ಎಲ್ಲರೂ ಶಿಕ್ಷಣದ ಮಹತ್ವ ಅರಿಯಲಿ: ಕೆ.ಎಂ. ಜಾನಕಿ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು
Team Udayavani, Jan 1, 2024, 3:39 PM IST
ಉದಯವಾಣಿ ಸಮಾಚಾರ
ಅಮೀನಗಡ: ಎಲ್ಲರೂ ಕೂಡಾ ಶಿಕ್ಷಣದ ಮಹತ್ವ ಅರಿತು, ಎಲ್ಲರಿಗೂ ಕೂಡಾ ಸಮಾನ ಅವಕಾಶ ಸಿಕ್ಕಾಗ ಸಮಸಮಾಜದ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಹೇಳಿದರು.
ಪಟ್ಟಣದ ಸಂಗಮೇಶ್ವರ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಮತ್ತು ಆಯ್.ಟಿ.ಆಯ್ ಕಾಲೇಜು ಸಹಯೋಗದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಕುಟುಂಬ, ಸಮಾಜ, ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಉತ್ತಮವಾದ ವಾತಾವರಣ, ಸಂಸ್ಕಾರ ಕಲ್ಪಿಸಿಕೊಟ್ಟಾಗ, ಉತ್ತಮ ಪ್ರಜೆಗಳನ್ನು ಸಮಾಜಕ್ಕೆ
ಕೊಡಬಹುದು ಎಂದರು.
ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿ ಆಗಾಧವಾದ ಶಕ್ತಿ ಇರುತ್ತದೆ, ಅದನ್ನು ಗುರುತಿಸುವುದು,
ಪ್ರೋತ್ಸಾಹಿಸುವುದು ಅವರಿಗೆ ಎಲ್ಲ ರೀತಿಯ ಸಹಕಾರ ನೀಡುವುದು ತಂದೆ, ತಾಯಿಗಳ ಕರ್ತವ್ಯ. ಹಾಗಾಗಿ ತಾವು ತಮ್ಮ ಶಕ್ತಿ ಮೀರಿ ಮಕ್ಕಳಿಗೆ ಸಂಸ್ಕಾರ, ಶಿಕ್ಷಣ ನೀಡಬೇಕು. ಆಗ ಮಗು ಒಳ್ಳೆಯ ವಿದ್ಯಾವಂತ ನಾಗರಿಕ ಆಗಲು ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ ಪ್ರಭುಶಂಕರೇಶ್ವರ ಗಚ್ಚಿನಮಠದ ಪೀಠಾಧಿಪತಿ ಶಂಕರರಾಜೇಂದ್ರ ಸ್ವಾಮೀಜಿ ಅವರಿಗೆ ಪುಸ್ತಕಗಳ ಮೂಲಕ ತುಲಾಭಾರ ಸೇವೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜಿಲ್ಲಾಧಿಕಾರಿ ಕೆ.ಎಂ.
ಜಾನಕಿ, ಜಿಪಂ ಸಿಇಒ ಶಶಿಧರ ಕುರೇರ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ರವೀಂದ್ರ ಕಲಬುರ್ಗಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ವಿಶ್ವನಾಥ ವಂಶಾಕೃತಮಠ ಅವರನ್ನು ಸನ್ಮಾನಿಸಲಾಯಿತು. ಸಿಬ್ಬಂದಿಗಳ ವತಿಯಿಂದ ಪ್ರಾಚಾರ್ಯ ಆರ್.ಜಿ.ಸನ್ನಿ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
ಪ್ರಭುಶಂಕರೇಶ್ವರ ಗಚ್ಚಿನಮಠದ ಪೀಠಾಧಿಪತಿ ಶಂಕರರಾಜೇಂದ್ರ ಸ್ವಾಮೀಜಿ, ಬೆಳಗಾವಿ ನಾಗನೂರ ರುದ್ರಾಕ್ಷಿಮಠದ ಡಾ| ಅಲ್ಲಮಪ್ರಭು ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಗಮೇಶ್ವರ ಆಂಗ್ಲ ಮಾಧ್ಯಮ ಶಾಲೆ ಪ್ರಾಚಾರ್ಯ ಆರ್.ಜಿ.ಸನ್ನಿ ಅಧ್ಯಕ್ಷತೆ ವಹಿಸಿದ್ದರು. ಚೇರಮನ್ನರಾದ ಆಯ್. ಎಸ್.ಲಿಂಗದಾಳ, ಆರ್.ಕೆ.ಗೌಡರ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ವಿಶ್ವನಾಥ ವಂಶಾಕೃತಮಠ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ರವೀಂದ್ರ ಕಲಬುರ್ಗಿ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.