ರೈತ ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿ

•ದೇಶದ ಅಭಿವೃದ್ಧಿಯಲ್ಲಿ ಕೃಷಿ ಕೊಡುಗೆ ಅಪಾರ •ನೂತನ ತಾಂತ್ರಿಕತೆ ಅಳವಡಿಸಿಕೊಳ್ಳಿ

Team Udayavani, May 31, 2019, 2:28 PM IST

bagalkote-tdy-3..

ಬೀಳಗಿ: ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ನಡೆದ ಕೃಷಿ ಅಭಿಯಾನಕ್ಕೆ ಶಾಸಕ ಮುರುಗೇಶ ನಿರಾಣಿ ಚಾಲನೆ ನೀಡಿದರು

ಬೀಳಗಿ: ಕೃಷಿ ಬೆಳೆಗಳ ಇಳುವರಿ, ಉತ್ಪಾದನೆ ವೃದ್ಧಿ ಪಡಿಸಲು ಹಾಗೂ ಕೃಷಿಯಲ್ಲಿ ನೂತನ ತಾಂತ್ರಿಕತೆ ಅಳವಡಿಸಿಕೊಂಡು ಕಡಿಮೆ ಖರ್ಚಿನಲ್ಲಿ ಅಧಿಕ ಲಾಭ ಗಳಿಸಲು ಮತ್ತು ಸುಸ್ಥಿರ ಕೃಷಿ ಅಭಿವೃದ್ಧಿಪಡಿಸಲು ಕೃಷಿ ಇಲಾಖೆ ಎಲ್ಲ ವರ್ಗದ ರೈತರಿಗಾಗಿ ಹಲವಾರು ಪ್ರಮುಖ ಯೋಜನೆಗಳನ್ನು ತಂದಿದೆ. ಕೃಷಿ ಯೋಜನೆ ಸದುಪಯೋಗ ಪಡಿಸಿಕೊಳ್ಳುವ ಮೂಲಕ ರೈ‌ರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಮುರುಗೇಶ ನಿರಾಣಿ ಹೇಳಿದರು.

ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೃಷಿ ಅಭಿಯಾನ ವಾಹನವು ನಾಲ್ಕು ದಿನಗಳ ಕಾಲ, ತಾಲೂಕಿನ ಎಲ್ಲ 24 ಗ್ರಾಪಂಗಳಿಗೆ ಸಂಚರಿಸಲಿದೆ. ವಾಹನದಲ್ಲಿ ವಿವಿಧ ಇಲಾಖೆಯ ಕ್ಷೇತ್ರ ಮಟ್ಟದ ಸಿಬ್ಬಂದಿಗಳಿದ್ದು, ತೋಟಗಾರಿಕೆ, ಕೃಷಿ ಹಾಗೂ ಪಶುಸಂಗೋಪನೆ ಕುರಿತು ರೈತರಿಗೆ ಸಮಗ್ರ ಮಾಹಿತಿ ಒದಗಿಸಲಿದ್ದಾರೆ. ದೇಶದ ಅಭಿವೃದ್ಧಿಗೆ ಕೃಷಿ ಕ್ಷೇತ್ರದ ಪಾಲು ಬಹಳಷ್ಟಿದೆ. ಮೊದಲು ರೈತರು ಸಂಕಷ್ಟದಿಂದ ಹೊರಬರಬೇಕು ಎನ್ನುವ ಧ್ಯೇಯ ಸರಕಾರದ್ದಾಗಿದೆ ಎಂದರು.

ತಾಲೂಕಿನ ಎಲ್ಲ ಸವಳು-ಜವಳು ಭೂಮಿಯನ್ನು ಕೃಷಿ ಯೋಗ್ಯ ಭೂಮಿಗಳನ್ನಾಗಿ ಪರಿವರ್ತಿಸಲು ಸರಕಾರದಿಂದ ಹೆಚ್ಚಿನ ಅನುದಾನ ಬಳಕೆ ಮಾಡಿಕೊಳ್ಳಲು ಆದ್ಯತೆ ನೀಡಲಾಗುತ್ತಿದೆ. ಗಲಗಲಿ ಬ್ರಿಜ್‌ ಕಂ ಬ್ಯಾರೇಜ್‌ ಎತ್ತರಿಸುವ ಕಾಮಗಾರಿ ಭರದಿಂದ ಸಾಗಿದೆ. ಈ ಬ್ರಿಜ್‌ ಕಂ ಬ್ಯಾರೇಜ್‌ನಿಂದ ಎರಡು ಕೊಳವೆ ಮಾರ್ಗಗಳ ಮೂಲಕ ತಾಲೂಕಿನ ವಿವಿಧ ಕೆರೆ ತುಂಬುವ ಯೋಜನೆ ಹಾಕಿಕೊಳ್ಳಲಾಗಿದೆ. ಬೀಳಗಿ ಕೆರೆ ತುಂಬುವ ಯೋಜನೆ ಪೂರ್ಣಗೊಂಡಿದೆ. ಬೇಸಿಗೆ ಕಾರಣದಿಂದ ಕೆರೆಗೆ ನೀರು ಬಂದಿಲ್ಲ. ಮುಗಿದ ಕಾಮಗಾರಿ ಕುರಿತು ಕೆಲ ಗೆಳೆಯರು ಪ್ರತಿಭಟನೆ ಹಾಕಿಕೊಳ್ಳುವುದು ಸಮಂಜಸವಲ್ಲ. ಬೇರೆ ಅಭಿವೃದ್ಧಿ ಕಾಮಗಾರಿಗಳು ಆಗಬೇಕಿದ್ದರೆ ನಮ್ಮ ಗಮನ ಸೆಳೆಯಬಹುದು. ಕೃಷಿ ಕುರಿತು ತಿಳಿವಳಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಉಪಕೃಷಿ ನಿರ್ದೇಶಕ ಡಾ| ಎಲ್.ಐ.ರೂಢಗಿ, ಎಡಿಎ ಪರಶುರಾಮ ಗಣಿ, ಕೃಷಿ ಇಲಾಖೆಯ ಎಂ.ಎಚ್. ಉಳ್ಳಾಗಡ್ಡಿ, ಎಸ್‌.ಎಂ.ಕಳಸದ, ಎಸ್‌.ಎಸ್‌. ಕಟ್ಟಿಮನಿ, ಎಸ್‌.ಬಿ. ಸಣಮನಿ, ಬಿಜೆಪಿ ಮುಖಂಡ ಮಲ್ಲಪ್ಪ ಶಂಭೋಜಿ, ವಿಠuಲ ಬಾಗೇವಾಡಿ, ರಾಮಣ್ಣ ಕಾಳಪ್ಪಗೋಳ ಇದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.