ಮೆಗಾ ಲೋಕ ಅದಾಲತ್: ಸಂಧಾನ ಮೂಲಕ 370 ಪ್ರಕರಣಗಳು ಇತ್ಯರ್ಥ
Team Udayavani, Dec 18, 2021, 6:38 PM IST
ರಬಕವಿ-ಬನಹಟ್ಟಿ : ರಾಜೀ ಸಂಧಾನ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಲೋಕ ಅದಾಲತ್ ಸಹಕಾರಿಯಾಗಲಿದೆ ಎಂದು ಬನಹಟ್ಟಿಯ ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.
ಶನಿವಾರ ಬನಹಟ್ಟಿಯ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವಾ ಪ್ರಾಧಿಕಾರ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನ ಮೇರೆಗೆ ಲೋಕ ಅದಾಲತ್ ಆಯೋಜಿಸಲಾಗಿದೆ. ಅದಾಲತ್‌ನಲ್ಲಿ ಅತಿ ಹೆಚ್ಚು ಸಿವಿಲ್ ಪ್ರಕರಣಗಳಾದ ಆಸ್ತಿ, ಜಮೀನು, ಮನೆ ಮಾರಾಟ, ಪ್ರಮುಖವಾಗಿ ಚೆಕ್ ಬೌನ್ಸ್ಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಮೋಟಾರ ವಾಹನ ಅಪಘಾತ ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ ಎಂದರು.
ಕ್ಷಕಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುತ್ತಿರುವದು ವಿಶೇಷವಾಗಿತ್ತು. ಹಿರಿಯ ದಿವಾಣಿ ನ್ಯಾಯಾಲಯದಲ್ಲಿ 150 ಪ್ರಕರಣಗಳ ಪೈಕಿ 70 ಪ್ರಕರಣಗಳು ರಾಜೀ ಸಂಧಾನವಾದರೆ, ದಿವಾಣಿ ನ್ಯಾಯಾಲಯದಲ್ಲಿ 315 ಪ್ರಕರಣಗಳಲ್ಲಿ 300 ಪ್ರಕರಣಗಳು ರಾಜೀ ಸಂಧಾನವಾಗಿರುವದು ವಿಶೇಷವಾಗಿತ್ತು.
2011-12 ರಿಂದ ಪ್ರಕರಣಗಳು ನಡೆಯುತ್ತಿದ್ದವು. ಅಂಥಹ ಪ್ರಕರಣಗಳಿಗೆ ರಾಜೀಯಾಗಿರುವದು ವಿಶೇಷ. ಅಲ್ಲದೆ ಕೋವಿಡ್‌ದಿಂದ ಜನತೆ ಸಮಸ್ಯೆ ಎದುರಿಸುತ್ತಿದ್ದು, ಇವೆಲ್ಲವುಗಳ ಸಮಸ್ಯೆಯಿಂದ ಕೆಲ ಪ್ರಕರಣಗಳಲ್ಲಿ ಮಾನವೀಯತೆ ಎದ್ದು ಕಾಣುತ್ತಿತ್ತು ಎಂದು ತಿಳಿಸಿದರು.
ಇಂದು ನಡೆದ ಅದಾಲತ್‌ನಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಸಹಕಾರಿ ಸಂಘಗಳಿಗೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣಗಳೇ ಕೇಳಿ ಬಂದು ಬಹುತೇಕ ಪ್ರಕರಣಗಳಿಗೆ ರಾಜೀ ಸಂಧಾನದ ಮೂಲಕ ಅದಾಲತ್‌ನ ಮಹತ್ವ ಸಾರುತ್ತಿದೆ ಎಂದು ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.
ನ್ಯಾಯಾಂಗ ಸಂಧಾನಕರಾಗಿ ಹಿರಿಯ ದಿವಾಣಿ ನ್ಯಾಯಾಧೀಶರಾದ ಕಿರಣಕುಮಾರ ವಡಗೇರಿ ಹಾಗು ದಿವಾಣಿ ನ್ಯಾಯಾಧೀಶೆ ಶುಷ್ಮಾ ಟಿ.ಸಿ. ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಸಿ. ಮಸಳಿ, ವಕೀಲರ ಸಂಘದ ಅಧ್ಯಕ್ಷ ಸಾಗರ ಕುಲಕರ್ಣಿ, ಕೆ.ಜಿ. ಸಾಲಗುಡೆ, ಸಾಗರ ಚವಜ, ಬಿ.ಎನ್. ಗುರವ, ರವೀಂದ್ರ ಸಂಪಗಾಂವಿ, ಸುಜಾತಾ ನಿಡೋಣಿ, ಅಬೀದ್ ಹಸನ್ ಗಾಡಬೋಲೆ, ಮುಕುಂದ ಕೋಪರ್ಡೆ, ಅಮುಲ್ ಬದಾಮಿಕರ, ಚನ್ನು ಮಾಲಾಪುರ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.