿ ತಾಲೂಕು ತೆಗ್ಗಿಯಲ್ಲಿ ಕುಡಿಯುವ ನೀರಿಗಾಗಿ ನಿತ್ಯ ಕಾಣುವ ದೃಶ್ಯ

ಬಾಗಲಕೋಟೆ: ಮಲಪ್ರಭಾ ನದಿ ಪಾತ್ರದ ಬಾದಾಮಿ, ಗುಳೇದಗುಡ್ಡ ಹಾಗೂ ಹುನಗುಂದ ತಾಲೂಕು ವ್ಯಾಪ್ತಿಯ 18 ಗ್ರಾಮಗಳು ಹಾಗೂ ಎರಡು ಪಟ್ಟಣಗಳು ಹಲವು ವರ್ಷಗಳಿಂದ ಎದುರಿಸುತ್ತಿರುವ ಕುಡಿಯುವ ನೀರಿನ ನಿರಂತರ ಸಮಸ್ಯೆಗೆ ಮುಕ್ತಿ ಕೊಡಲು ಬೃಹತ್‌ ಯೋಜನೆಯೊಂದು ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿದೆ.

ಹೌದು, ಆಲಮಟ್ಟಿ ಜಲಾಶಯದಿಂದ ಐತಿಹಾಸಿಕ ಬಾದಾಮಿ ಪಟ್ಟಣ, ಕೆರೂರ ಹಾಗೂ ಮಾರ್ಗಮಧ್ಯೆ ಬರುವ ಮೂರು ತಾಲೂಕಿನ 18 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ 227.80 ಕೋಟಿ ಮೊತ್ತದ ಯೋಜನೆ ಇದೇ ಫೆ. 3ರಂದು ಅನುಷ್ಠಾನಗೊಳ್ಳುತ್ತಿದೆ.

ನೀರಿಗಾಗಿ ನಿತ್ಯ ಪರದಾಟ: ಬಾದಾಮಿ, ಕೆರೂರ ಪಟ್ಟಣ ಸಹಿತ 18 ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಇಂದು-ನಿನ್ನೆಯದಲ್ಲ. ಅದರಲ್ಲೂ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ, ಕಳೆದ 6 ವರ್ಷಗಳಿಂದ ಜಿ.ಪಂ. ಸಾಮಾನ್ಯ ಸಭೆ, ಕೆಡಿಪಿ ಸಭೆಗಳು ಸಹಿತ ಎಲ್ಲೆಡೆ ಚರ್ಚೆಯಾಗುತ್ತಲೇ ಇದೆ. ವಾಸ್ತವದಲ್ಲಿ ಈ ಗ್ರಾಮಕ್ಕೆ ಐಹೊಳೆ ಮತ್ತು ಇತರೆ ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಯಡಿ ನೀರು ಕೊಡಬೇಕಿತ್ತು. ಆ ಯೋಜನೆ ಸಫಲವಾಗದ ಕಾರಣ, ಗುಳೇದಗುಡ್ಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಆಲಮಟ್ಟಿ ಯೋಜನೆಯಡಿಯೇ ಅಮೀನಗಡ ಪಟ್ಟಣಕ್ಕೆ ನೀರು ಕೊಡುತ್ತಿದ್ದು, ಆ ಯೋಜನೆಯಡಿ ಸೂಳೆಬಾವಿಗೆ ನೀರು ಕೊಡಲು ಚರ್ಚೆಯಾಗಿತ್ತು. ಅದಕ್ಕಾಗಿ ಯೋಜನೆಯೂ ರೂಪಿಸಲಾಗಿತ್ತು.

ಆದರೆ, ಅಮೀನಗಡ-ಗುಳೇದಗುಡ್ಡ ಪಟ್ಟಣಗಳಿಗೆ ನೀರಿನ ಕೊರತೆ ಉಂಟಾಗಲಿದೆ ಎಂಬ ಕಾರಣ, ಅದು ಚಿಂತನೆ ನಿಂತು ಹೋಗಿತ್ತು. ಐಹೊಳೆ, ಸೂಳೆಬಾವಿ ಸಹಿತ ಸದ್ಯ ಯೋಜನೆಯಡಿ ಅಳವಡಿಸಿರುವ ಪ್ರತಿಯೊಂದು ಹಳ್ಳಿಯಲ್ಲೂ ಕುಡಿಯುವ ನೀರಿಗಾಗಿ ನಿತ್ಯವೂ ಪರದಾಡುವ ಪರಿಸ್ಥಿತಿ ಇದೆ. ಅದರಲ್ಲೂ ಕಂಕಣಕೊಪ್ಪ, ತೆಗ್ಗಿ ಗ್ರಾಮದಲ್ಲಂತೂ ಎಷ್ಟೇ ಕೊಳವೆ ಬಾವಿ ಕೊರೆಸಿದರೂ ಸವಳು ನೀರು ದೊರೆಯುತ್ತಿದ್ದು, ಬೇರೆ ಗ್ರಾಮಗಳಿಂದ ಈ ಊರಿಗೆ ನೀರು ಕೊಡಲಾಗುತ್ತಿದೆ. ಈ ಯೋಜನೆ ಸರಿಯಾಗಿ ಅನುಷ್ಠಾನಗೊಂಡಲ್ಲಿ, ನೀರಿನ ಸಮಸ್ಯೆಗೆ ತಿಲಾಂಜಲಿ ಬೀಳಲಿದೆ.

ಬಹು ವರ್ಷಗಳ ಬೇಡಿಕೆ: ಬಾದಾಮಿ ಪಟ್ಟಣಕ್ಕೆ ಗುಳೇದಗುಡ್ಡ ಮಾದರಿ ಆಲಮಟ್ಟಿ ಜಲಾಶಯದಿಂದ, ಕೆರೂರ ಪಟ್ಟಣಕ್ಕೆ ಅನಗವಾಡಿ ಹತ್ತಿರದ ಆಲಮಟ್ಟಿ ಜಲಾಶಯದ ಹಿನ್ನೀರ ಪ್ರದೇಶದಿಂದ ಕುಡಿಯುವ ನೀರು ಪೂರೈಕೆ ಯೋಜನೆ ಕೈಗೊಳ್ಳಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಜಿಲ್ಲೆಯಲ್ಲಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳು ತುಂಬಿ ಹರಿದರೂ, ಆಲಮಟ್ಟಿ ಜಲಾಶಯದ ಬೃಹತ್‌ ಹಿನ್ನೀರಿದ್ದರೂ ಜಿಲ್ಲೆಯ ಬಹುತೇಕ ಗ್ರಾಮಗಳು, ಕುಡಿಯುವ ನೀರಿನ ಸಮಸ್ಯೆಯಿಂದ ಮುಕ್ತಿಯಾಗಿಲ್ಲ. ಕೆಲವು ಹಳ್ಳಿಗಳಲ್ಲಿ ಮಳೆಗಾಲದಲ್ಲೂ ನೀರಿನ ಸಮಸ್ಯೆಗೆ ಬೇರೆ ಗ್ರಾಮಗಳನ್ನೇ ಅವಲಂಭಿಸಿವೆ. ಹೀಗಾಗಿ ಆಲಮಟ್ಟಿ ಜಲಾಶಯದಿಂದ ಕುಡಿಯುವ ನೀರು ಪೂರೈಸುವ ಈ ಬೃಹತ್‌ ಯೋಜನೆ, ಮೂರು ತಾಲೂಕಿನ ಎರಡು ಪಟ್ಟಣ, 18 ಹಳ್ಳಿಗಳಿಗೆ ಜಲ ಸಂಜೀವಿನಿಯಾಗಲಿದೆ.

ನಿರಂತರ ನೀರಿಗೆ ಸಿದ್ದು ನಿರಂತರ ಪ್ರಯತ್ನ: ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಬಾದಾಮಿ ಕ್ಷೇತ್ರದಿಂದ ಆಯ್ಕೆಯಾದ ಬಳಿಕ ಬಾದಾಮಿಯಲ್ಲಿ ನಡೆದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಪಟ್ಟಣದ ನೂರಾರು ಪ್ರಮುಖರು, ಈ ಯೋಜನೆಯ ಬೇಡಿಕೆಯೇ ಮೊದಲ ಮನವಿಯಾಗಿ ಸಲ್ಲಿಸಿದ್ದರು. ಐತಿಹಾಸಿಕ ಬಾದಾಮಿ ಪಟ್ಟಣದ ನೀರಿನ ಸಮಸ್ಯೆ ವಿವರಿಸಿ, ಆಲಮಟ್ಟಿ ಜಲಾಶಯದಿಂದ ನೀರು ಪೂರೈಕೆಗೆ ಕೇಳಿಕೊಂಡಿದ್ದರು. ಕೆರೂರಲ್ಲೂ ಇದೇ ಮನವಿ ಸಿದ್ದರಾಮಯ್ಯ ಅವರಿಗೆ ಬಂದಿತ್ತು. ಇನ್ನು ಗ್ರಾಮೀಣ ಭಾಗದಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಪ್ರವಾಸದ ವೇಳೆಯೂ ಕುಡಿಯುವ ನೀರಿಗಾಗಿಯೇ ಮನವಿ ಬರುತ್ತಿದ್ದವು. ಹೀಗಾಗಿ ಈ ಯೋಜನೆ ಕುರಿತು ಗಂಭೀರವಾಗಿ ಪ್ರಯತ್ನಿಸಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ, 227.80 ಕೋಟಿ ಮೊತ್ತದ ಬೃಹತ್‌ ಯೋಜನೆ ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.

ಯಾವ ಯಾವ ಹಳ್ಳಿಗೆ ನೀರು: ಈ ಯೋಜನೆಯಿಂದ ಬಾದಾಮಿ ಮತ್ತು ಕೆರೂರ ಪಟ್ಟಣ, ಹುನಗುಂದ ತಾಲೂಕಿನ ಐತಿಹಾಸಿಕ ಪ್ರವಾಸಿ ತಾಣ ಐಹೊಳೆ ಹಾಗೂ ಸೂಳೆಭಾವಿ, ಗುಳೇದಗುಡ್ಡ ಮತ್ತು ಬಾದಾಮಿ ತಾಲೂಕು ವ್ಯಾಪ್ತಿಯ ತೋಗುಣಸಿ, ಲಿಂಗಾಪುರ, ತಿಮ್ಮಸಾಗರ, ಕೆಲೂಡಿ, ತೆಗ್ಗಿ, ಕುಟುಕನಕೇರಿ, ಆಡಗಲ್‌, ಹಂಸನೂರ, ಹಿರೇಬೂದಿಹಾಳ, ಖಾಜಿಬೂದಿಹಾಳ, ಹನಸಗೇರಿ, ಕಟಗೇರಿ, ಕೊಂಕಣಕೊಪ್ಪ, ಹುಲಸಗೇರಿ, ಲಕ್ಕಸಕೊಪ್ಪ, ಜಮ್ಮನಕಟ್ಟಿ ಗ್ರಾಮಗಳಿಗೆ ಈ ಯೋಜನೆಯಿಂದ ನಿರಂತರ ನೀರು ಪೂರೈಕೆ ಆಗಲಿದೆ.  ಈ ಯೋಜನೆಯನ್ನು ಕರ್ನಾಟಕ ನಗರ ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿದೆ. ಈ ಮಂಡಳಿಯಿಂದ ಇಳಕಲ್ಲ ನಗರ, ಬಾಗಲಕೋಟೆಯ ಹಳೆಯ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಈಗಾಗಲೇ ಇಂತಹದ್ದೇ ಕುಡಿಯುವ ನೀರಿನ ಯೋಜನೆ ಕೈಗೊಂಡಿದ್ದು, ಕಾಲಮಿತಿ ಮತ್ತು ಸರಿಯಾಗಿ ಅನುಷ್ಠಾನಗೊಳಿಸಿಲ್ಲ ಎಂಬ ಆರೋಪ ಮಂಡಳಿ ಮೇಲಿದೆ. ಹೀಗಾಗಿ ನಿರಂತರ ಕುಡಿಯುವ ಯೋಜನೆಗೆ ನಿರಂತರ ನಿಗಾ ಇಡಬೇಕಾದ ಜವಾಬ್ದಾರಿಯೂ ಸಿದ್ದರಾಮಯ್ಯ ಮೇಲಿದೆ. ಯೋಜನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಕೃಷ್ಣೆಯಿಂದ ಮಲಪ್ರಭಾ ನದಿ ಭಾಗದ ಜನರಿಗೆ ನಿರಂತರ ನೀರು ದೊರೆಯಲಿ ಎಂಬುದೇ ಜನರ ಬಯಕೆ.

 

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.