ವಿಜಯಪುರ-ಬೆಂಗಳೂರು ಫಾಸ್ಟ್ ಪ್ಯಾಸೆಂಜರ್ ರೈಲು ಬಿಡಿ
Team Udayavani, Jan 13, 2019, 12:04 PM IST
ಬಾಗಲಕೋಟೆ: ವಿಜಯಪುರ-ಬೆಂಗಳೂರು ಮಾರ್ಗದಲ್ಲಿರುವ ರೈಲಿನಲ್ಲಿ ನಿತ್ಯ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ತೊಂದರೆಯಾಗುತ್ತಿದೆ. ಕಾರಣ, ಈ ಮಾರ್ಗದಲ್ಲಿ ಹೊಸ ರೈಲು ಓಡಿಸಬೇಕು ಎಂದು ಕರ್ನಾಟಕ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್ ಖಾಜಿ ಒತ್ತಾಯಿಸಿದ್ದಾರೆ.
ಸಮಿತಿಯ ಪದಾಧಿಕಾರಿಗಳೊಂದಿಗೆ ಹುಬ್ಬಳ್ಳಿಯ ನೈರುತ್ಯ ರೈಲ್ವೆ ಸಹಾಯಕ ವಿಭಾಗೀಯ ವ್ಯವಸ್ಥಾಪಕ ಎಸ್.ಕೆ. ಝಾ, ವಿಭಾಗೀಯ ರೈಲು ಕಾರ್ಯ ವಿಭಾಗದ ವ್ಯವಸ್ಥಾಪಕ ಡಾ| ಕೃಷ್ಣಾ ರಡ್ಡಿ ಅವರನ್ನು ಭೇಟಿ ಮಾಡಿ, ಉತ್ತರ ಕರ್ನಾಟಕಕ್ಕೆ ರೈಲ್ವೆ ಸೇವೆ ಹಾಗೂ ರೈಲ್ವೆ ನಿಲ್ದಾಣಗಳಿಗೆ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಮನವಿ ಮಾಡಿದರು.
ಹುಬ್ಬಳ್ಳಿ-ನಿಜಾಮುದ್ದಿನ್ ರೈಲು ಗದಗ-ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತದೆ. ಇದನ್ನು ಸೋಲಾಪುರ-ಗದಗ (ಡೆಮೋ) ಬಳ್ಳಾರಿವರೆಗೂ ಮುಂದುವರಿಸಬೇಕು. ಬಾದಾಮಿ ರೈಲು ನಿಲ್ದಾಣದಲ್ಲಿ ಗದಗ-ಮುಂಬೆ„ ಸುಪರ್‌ಫಾಸ್ಟ್ ಸೇರಿದಂತೆ ಎಲ್ಲ ರೈಲುಗಳ ನಿಲುಗಡೆ ಮಾಡಬೇಕು. ಬಾಗಲಕೋಟೆ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಗದಗ ರೈಲು ನಿಲ್ದಾಣವನ್ನು ಬೆಂಗಳೂರಿನ ಯಶವಂತಪುರ ಮಾದರಿಯಲ್ಲಿ ನಿರ್ಮಿಸಬೇಕು. ಆಲಮಟ್ಟಿ, ಬಾಗಲಕೋಟೆ, ಬಾದಾಮಿ ಆದರ್ಶ ರೈಲು ನಿಲ್ದಾಣಕ್ಕೆ ತಕ್ಕಂತೆ ಸೌಲಭ್ಯ ಒದಗಿಸಬೇಕು. ಈ ರೈಲ್ವೆ ನಿಲ್ದಾಣಗಳನ್ನು ಆದರ್ಶ ರೈಲು ನಿಲ್ದಾಣ ಎಂದು ಘೋಷಣೆ ಮಾಡಿದರೂ, ಪ್ರಯಾಣಿಕರಿಗೆ ಕನಿಷ್ಠ ಸೌಲಭ್ಯಗಳೂ ಇಲ್ಲ. ಕಾರಣ, ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸೋಲಾಪುರ-ಮೈಸೂರ ಗೋಲಗುಂಬಜ್ ಎಕ್ಸ್‌ಪ್ರೆಸ್ ಬೆಂಗಳೂರು ನಗರಕ್ಕೆ ತಲುಪುವ ಏಕೈಕ ರೈಲು ಆಗಿದ್ದು ಜನದಟ್ಟಣೆಯಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಇನ್ನೊಂದು ಫಾಸ್ಟ್ ಪ್ಯಾಸೆಂಜರ್ ವಿಜಯಪುರ- ಗದಗ-ಹೊಸಪೇಟೆ-ಬಳ್ಳಾರಿ ಮಾರ್ಗ ಮುಖಾಂತರ ಬೆಂಗಳೂರಿಗೆ ತಲುಪುವ ದಿನನಿತ್ಯ ಸಂಚರಿಸುವ ರೈಲು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಗದಗ-ಸೋಲಾಪುರ ಮಾರ್ಗಕ್ಕೆ ಒಳಪಡುವ ಎಲ್ಲ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಮೂಲಭೂತ ಸೌಲಭ್ಯ, ಪ್ರಯಾಣಿಕರ ಭದ್ರತೆ ಕಾಪಾಡುವಲ್ಲಿ ರೈಲ್ವೆ ಇಲಾಖೆ ಸಂಪೂರ್ಣ ವಿಫಲ ಆಗಿರುವುದರಿಂದ ಯೋಗ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.