ಲಿಮ್ಕಾ ದಾಖಲೆ ಸೇರಿತು ರಂಗೋಲಿ ಸ್ಪರ್ಧೆ
Team Udayavani, Nov 27, 2017, 11:19 AM IST
ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್‌ಗಳಲ್ಲಿ ಒಂದಾದ ಇಲ್ಲಿನ ಬಸವೇಶ್ವರ ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆ, ಲಿಮ್ಕಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲಾಗಿದೆ.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ರಂಗೋಲಿ ಸ್ಪರ್ಧೆ ನಡೆಸಲಾಯಿತು. ಬಸವೇಶ್ವರ ಬ್ಯಾಂಕ್‌ನಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ನೇಮಿಸಿ, ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬ ಮಹಿಳೆ, ಮಕ್ಕಳು, ಯುವಕರಿಗೆ ರಂಗೋಲಿ ಒದಗಿಸಲಾಯಿತು. ಜತೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಂಗೋಲಿ ಬಿಡಿಸಲು ಪ್ರತಿಯೊಬ್ಬರಿಗೂ ಒಂದೊಂದು ಸ್ಥಳ ನಿಗದಿ ಮಾಡಲಾಗಿತ್ತು. 45 ನಿಮಿಷಗಳು ಮಾತ್ರ ರಂಗೋಲಿ ಬಿಡಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಒಬ್ಬರು, ಒಂದಕ್ಕೂ ಹೆಚ್ಚು ರಂಗೋಲಿ ಬಿಡಿಸಲು ಅವಕಾಶ ಕಲ್ಪಿಸಲಾಗಿತ್ತು. ಕೆಲವು ಮಹಿಳೆಯರು ಒಂದರಿಂದ 4ರವರೆಗೂ ರಂಗೋಲಿ ಬಿಡಿಸಿದರು. ಸಚಿವೆ ಉಮಾಶ್ರೀ ರಂಗೋಲಿ ಬಿಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಹಿಂದೆ, ಬೆಳಗಾವಿಯಲ್ಲಿ 45 ನಿಮಿಷದಲ್ಲಿ 3,500 ರಂಗೋಲಿ ಬಿಡಿಸಿದ್ದು ಲಿಮ್ಕಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.