ಬೆಳಗಾವಿ ತಂಡದಿಂದ ಚಿರತೆ ಕಾರ್ಯಾಚರಣೆ
ಕುಂಬಾರಹಳ್ಳದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕ್ರಮ
Team Udayavani, Jun 2, 2021, 6:05 PM IST
ಜಮಖಂಡಿ: ಚಿರತೆ ಬಂಧನಕ್ಕೆ ಬೆಳಗಾವಿ ಜಿಲ್ಲೆಯಿಂದ ವಿಶೇಷ ಸುಸಜ್ಜಿತ ಅಸ್ತ್ರಗಳೊಂದಿಗೆ ಅರಣ್ಯ ಇಲಾಖೆ ರಕ್ಷಕರ ತಂಡ ಕುಂಬಾರಹಳ್ಳ ಗ್ರಾಮಕ್ಕೆ ಆಗಮಿಸಿದ್ದು, ಮಂಗಳವಾರ ರಾತ್ರಿಯಿಂದ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಹಶೀಲ್ದಾರ್ ಪ್ರಶಾಂತ ಚನಗೊಂಡ ಹೇಳಿದರು.
ತಾಲೂಕಿನ ಕುಂಬಾರಹಳ್ಳ ಗ್ರಾಮದ ನಿಂಗಪ್ಪ ಹೆಗಡೆ ಅವರ ತೋಟದಲ್ಲಿ ಮಂಗಳವಾರ ನಡೆದ ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿದ ಆವರು, ಚಿರತೆ ಬಂಧನಕ್ಕಾಗಿ ಅರಣ್ಯ ಇಲಾಖೆಯಿಂದ ಕಳೆದ 5 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. 7 ಸ್ವಯಂ ಚಾಲಿತ ಬೋನ್, 13 ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಚಿರತೆ ಸಿಸಿ ಕ್ಯಾಮೆರಾದಲ್ಲಿ ಕಾಣಿಸಿಕೊಂಡರು ಬೋನಿಗೆ ಬೀಳುತ್ತಿಲ್ಲ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಗ್ರಾಮಸ್ಥರು ವದಂತಿಗಳಿಗೆ ಕಿವಿಗೊಡಬಾರದು. ಅರಣ್ಯ ಇಲಾಖೆ ಚಿರತೆ ಬಂಧನಕ್ಕಾಗಿ ವಿಶೇಷ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ ಎಂದರು.
ವಲಯ ಅರಣ್ಯಾಧಿಕಾರಿ ಕೆ.ವಿಜಯ ಕುಮಾರ ಮಾತನಾಡಿ, ಚಿರತೆಯ ಬಂಧನ ಕಾರ್ಯಾಚರಣೆ ನಡೆದಿದ್ದು, ಎರಡು ದಿನದಿಂದ ಸಿಸಿ ಕ್ಯಾಮೆರಾದಲ್ಲಿ ಚಿರತೆ ದೃಶ್ಯ ಕಾಣುತ್ತಿಲ್ಲ. ಆದರೆ, ಚಿರತೆ ಹಜ್ಜೆ ಗುರುತುಗಳು ಪತ್ತೆಯಾಗಿವೆ. ಕಳೆದ 5 ದಿನಗಳಿಂದ ಕಾರ್ಯಾಚರಣೆ ಮುಂದುವರಿದಿದ್ದು, ಗ್ರಾಮಸ್ಥರು ಭಯಪಡಬಾರದು. ಮನೆಯಲ್ಲಿ ಸುರಕ್ಷಿತವಾಗಿ ಇದ್ದುಕೊಂಡು ಕಾರ್ಯಾಚರಣೆ ಸಹಕಾರ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ವೈ.ಎಚ್. ದ್ರಾಕ್ಷಿ, ಗ್ರಾಮ ಲೆಕ್ಕಾಧಿಕಾರಿ ಎಸ್. ಜೆ. ಮೆಟಗಾರ, ಗ್ರಾಮಸ್ಥರಾದ ರಾಜು ಮಾಳಿ, ಬಸವರಾಜ ಮರನೂರ, ನಾಗಪ್ಪ ಹೆಗಡೆ, ರಾಮು ಕಡಕೋಳ, ಸದಾಶಿವ ಗೊಂಗಗೋಳ ಇದ್ದರು. 5ನೇ ದಿನದ ಕಾರ್ಯಾಚರಣೆ: ತಾಲೂಕಿನ ಕುಂಬಾರಹಳ್ಳ ಗ್ರಾಮದ ಹೆಗಡೆ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡಿರುವ ಚಿರತೆ ಸತತ 5 ದಿನಗಳ ಕಾರ್ಯಾಚರಣೆಯಲ್ಲಿ ಬೋನಿಗೆ ಬೀಳುತ್ತಿಲ್ಲ. ಚಿರತೆ ಬಂಧನಕ್ಕಾಗಿ ಅರಣ್ಯ ಇಲಾಖೆಯವರು ಸ್ವಯಂ ಚಾಲಿತ 7 ಬೋನ್‌ಗಳನ್ನು ಇರಿಸಿದ್ದಾರೆ.
ಚಿರತೆ ಸಂಚರಿಸಬಹುದಾದ ಎಲ್ಲ ರಸ್ತೆಗಳಲ್ಲಿ 13 ಸಿಸಿ ಕ್ಯಾಮರಾ ಅಳವಡಿ ಸಲಾಗಿದೆ. ಮೂರು ದಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಚಿರತೆ, ಕಳೆದ ಎರಡು ದಿನಗಳಲ್ಲಿ ಸಿಸಿ ಕ್ಯಾಮೆರಾದಲ್ಲಿ ಚಿರೆತೆ ಸೆರೆಯಾಗಿಲ್ಲ. ಆದರೆ, ಗದ್ದೆಗಳಲ್ಲಿ, ರಸ್ತೆಗಳಲ್ಲಿ ಮಾತ್ರ ಹೆಜ್ಜೆ ಗುರುತು ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.