ಸಮಗ್ರ ನೀರಾವರಿಯತ್ತ ಹರಿಯಲಿ ಸಿಎಂ ಚಿತ್ತ

ನಾಡಿದ್ದು ಮುಖ್ಯಮಂತ್ರಿ ಬೊಮ್ಮಾಯಿ ಬಾಗಿನ ಅರ್ಪಣೆ| ­ಕೃಷ್ಣೆ ತೀರದ ರೈತರ ಮೊಗದಲ್ಲಿ ಹರ್ಷ

Team Udayavani, Aug 19, 2021, 9:23 PM IST

yrytet5454

ವರದಿ: ಶಂಕರ ಜಲ್ಲಿ

ಆಲಮಟ್ಟಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಲ್ಲೊಂದಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಕೇಂದ್ರ ಭಾಗವಾಗಿರುವ ಆಲಮಟ್ಟಿ ಶಾಸ್ತ್ರಿ ಸಾಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆ. 21ರಂದು ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಿದ್ದಾರೆ.

ರಾಜ್ಯದ ಶೇ. 60 ಭೂಮಿಯನ್ನು ನೀರಾವರಿಗೊಳಪಡಿಸುವ ಬೃಹತ್‌ ಕೃ.ಮೇ.ಯೋ. ಕೇಂದ್ರ ಸ್ಥಾನ ಆಲಮಟ್ಟಿಯಲ್ಲಿ ಕೃಷ್ಣೆಗೆ ನಿರ್ಮಿಸಿರುವ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ತುಂಬಿ ನಿಂತಿದೆ. ಶಾಸ್ತ್ರಿ ಜಲಾಶಯಕ್ಕೆ ಮಹಾಪೂರ ಬಂದು ತಿಂಗಳುಗಳವರೆಗೆ ಸುಮಾರು 425 ಟಿಎಂಸಿ ಅಡಿ ನೀರನ್ನು ಜಲಾಶಯದಿಂದ ಹೊರ ಬಿಡಲಾಗಿದೆ.

ಬರದ ನಾಡಿನ ದಾಹ ನೀಗಿಸಲು ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಪ್ರಧಾನಿಯಾಗಿದ್ದ ಶಾಸ್ತ್ರೀಜಿಯವರು 1964 ಮೇ 22ರಂದು ಭೂಮಿಪೂಜೆ ನೆರವೇರಿಸಿದ್ದರು. ನಂತರ ಕಟ್ಟಡದ ಕಾಮಗಾರಿ ಹಾಗೂ ಭೂ ಸ್ವಾ ಧೀನ, ಪುನರ್ವಸತಿ ಮತ್ತು ಪುನರ್‌ ನಿರ್ಮಾಣ ಯೋಜನೆಗಳು ಆಮೆಗತಿಯಲ್ಲಿ ಸಾಗಿದ್ದವು. ಇದರಿಂದ ಜಲಾಶಯದ ಕಟ್ಟಡ ನಿರ್ಮಾಣ ಕಾಮಗಾರಿ 2000ನೇ ಸಾಲಿನಲ್ಲಿ ಪೂರ್ಣಗೊಂಡಿದ್ದರೂ 2002ರಿಂದ ನೀರು ಸಂಗ್ರಹಿಸಲು ಆರಂಭಿಸಲಾಯಿತು.

ಜಲಾಶಯವನ್ನು 2006ರಲ್ಲಿ ಆ. 21ರಂದು ಜೆಡಿಎಸ್‌ -ಬಿಜೆಪಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ. ಕುಮಾರಸ್ವಾಮಿಯವರು ರಾಷ್ಟ್ರಪತಿಯಾಗಿದ್ದ ಖ್ಯಾತ ವಿಜ್ಞಾನಿ ಡಾ| ಎ.ಪಿ.ಜೆ. ಅಬ್ದುಲ್‌ಕಲಾಂ ಅವರಿಂದ ಲೋಕಾರ್ಪಣೆಗೊಳಿಸಿದ್ದರು. ಗೇಟು ಜೋಡಿಸಿ: ಮಹಾರಾಷ್ಟ್ರ, ಕರ್ನಾಟಕ ಹಾಗೂ ಆಂಧ್ರಪ್ರದೇಶ ರಾಜ್ಯಗಳ ವ್ಯಾಜ್ಯದಿಂದ ಸರ್ವೋತ್ಛ ನ್ಯಾಯಾಲದ ತೀರ್ಪಿನಿಂದ 524 ಮೀ. ಎತ್ತರದ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದ ಗೇಟುಗಳನ್ನು ಕತ್ತರಿಸಿ 519.60 ಮೀ.ಗೆ ಕಡಿತಗೊಳಿಸಲಾಗಿತ್ತು. ನಂತರ ನ್ಯಾ| ಬೃಜೇಶಕುಮಾರ ಅವರ ನೇತೃತ್ವದ ಎರಡನೇ ಕೃಷ್ಣಾನ್ಯಾಯಾ ಧಿಕರಣವು 519.60 ಮೀ.ಗಿರುವ ಜಲಾಶಯದ ಗೇಟುಗಳನ್ನು 524.256 ಮೀ.ಗೆ ಎತ್ತರಿಸಲು ಅನುಮತಿ ನೀಡಿದೆ. ನೀರು ಬಳಸಿಕೊಳ್ಳಲು ಕೆಲವು ನಿರ್ಬಂಧಗಳನ್ನು ಹಾಕಲಾಗಿದೆ. ಇದರಿಂದ ಜಲಾಶಯದ ಗೇಟುಗಳನ್ನು ಎತ್ತರಿಸಲು ರಾಜ್ಯ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ.

ಇನ್ನು ಜಲಾಶಯದ ನೀರಿನ ಸಂಗ್ರಹದ ಬಗ್ಗೆ ಕೇಂದ್ರೀಯ ಜಲ ಆಯೋಗದ ನೇತೃತ್ವದಲ್ಲಿ ನೀರು ನಿರ್ವಹಣಾ ಸಮಿತಿಯನ್ನು ಮೂರು ರಾಜ್ಯಗಳ ಸದಸ್ಯರುಗಳನ್ನೊಳಗೊಂಡು ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಇದರಿಂದ ಜಲಾಶಯ ಎತ್ತರಿಸಿದರೂ ಯಾವುದೇ ತೊಂದರೆಯಿಲ್ಲ.

522 ಮೀ.ಗೆ ಎತ್ತರಿಸಿ: ಆಲಮಟ್ಟಿ ಶಾಸ್ತ್ರಿ ಜಲಾಶಯವನ್ನು 519.60 ಮೀ.ದಿಂದ 524.256 ಮೀ.ಗೆ ಎತ್ತರಿಸುವುದರಿಂದ ಭೂ ಸ್ವಾ ಧೀನ ಹಾಗೂ ಮುಳುಗಡೆ ಪುನರ್ವಸತಿ ಮತ್ತ ಪುನರ್‌ ನಿರ್ಮಾಣ ಸೇರಿದಂತೆ ಸುಮಾರು 1 ಲಕ್ಷ ಕೋಟಿ. ರೂ. ಬೇಕಾಗುತ್ತವೆ. ಇದರಿಂದ ಸಮಯವೂ ಗತಿಸಲಿದೆ, ಅಲ್ಲದೇ ಮಾರುಕಟ್ಟೆ ದರವೂ ಏರಿಕೆಯಾಗುತ್ತದೆ. 2013ರ ಭೂ ಸ್ವಾ ಧೀನ ಕಾಯ್ದೆಯನ್ವಯ ಸಂತ್ರಸ್ತರಿಗೆ ಪರಿಹಾರ ನೀಡಲೂ ನಿರ್ಮಾಣದ ವೆಚ್ಚ ಏರಿಕೆಯಾಗಲಿದೆ.

ಜಲಾಶಯವನ್ನು 524ರ ಬದಲಾಗಿ 522 ಮೀ.ಗೆ ಎತ್ತರಿಸುವುದರಿಂದ ಜಲಾಶಯದಲ್ಲಿ 60 ಟಿಎಂಸಿ ಅಡಿವರೆಗೂ ನೀರು ಸಂಗ್ರಹವಾಗಲಿದ್ದು, ಇದರಿಂದ ಸುಮಾರು 3.2 ಲಕ್ಷ ರೂ. ಹೆಕ್ಟೇರ್‌ ಪ್ರದೇಶ ನೀರಾವರಿಗೊಳಪಡಲಿದೆ. ಇದರಿಂದ 22 ಗ್ರಾಮಗಳನ್ನು 76 ಸಾವಿರ ಎಕರೆ ಭೂಮಿಯನ್ನು ಉಳಿಸಿಕೊಳ್ಳುವುದರೊಂದಿಗೆ ಹೆಚ್ಚಿನ ಆರ್ಥಿಕ ಹೊರೆಯಾಗದೆ ಕಾಲಮಿತಿಯಲ್ಲಿ ನೀರು ಬಳಸಿಕೊಳ್ಳಬಹುದಾಗಿದೆ. ಚಾಲ್ತಿಯಲ್ಲಿರುವ ನ್ಯಾ| ಆರ್‌.ಎಸ್‌. ಬಚಾವತ್‌ ಹಾಗೂ ನ್ಯಾ| ಬೃಜೇಶಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣಗಳು ನೀಡಿರುವ ತೀರ್ಪುಗಳು 2050 ಮೇ 31ಕ್ಕೆ ಮುಕ್ತಾಯಗೊಳ್ಳಲಿವೆ. ಮುಂದೆ ಹೊಸ ನ್ಯಾಯಾಧಿಕರಣಗಳಾಗಲಿ ಇಲ್ಲವೇ ಈಗಿರುವ ನಿಯಮಗಳನ್ನು ಮುಂದುವರಿಸಬಹುದಾಗಿದೆ. ಹೀಗಿರುವಾಗ ರಾಜ್ಯದ ಪಾಲಿನ ನೀರು ಬಳಸಿಕೊಳ್ಳಲು 29 ವರ್ಷಗಳು ಬಾಕಿಯುಳಿದಿವೆ. ಅಷ್ಟರೊಳಗಾಗಿ ಬರದ ನಾಡಿನ ಹಣೆಪಟ್ಟಿ ಅಂಟಿಸಿಕೊಂಡಿರುವ ಜಿಲ್ಲೆಗಳನ್ನು ಸಮಗ್ರವಾಗಿ ನೀರಾವರಿಗೊಳಪಡಿಸಲು ಮುಖ್ಯಮಂತ್ರಿಗಳು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾದು ನೋಡಬೇಕು.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.