Kulageri Cross; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್‌ಗಳನ್ನ ನಿಲ್ಲಿಸಿ ಪ್ರತಿಭಟನೆ

ಪ್ರಾಥಮಿಕ ಆರೋಗ್ಯ ಕೇಂದ್ರ ಬಳಿ ಸಾರಿಗೆ ಬಸ್‌ ನಿಲ್ಲಿಸುತ್ತಿಲ್ಲ ಎಂದು ಗ್ರಾಮಸ್ಥರಿಂದ ಪ್ರತಿಭಟನೆ

Team Udayavani, Jun 10, 2024, 7:07 PM IST

Kulageri Cross; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್‌ಗಳನ್ನ ನಿಲ್ಲಿಸಿ ಪ್ರತಿಭಟನೆ

ಕುಳಗೇರಿ ಕ್ರಾಸ್: ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಸಾರಿಗೆ ಬಸ್ ಪ್ರಾಥಮಿಕ ಆರೋಗ್ಯ ಕೇಂದ್ರ ಬಳಿ ನಿಲ್ಲಿಸುತ್ತಿಲ್ಲ ಎಂದು ಖಾನಾಪೂರ ಎಸ್‌ಕೆ ಗ್ರಾಮ ಸೇರಿದಂತೆ ಸುತ್ತ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್‌ಗಳನ್ನ ನಿಲ್ಲಿಸಿ ದಿಢೀರ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಸದಸ್ಯ ಶೇಖಪ್ಪ ಪವಾಡಿನಾಯ್ಕರ್ ನಮ್ಮ ಗ್ರಾಮಸ್ಥರು ಬಸ್ ನಿಲುಗಡೆಗಾಗಿ ಸುಮಾರು ನಾಲ್ಕೈದು ವರ್ಷಗಳಿಂದ ಹೋರಾಡುತ್ತಿದ್ದಾರೆ. ಬಸ್ ನಿಲ್ಲಿಸುವಂತೆ ಸಾರಿಗೆ ಅಧಿಕಾರಿಗಳು ಆದೇಶ ಮಾಡಿದ್ದಾರೆ ಆದರೂ ಬಸ್ ಚಾಲಕರು ಪ್ರಯಾಣಿಕರ ಜೊತೆ ಸಹಕರಿಸದೆ ಬಸ್ ನಿಲ್ಲಿಸದೇ ತೆರಳುತ್ತಿದ್ದಾರೆ. ಈ ಕುರಿತು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದೇವೆ ಆದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಗಳ ಸುರಿಮಳೆ ಸುರಿಸಿದರು.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಮನವೊಲಿಕೆಗೆ ಎಷ್ಟೇ ಪ್ರಯತ್ನಿಸಿದರೂ ಒಪ್ಪದ ಗ್ರಾಮಸ್ಥರು ಬಸ್ ನಿಲ್ಲಿಸುವವರೆಗೂ ನಮ್ಮ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ದಿಢೀರ್ ಪ್ರತಿಭಟನೆ ಕೈಗೊಂಡಿದ್ದರಿಂದ ನೂರಾರು ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಲ್ಲತೊಡಗಿದವು ಪ್ರಯಾಣಿಕರು ತೊಂದರೆ ಅನುಭವಿಸಿದರು. ವಿಕೋಪಕ್ಕೆ ಹೋಗುವುದನ್ನ ಗಮನಿಸಿದ ಪೊಲೀಸರು ಮೇಲಾಧಿಕಾರಿಗಳ ಗಮನಕ್ಕೆ ತಂದರು.

ನಂತರ ಸ್ಥಳಕ್ಕೆ ಆಗಮಿಸಿದ ಬಾದಾಮಿ ಪಿಎಸ್‌ಐ ವಿಠಲ್ ನಾಯಕ್ ಪ್ರತಿಭಟನಾಕಾರರನ್ನು ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಗ್ರಾಮಸ್ಥರ ಜೊತೆ ಮಾತನಾಡಿ ತೊಂದರೆಗಳನ್ನ ಆಲಿಸಿದರು. ಡಿಪೋ ಮ್ಯಾನೇಜರ್ ಜೊತೆ ಮಾತನಾಡಿ ಇಲ್ಲಿ ಆರೋಗ್ಯ ಕೇಂದ್ರ ಇರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತದೆ ತಾವು ಬಸ್ ನಿಲ್ಲಿಸುವಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಹೇಳಿದರು.

ಅದಕ್ಕೆ ಸ್ಪಂದಿಸಿದ ಡಿಪೋಮ್ಯಾನೇಜರ್ ನಮ್ಮ ಜಿಲ್ಲೆಯ ಘಟಕಗಳಿಂದ ಬರುವ ಎಲ್ಲ ಬಸ್ ನಿಲ್ಲಿಸುವಂತೆ ಇಂದಿನಿಂದಲೇ ಆದೇಶಿಸುತ್ತಿದ್ದೇನೆ ಎಂದು ಹೇಳಿದರು

ಪ್ರತಿಭಟನೆಗೆ ಕಾರಣ: ಹೆರಿಗೆಗಾಗಿ ಆಸ್ಪತ್ರೆಗೆ ಬರುತ್ತಿದ್ದ ಮಹಿಳೆಯೊಬ್ಬರು ಎಷ್ಟೇ ಅಂಗಲಾಚಿ ಬೇಡಿಕೊಂಡರು ಸಾರಿಗೆ ಬಸ್ ಚಾಲಕ ನಿಲ್ಲಿಸಿಲ್ಲ. ದಾರಿಯಲ್ಲೇ ಆ ಮಹಿಳೆಯ ಹೆರಿಗೆಯಾಯಿತು ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.