ಲಕ್ಷಾನಟ್ಟಿ ಗ್ರಾಮ ಪಂಚಾಯಿತಿಗಿಲ್ಲ ಚುನಾವಣೆ
ಎರಡು ವರ್ಷ ಸಮೀಪಿಸಿದರೂ ನಡೆಯದ ಚುನಾವಣೆ ; ಲೋಕಾಪುರ ಪಪಂಗೆ ಹಳ್ಳಿಗಳ ಸೇರ್ಪಡೆಯಿಂದ ವಿಳಂಬ
Team Udayavani, Jun 13, 2022, 11:04 AM IST
ಮುಧೋಳ: ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆದು ಅರ್ಧ ಅವಧಿ ಸಮೀಪಿಸುತ್ತ ಬಂದರೂ ತಾಲೂಕಿನ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿಗೆ ಮಾತ್ರ ಇದೂವರೆಗೂ ಚುನಾವಣೆ ಭಾಗ್ಯ ಕೂಡಿ ಬಂದಿಲ್ಲ.
ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಪಂಚಾಯಿತಿ ಚುನಾವಣೆ ನಡೆಸಲಾಗುತ್ತದೆ. ಆದರೆ, ಹಲವು ತಾಂತ್ರಿಕ ಕಾರಣದಿಂದಾಗಿ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿಗೆ ಚುನಾವಣೆಯಾಗದ ಕಾರಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಹಳ್ಳಿಗಳ ಅಭಿವೃದ್ಧಿಗೆ ತೊಡಕುಂಟಾಗಿದೆ.
ಪಟ್ಟಣ ಪಂಚಾಯಿತಿಗೆ ಸೇರ್ಪಡೆಗೊಂಡ ಹಳ್ಳಿಗಳು: 2021ರಲ್ಲಿ ತಾಲೂಕಿನ ಲೋಕಾಪುರ ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿತು. ಈ ಪಟ್ಟಣ ಪಂಚಾಯಿತಿಗೆ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿದ್ದ ಎರಡು ಗ್ರಾಮಗಳು ಸೇರ್ಪಡೆಗೊಂಡಿದ್ದರಿಂದ ಇದೀಗ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ ಚುನಾವಣೆಗೆ ತೊಡಕುಂಟಾಗಿದೆ. ಲೋಕಾಪುರ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಪರಿಣಾಮ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿಯ ಸದಸ್ಯತ್ವ ಸಂಖ್ಯೆ ಕಡಿಮೆಯಾಯಿತು. ಇದರಿಂದ ಮೀಸಲಾತಿ ಸ್ಥಾನ ಹಂಚಿಕೆ ವಿಚಾರದಲ್ಲಿ ಗೊಂದಲ ಉಂಟಾಗುತ್ತಿರುವ ಕಾರಣ ಚುನಾವಣೆ ಪ್ರಕ್ರಿಯೆ ವಿಳಂಬವಾಗುತ್ತಿದೆ.
ಏಳು ಹಳ್ಳಿಗಳು: ಲೋಕಾಪುರ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರುವ ಮುನ್ನ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಕ್ಷಾನಟ್ಟಿ, ವರ್ಚಗಲ್ಲ, ಚೌಡಾಪುರ, ಜಾಲಿಕಟ್ಟಿ ಬಿ.ಕೆ., ಜಾಲಿಕಟ್ಟಿ ಕೆ.ಡಿ, ಪಾಲ್ಕಿಮಾನಿ, ನಾಗನಾಪುರ, ಬ್ಯಾಡರ ಅರಳಿಕಟ್ಟಿ, ಜೇಡರ ಅರಳಿಕಟ್ಟಿ ಹಳ್ಳಿಗಳು ಬರುತ್ತಿದ್ದವು. ಇದೀಗ ಜಾಲಿಕಟ್ಟಿ ಬಿ.ಕೆ. ಹಾಗೂ ಜಾಲಿಕಟ್ಟಿ ಕೆ.ಡಿ. ಗ್ರಾಮಗಳು ಲೋಕಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿವೆ. ಇದೀಗ 7 ಗ್ರಾಮಗಳನ್ನು ಒಳಗೊಂಡಿರುವ ಗ್ರಾಮ ಪಂಚಾಯಿತಿಗೆ ಆಡಳಿತ ಮಂಡಳಿಯಿಲ್ಲದೆ ಕೇವಲ ಅಧಿಕಾರಿಗಳ ಹುಕುಮಿನಂತೆ ಕಾರ್ಯನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸೀಟು ಹಂಚಿಕೆಯ ಗೊಂದಲ: 9 ಹಳ್ಳಿಗಳನ್ನು ಹೊಂದಿದ್ದ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ ಒಟ್ಟು 22 ಸ್ಥಾನಗಳನ್ನು ಒಳಗೊಂಡಿತ್ತು. ಇದೀಗ ಜಾಲಿಕಟ್ಟಿ ಕೆ.ಡಿ., ಹಾಗೂ ಜಾಲಿಕಟ್ಟಿ ಕೆ.ಬಿ. ಗ್ರಾಮಗಳು ಗ್ರಾಮ ಪಂಚಾಯಿತಿಯಿಂದ ಹೊರಬರುವ ಕಾರಣ ಮೀಸಲಾತಿ ವಿಂಗಡಿಸಿ ಸ್ಥಾನ ಹಂಚಿಕೆಯ ಗೊಂದಲದಿಂದ ಚುನಾವಣೆ ಕಾರ್ಯಕ್ಕೆ ಮಂಕು ಕವಿದಂತಾಗಿದೆ.
ಅಭಿವೃದ್ಧಿ ಕಾರ್ಯ ನಿಧಾನ: ಗ್ರಾಮ ಪಂಚಾಯಿತಿಗೆ ಆಡಳಿತ ಮಂಡಳಿ ನಿರ್ಮಾಣವಾಗದ ಕಾರಣ ಏಳು ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳು ಮಂದಗತಿಯಲ್ಲಿ ಸಾಗಿವೆ ಎಂಬುದು ಸ್ಥಳೀಯರ ಮಾತು. ಅಧಿ ಕಾರಿಗಳಿಗೆ ಸ್ಥಳೀಯ ಸದಸ್ಯರಿಗೆ ಸೂಕ್ತ ಮಾರ್ಗದರ್ಶನ ಸಿಕ್ಕರೆ ಅಭಿವೃದ್ಧಿಗೆ ಹೆಚ್ಚಿನ ವೇಗ ದೊರೆಯುತ್ತದೆ. ಆದ್ದರಿಂದ ಶೀಘ್ರ ಚುನಾವಣೆ ನಡೆದರೆ ಒಳ್ಳೆಯದು ಎನ್ನುತ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು.
ಲಕ್ಷಾನಟ್ಟಿ ಗ್ರಾಮ ಪಂಚಾಯತಿಯಲ್ಲಿ ಮೊದಲಿದ್ದ 2ಹಳ್ಳಿಗಳು ಲೋಕಾಪುರ ಪಟ್ಟಣ ಪಂಚಾಯಿತಿಗೆ ಸೇರ್ಪಡೆಗೊಂಡ ಹಿನ್ನೆಲೆ ಚುನಾವಣೆ ತಡವಾಗಿದೆ. ಸರ್ಕಾರದ ಮಟ್ಟದಲ್ಲಿ ನಿರ್ದೇಶನ ಬಂದ ಕೂಡಲೇ ಚುನಾವಣೆ ನಡೆಸುತ್ತೇವೆ. –ಕಿರಣ ಘೋರ್ಪಡೆ, ಆಡಳಿತಾಧಿಕಾರಿ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಕಾರ್ಯ ನಿರ್ವಾಹಕ ಅಧಿಕಾರಿ, ಮುಧೋಳ
ನಮ್ಮ ಗ್ರಾಮ ಪಂಚಾಯಿತಿ ಚುನಾವಣೆಗಿರುವ ಅಡತಡೆಗಳು ಶೀಘ್ರ ಬಗೆಹರಿದು ಚುನಾವಣೆ ನಡೆದರೆ ಆಡಳಿತ ಮಂಡಳಿಯಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಕ್ಕಂತಾಗುತ್ತದೆ. -ಬಾಬುಗೌಡ ಪಾಟೀಲ, ಗ್ರಾಪಂ ಮಾಜಿ ಸದಸ್ಯ, ಲಕ್ಷಾನಟ್ಟಿ
ಗೋವಿಂದಪ್ಪ ತಳವಾರ/ ಸಲೀಂ ಕೊಪ್ಪದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.