ಸಾಹಿತಿಗಳು ಸಾಂಸ್ಕೃತಿಕ ರಾಯಭಾರಿಗಳು: ಶಿರೋಳ
Team Udayavani, Aug 7, 2020, 1:58 PM IST
ಬೀಳಗಿ: ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಿಸುವಲ್ಲಿ ಸಾಹಿತಿಗಳ ಪಾತ್ರ ಹಿರಿದಾಗಿದೆ. ಕೃತಿಗಳು ಸಮಾಜದ ಮಗ್ಗುಲಗಳನ್ನು ಪರಿಚಯಿಸುತ್ತವೆ. ಸಾಹಿತಿಗಳು ಸಾಂಸ್ಕೃತಿಕ ರಾಯಭಾರಿಗಳು. ಸಾಹಿತಿಗಳನ್ನು ಗುರುತಿಸಿ-ಗೌರವಿಸುವುದು ಹೆಮ್ಮೆಯ ಸಂಗತಿ ಎಂದು ಸಾಹಿತಿ ಸಿದ್ಧರಾಮ ಶಿರೋಳ ಹೇಳಿದರು.
ಅನಗವಾಡಿ ಗ್ರಾಮದ ಬಿ.ಎನ್. ಖೋತ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾ-ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಆಯೋಜಿಸಿದ್ದ 2019ನೇ ಸಾಲಿನ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಾಡಿನ ನೆಲ-ಜಲ, ಸಂಸ್ಕೃತಿ-ಪರಂಪರೆ ಉಳಿವಿಗಾಗಿ ಕಸಾಪ ಕಂಕಣಬದ್ಧವಾಗಿದೆ ಎಂದರು. ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಖೋತ ಸಮಾರಂಭ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಪ್ರತಿಭೆಗಳನ್ನು ಗುರುತಿಸಿ-ಗೌರವಿಸುವುದು ಸಾಹಿತ್ಯ ಲೋಕದ ಶ್ರೀಮಂತಿಕೆ ಹೆಚ್ಚಿಸುತ್ತದೆ ಎಂದರು.
ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಗುರುರಾಜ ಲೂತಿ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಶ್ರೀಶೈಲ ಕರಿಶಂಕರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಭಾವಂತ ಲೇಖಕರಿಗೆ ಪ್ರಶಸ್ತಿಗಳು ದೊರೆತಿವೆ. ಪ್ರತಿಭಾವಂತರನ್ನು ಗುರುತಿಸಿ ಸನ್ಮಾನಿಸಿರುವುದು ಅಭಿನಂದನಾರ್ಹ ಎಂದರು. ಕಸಾಪ ತಾಲೂಕಾಧ್ಯಕ್ಷ ಡಿ.ಎಂ. ಸಾಹುಕಾರ ಮಾತನಾಡಿದರು. ಇದೇ ವೇಳೆ ಲೇಖಕ ಎಸ್.ಎಸ್. ಹಳ್ಳೂರ ಅವರ ಕನಸಿನ ದೀಪಗಳು, ಕಥೆಗಾರ ಎಚ್.ಎಂ. ಜುಟ್ಟಲ ಅವರ ಜೇನುಗೂಡು ಕೃತಿಗಳನ್ನು ಕಥೆಗಾರ ಪ್ರೊ| ಅಬ್ಟಾಸ ಮೇಲಿನಮನಿ ಬಿಡುಗಡೆಗೊಳಿಸಿದರು.
ಇದೇ ಸಂದರ್ಭದಲ್ಲಿ ಲೇಖಕ ಸೋಮಲಿಂಗ ಬೇಡರ, ಚಂದ್ರಕಾಂತ ತಾಳಿಕೋಟಿ, ಸಿ.ಎಂ. ಜೋಶಿ, ಸುಮಿತ ಮೇತ್ರಿ, ಮಹಾದೇವ ಬಸರಕೋಡ, ಎಚ್.ಎಂ. ಜುಟ್ಟಲ, ಬಸವರಾಜ ಮಠ, ಡಿ.ಎಂ. ಸಾಹುಕಾರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಜಿ.ಕೆ. ತಳವಾರ, ಪ್ರಾಚಾರ್ಯೆ ಸಾವಿತ್ರಿ ಬೆಕ್ಕೇರಿ, ಸಾಹಿತಿ ಎಸ್.ಎಸ್. ಹಳ್ಳೂರ ಇದ್ದರು. ಬಸವರಾಜ ಡಾವಣಗೇರಿ ನಿರೂಪಿಸಿದರು. ಜಗದೀಶ ಖೋತ ಸ್ವಾಗತಿಸಿದರು. ಶಿವಾನಂದ ಹಿರೇಮಠ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.