ಮಹಿಳೆಯರು ಲಿಂಗ ತಾರತಮ್ಯ ಮೀರಿ ಬೆಳೆಯಲಿ

ಕಾನೂನು ವ್ಯವಸ್ಥೆ ಎಷ್ಟೇ ಸುಧಾರಿಸಿದರೂ ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚುತ್ತಿವೆ.

Team Udayavani, Jan 8, 2022, 3:26 PM IST

ಮಹಿಳೆಯರು ಲಿಂಗ ತಾರತಮ್ಯ ಮೀರಿ ಬೆಳೆಯಲಿ

ಬಾಗಲಕೋಟೆ: ಮಹಿಳೆಯರು ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕವಾಗಿ ಎಲ್ಲ ರೀತಿಯಿಂದಲೂ ಸಮಾನತೆ ಸಾಧಿಸುವ ಅಗತ್ಯವಿದೆ. ಈಚೆಗೆ ಮಹಿಳೆಯರನ್ನು ನೋಡುವ ದೃಷ್ಟಿಕೋನ ಬದಲಾಗಿದೆ ಎಂದು ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಹೇಳಿದರು.

ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಘಟಕ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಲಿಂಗ ತಾರತಮ್ಯ ಮೀರಿ ಮಹಿಳೆಯರು ಬೆಳೆಯಬೇಕು. ಬಾಲ್ಯ ವಿವಾಹಗಳು ಹೆಚ್ಚುತ್ತಲೆ ಇವೆ. ಉಚಿತ ಶಿಕ್ಷಣ ಇದ್ದರೂ ಸಹ ಸಾಕಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಬಾಲ ಕಾರ್ಮಿಕರು ಹೆಚ್ಚುತ್ತಿದ್ದಾರೆ. ಮಹಿಳೆ ಎಂತಹ ಉನ್ನತ ಹುದ್ದೆಯಲ್ಲಿದ್ದರೂ ಮನೆಗೆಲಸ ಮಾಡಲೇಬೇಕಾದ ಅನಿವಾರ್ಯತೆ ಇದೆ. ಕಾನೂನು ವ್ಯವಸ್ಥೆ ಎಷ್ಟೇ ಸುಧಾರಿಸಿದರೂ ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚುತ್ತಿವೆ. ಹೆಣ್ಣುಮಕ್ಕಳಿಗಾಗಿ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ.
ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡುಮುಂದೆ ಬರಬೇಕು ಎಂದರು.

ಭಾವನಾತ್ಮಕವಾಗಿ ಹೆಣ್ಣು ಹೆಚ್ಚು ಬುದ್ದಿವಂತಳು ಮತ್ತು ಸೂಕ್ಷ್ಮಸಂವೇದನೆ ಉಳ್ಳವಳು. ಎಲ್ಲ ಕ್ಷೇತ್ರಗಳಲ್ಲೂ ನಮಗೆ ಅವಕಾಶಗಳಿವೆ ಅವುಗಳನ್ನು ಬಳಸಿಕೊಳ್ಳಬೇಕು. ಸಮಸ್ಯೆಗಳು ಎಲ್ಲರಿಗೂ, ಎಲ್ಲ ವೃತ್ತಿಯಲ್ಲೂ ಸಾಮಾನ್ಯವೇ ಆದರೆ ಅದೆಲ್ಲವನ್ನು ಮೀರಿ ಜಯಿಸುವ ಶಕ್ತಿ ನಮಗೆ ಬರಬೇಕು ಎಂದರು. ಪ್ರಾಚಾರ್ಯ ಡಾ| ವಿ.ಎಸ್‌. ಕಟಗಿಹಳ್ಳಿಮಠ ಅಧ್ಯಕ್ಷತೆ ವಹಿಸಿದ್ದರು. ಶಾರದಾ ಪವಾರ ಪ್ರಾರ್ಥಿಸಿದರು. ಮಹಿಳಾ ಸಬಲೀಕರಣ ಘಟಕದ ಸಂಯೋಜಕ ಡಾ| ಎಂ.ಎಸ್‌. ಚವ್ಹಾಣ ಪರಿಚಯಿಸಿದರು. ಪ್ರೊ| ಜೆ.ಎಸ್‌. ಲಾಗಲೋಟಿ ನಿರೂಪಿಸಿದರು. ಪ್ರೊ| ಡಿ.ಎಚ್‌. ಪಾಟೀಲ ವಂದಿಸಿದರು. ಪ್ರೊ| ಎಂ.ಎಂ. ಹಿರೇಮಠ, ಪ್ರೀತಿ ಬಿರಾದಾರ, ವೀಣಾ ಕಲ್ಮಠ, ವಿ.ಎಸ್‌. ಸಾಲಿಮಠ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.